AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navjot Singh Sidhu ರಸ್ತೆ ಜಗಳ ಪ್ರಕರಣ: ಪಟಿಯಾಲ ನ್ಯಾಯಾಲಯಕ್ಕೆ ಶರಣಾದ ನವಜೋತ್ ಸಿಂಗ್ ಸಿಧು

1988ರ ರಸ್ತೆ ಜಗಳ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ಪ್ರಕಟಿಸಿತ್ತು.ಮನೆಯ ಸಮೀಪದಲ್ಲೇ ಇರುವ ಜಿಲ್ಲಾ ಕೋರ್ಟ್ ಗೆ ಸಿಧು ಬಂದಿದ್ದು ನವತೇಜ್ ಸಿಂಗ್ ಚೀಮಾ ಸೇರಿದಂತೆ ಕೆಲವು ಪಕ್ಷದ ನಾಯಕರು ಅವರ ಜತೆ ಇದ್ದರು ಎಂದು ಪಿಟಿಐ ವರದಿ ಮಾಡಿದೆ

Navjot Singh Sidhu ರಸ್ತೆ ಜಗಳ ಪ್ರಕರಣ: ಪಟಿಯಾಲ ನ್ಯಾಯಾಲಯಕ್ಕೆ ಶರಣಾದ ನವಜೋತ್ ಸಿಂಗ್ ಸಿಧು
ನವಜೋತ್ ಸಿಂಗ್ ಸಿಧು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:May 20, 2022 | 6:07 PM

Share

ದೆಹಲಿ: ಪಂಜಾಬ್ ಕಾಂಗ್ರೆಸ್​​ನ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು (Navjot Singh Sidhu) ಪಟಿಯಾಲ ನ್ಯಾಯಾಲಯದಲ್ಲಿ (Patiala court) ಶುಕ್ರವಾರ ಶರಣಾಗಿದ್ದಾರೆ. 1988ರ ರಸ್ತೆ ಜಗಳ (1988 road rage case) ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ಪ್ರಕಟಿಸಿತ್ತು. ಮನೆಯ ಸಮೀಪದಲ್ಲೇ ಇರುವ ಜಿಲ್ಲಾ ಕೋರ್ಟ್ ಗೆ ಸಿಧು ಬಂದಿದ್ದು, ನವತೇಜ್ ಸಿಂಗ್ ಚೀಮಾ ಸೇರಿದಂತೆ ಕೆಲವು ಪಕ್ಷದ ನಾಯಕರು ಅವರ ಜತೆ ಇದ್ದರು ಎಂದು ಪಿಟಿಐ ವರದಿ ಮಾಡಿದೆ. ಎಸ್​​ಯುವಿಯಲ್ಲಿ ಚೀಮಾ ಅವರೇ ಸಿಧುವನ್ನು ಕೋರ್ಟ್​​ಗೆ ಕರೆತಂದಿದ್ದಾರೆ. ಕೆಲವು ಬೆಂಬಲಿಗರು ಶುಕ್ರವಾರ ಬೆಳಗ್ಗೆ ಸಿಧು ನಿವಾಸಕ್ಕೆ ತಲುಪಿದ್ದರು. ಏತನ್ಮಧ್ಯೆ ಸಿಧು ಪತ್ನಿ ನವಜೋತ್ ಕೌರ್ ಸಿಧು ಗುರುವಾರ ರಾತ್ರಿಯೇ ಪಟಿಯಾಲದಲ್ಲಿರುವ ಮನೆಗೆ ಬಂದಿದ್ದಾರೆ. ಕೆಲವೊಂದು ಆರೋಗ್ಯ ಸಮಸ್ಯೆಗಳಿವೆ. ಕೋರ್ಟ್​​ಗೆ ಶರಣಾಗಲು ಕಾಲಾವಕಾಶ ಬೇಕು ಎಂದು ಸಿಧು ಶುಕ್ರವಾರ ಬೆಳಗ್ಗೆ ಹೇಳಿದ್ದರು. ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಮುಖ್ಯನ್ಯಾಯಮೂರ್ತಿ ಎನ್ ವಿ ರಮಣ ಅವರಲ್ಲಿ ಈ ವಿಷಯ ಪ್ರಸ್ತಾಪಿಸಿ ಔಪಚಾರಿಕ ಮನವಿ ಸಲ್ಲಿಸಿ ಎಂದಿದ್ದರು.1988ರ ಡಿ.27ರಂದು ಪಟಿಯಾಲದಲ್ಲಿ ವೃದ್ಧರೊಬ್ಬರ ಮೇಲೆ ಸಿಧು ಹಲ್ಲೆ ನಡೆಸಿದ್ದರು. ಚಿಕಿತ್ಸೆ ಫಲಿಸದ ಕಾರಣ ವೃದ್ಧರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಧುಗೆ ನಿನ್ನೆ (ಮೇ 19) ಸುಪ್ರೀಂಕೋರ್ಟ್​ ನಿನ್ನೆ ಶಿಕ್ಷೆ ವಿಧಿಸಿತ್ತು. 34 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸುಪ್ರೀಂಕೋರ್ಟ್​ ಗುರುವಾರ ತೀರ್ಪು ನೀಡಿತ್ತು.

