Navjot Singh Sidhu: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆದ ನವಜೋತ್ ಸಿಂಗ್ ಸಿಧು
ಚರಣ್ಜಿತ್ ಸಿಂಗ್ ಚನ್ನಿ ನೇತೃತ್ವದ ಹೊಸ ರಾಜ್ಯ ಸಚಿವ ಸಂಪುಟದ ಸದಸ್ಯರಿಗೆ ಖಾತೆಗಳನ್ನು ಹಂಚಿಕೆ ಮಾಡಿದ ಕೆಲವೇ ದಿನಗಳಲ್ಲಿ ಸಿಧು ಅವರು ಸೆಪ್ಟೆಂಬರ್ 28ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಚಂಡೀಗಢ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಒಂದು ತಿಂಗಳ ನಂತರ ನವಜೋತ್ ಸಿಂಗ್ ಸಿಧು ಇಂದು ತಮ್ಮ ರಾಜೀನಾಮೆಯನ್ನು ಹಿಂಪಡೆದಿರುವುದಾಗಿ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನವಜೋತ್ ಸಿಂಗ್ ಸಿಧು, ನಾನು ರಾಜೀನಾಮೆಯನ್ನು ವಾಪಾಸ್ ಪಡೆಯುವುದಾಗಿ ರಾಹುಲ್ ಗಾಂಧಿ ಅವರಿಗೆ ತಿಳಿಸಿದ್ದೇನೆ. ನಾನು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷನಾಗಿ ಮುಂದುವರೆಯಲಿದ್ದೇನೆ ಎಂದು ತಿಳಿಸಿದ್ದಾರೆ.
ಸಿಧು ಅವರು ಸೆಪ್ಟೆಂಬರ್ 28ರಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರದಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದರು. ನವಜೋತ್ ಸಿಂಗ್ ಸಿಧು ತಮ್ಮ ಪತ್ರದಲ್ಲಿ, ನಾನು ಪಂಜಾಬ್‌ನ ಭವಿಷ್ಯದ ಜೊತೆಗೆ ಎಂದಿಗೂ ರಾಜಿ ಮಾಡಿಕೊಳ್ಳಲಾರೆ ಎಂದು ಬರೆದಿದ್ದರು. ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಸೇವೆಯನ್ನು ಮುಂದುವರಿಸುತ್ತೇನೆ ಎಂದು ಬರೆದುಕೊಂಡಿದ್ದರು. ಅಕ್ಟೋಬರ್ 15ರಂದು ಎಐಸಿಸಿ ರಾಜ್ಯ ಉಸ್ತುವಾರಿ ಹರೀಶ್ ರಾವತ್ ಅವರು ಸಿಧು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಮುಂದುವರಿಯುತ್ತಾರೆ ಎಂದು ಹೇಳಿದ್ದರು.
“I will assume charge when the new Attorney General will be appointed. It (resignation) was not a matter of personal ego but the interest of every Punjabi,” Congress leader Navjot Singh Sidhu added in Chandigarh pic.twitter.com/cqjElrAiMp
— ANI (@ANI) November 5, 2021
ಚರಣ್ಜಿತ್ ಸಿಂಗ್ ಚನ್ನಿ ನೇತೃತ್ವದ ಹೊಸ ರಾಜ್ಯ ಸಚಿವ ಸಂಪುಟದ ಸದಸ್ಯರಿಗೆ ಖಾತೆಗಳನ್ನು ಹಂಚಿಕೆ ಮಾಡಿದ ಕೆಲವೇ ದಿನಗಳಲ್ಲಿ ಸಿಧು ಅವರು ಸೆಪ್ಟೆಂಬರ್ 28ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ನವಜೋತ್ ಸಿಂಗ್ ಅವರಿಗೂ ಮೊದಲೇ ಅಮರೀಂದರ್ ಸಿಂಗ್ ಕೂಡ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಅವರು ಹೊಸ ಪಕ್ಷ ಸ್ಥಾಪಿಸುವ ಸಿದ್ಧತೆಯಲ್ಲಿದ್ದಾರೆ. ಅದರ ಬೆನ್ನಲ್ಲೇ ರಾಜೀನಾಮೆ ನೀಡಿ 1 ತಿಂಗಳ ಬಳಿಕ ನವಜೋತ್ ಸಿಂಗ್ ಸಿಧು ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.
ಇದನ್ನೂ ಓದಿ: ನಿಮ್ಮ ಹೆಂಡತಿಯೂ ಕಾಂಗ್ರೆಸ್ ಬಿಡಲು ಸಿದ್ಧರಿದ್ದಾರಾ?; ಅಮರಿಂದರ್ ಸಿಂಗ್ಗೆ ನವಜೋತ್ ಸಿಧು ಲೇವಡಿ
Navjot Singh Sidhu ಪಂಜಾಬ್‌ನ 13 ಸಮಸ್ಯೆಗಳ ಬಗ್ಗೆ ಸೋನಿಯಾ ಗಾಂಧಿಗೆ ಪತ್ರ ಬರೆದ ನವಜೋತ್ ಸಿಂಗ್ ಸಿಧು
Published On - 4:35 pm, Fri, 5 November 21