ಆಗ  25 ವರ್ಷದವರಾಗಿದ್ದ ಕ್ರಿಕೆಟಿಗನ ಈಗಿನ ದೈಹಿಕ ಆರೋಗ್ಯದಂತಹ ಕೆಲವು ಅಂಶಗಳು ಶಿಕ್ಷೆಯ ಹಂತದಲ್ಲಿ ಬಿಟ್ಟುಹೋಗಿರುವಂತೆ ಕಂಡುಬರುತ್ತವೆ ಎಂದು ಎಎಂ ಖಾನ್ವಿಲ್ಕರ್ ಮತ್ತು ಎಸ್.ಕೆ ಕೌಲ್ ಅವರ ನ್ಯಾಯಪೀಠ ಹೇಳಿತ್ತು.

ಏನಿದು ಪ್ರಕರಣ?

ಇದನ್ನೂ ಓದಿ
Image
Navjot Sidhu: ಶರಣಾಗಲು ಒಂದು ವಾರ ಸಮಯ ಕೇಳಿದ ನವಜೋತ್ ಸಿಂಗ್ ಸಿಧು
Image
Navjot Singh Sidhu 1988ರ ರಸ್ತೆ ಜಗಳ ಪ್ರಕರಣ: ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ
Image
ನವಜೋತ್​ ಸಿಂಗ್ ಸಿಧು ಬಿಟ್ಟು ಹೋದ ಜಾಗವನ್ನು ಇಮ್ರಾನ್ ಖಾನ್​ ತುಂಬಲಿ; ಪಾಕ್​ ಮಾಜಿ ಪ್ರಧಾನಿಯ ಮಾಜಿ ಪತ್ನಿಯಿಂದ ವ್ಯಂಗ್ಯ
Image
ರಾಜೀನಾಮೆ ಕೊಟ್ಟ ಬೆನ್ನಲ್ಲೇ ಕಾಂಗ್ರೆಸ್​​ಗೆ ಮುಜುಗರ ಉಂಟು ಮಾಡಿದ ನವಜೋತ್ ಸಿಂಗ್ ಸಿಧು; ಏನಿದು ಟ್ವೀಟ್ ಅರ್ಥ?

ಡಿಸೆಂಬರ್ 27, 1988 ರಂದು ಸಿಧು ಪಟಿಯಾಲ ನಿವಾಸಿ ಗುರ್ನಾಮ್ ಸಿಂಗ್ ಅವರೊಂದಿಗೆ ಪಾರ್ಕಿಂಗ್ ಸ್ಥಳದ ಬಗ್ಗೆ ಜಗಳವಾಡಿದರು. ಸಿಧು ಮತ್ತು ಅವರ ಸಹವರ್ತಿ ರೂಪಿಂದರ್ ಸಿಂಗ್ ಸಂಧು ಅವರು ಗುರ್ನಾಮ್ ಸಿಂಗ್ ಅವರನ್ನು ಅವರ ಕಾರಿನಿಂದ ಎಳೆದುಕೊಂಡು ಹೊಡೆದಿದ್ದುಗುರ್ನಾಮ್ ಸಾವಿಗೀಡಾಗಿದ್ದರು. 1999 ರಲ್ಲಿ, ಪಟಿಯಾಲದ ಸೆಷನ್ಸ್ ನ್ಯಾಯಾಲಯವು ಸಿಧು ಮತ್ತು ಅವರ ಸಹಚರರನ್ನು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಖುಲಾಸೆ ಮಾಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಮೇಲೆ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ 2006 ರಲ್ಲಿ ಸಿಧುವನ್ನು ತಪ್ಪಿತಸ್ಥ ನರಹತ್ಯೆಯ ಅಪರಾಧಿ ಎಂದು ಘೋಷಿಸಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. 2018 ರಲ್ಲಿ ಸಿಧು ಸುಪ್ರೀಂ ಕೋರ್ಟ್‌ಗೆ ಮೊರೆ ಹೋದರು. ಒಂದೇ ಏಟಿಗೆ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಯಾವುದೇ ಪುರಾವೆಗಳಿಲ್ಲ ಎಂದು ಹೈಕೋರ್ಟ್ ಆದೇಶವನ್ನು ತಳ್ಳಿ ಹಾಕಿದ ಸುಪ್ರೀಂಕೋರ್ಟ್ ಹಿರಿಯ ನಾಗರಿಕರಿಗೆ ನೋವುಂಟು ಮಾಡಿದ ಕಾರಣಕ್ಕೆ ಸಿಧುವನ್ನು ತಪ್ಪಿತಸ್ಥ ಎಂದು ಪರಿಗಣಿಸಿತು. ಸಿಧುಗೆ ಜೈಲು ಶಿಕ್ಷೆ ಮತ್ತು ₹ 1,000 ದಂಡ ವಿಧಿಸಲಾಯಿತು.

ಸಿಧು ಅವರ ಸಹಾಯಕ ರೂಪಿಂದರ್ ಸಂಧು ಅವರು ಸ್ಥಳದಲ್ಲಿ ಹಾಜರಿದ್ದಕ್ಕೆ ಸರಿಯಾದ ಪುರಾವೆಗಳಿಲ್ಲ ಎಂದು ಸುಪ್ರೀಂಕೋರ್ಟ್ ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿದೆ.

Published On - 5:44 pm, Fri, 20 May 22

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