ಕೊಚ್ಚಿಯಲ್ಲಿ ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಪತನ: ನೌಕಾಪಡೆ ಅಧಿಕಾರಿ ಸಾವು

Indian Navy helicopter crash: ಕೊಚ್ಚಿಯ ಸೌತ್ ನೇವಲ್ ಕಮಾಂಡ್ ಪ್ರಧಾನ ಕಚೇರಿಯಲ್ಲಿರುವ ಐಎನ್​ಎಸ್ ಗರುಡ ರನ್ ವೇಯಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಹೆಲಿಕಾಪ್ಟರ್‌ನ ಪೈಲಟ್ ಸೇರಿದಂತೆ ಇಬ್ಬರಿಗೆ ಗಾಯಗಳಾಗಿವೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಗಾಯಾಳುಗಳಿಬ್ಬರನ್ನೂ ನೌಕಾಪಡೆಯ ಪ್ರಧಾನ ಕಚೇರಿಯ ಸಂಜೀವನಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಚ್ಚಿಯಲ್ಲಿ ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಪತನ: ನೌಕಾಪಡೆ ಅಧಿಕಾರಿ ಸಾವು
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Nov 04, 2023 | 4:33 PM

ಕೊಚ್ಚಿ, ನವೆಂಬರ್ 4: ಕೇರಳದ ಕೊಚ್ಚಿಯಲ್ಲಿ (Kochi) ಭಾರತೀಯ ನೌಕಾಪಡೆ (Indian Navy) ಚೇತಕ್ ಹೆಲಿಕಾಪ್ಟರ್ ಪತನಗೊಂಡು (helicopter crash) ನೌಕಾಪಡೆಯ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. ಶನಿವಾರ ಮಧ್ಯಾಹ್ನ 2.30ರ ಸುಮಾರಿಗೆ ನಿತ್ಯದ ತರಬೇತಿ ವೇಳೆ ಹೆಲಿಕಾಪ್ಟರ್​​ ಪತನವಾಗಿದ್ದು, ಇದೇ ವೇಳೆ ರನ್‌ವೇಯಲ್ಲಿದ್ದ ನೌಕಾಪಡೆಯ ಅಧಿಕಾರಿ ಹೆಲಿಕಾಪ್ಟರ್​​ನ ರೋಟರ್ ಬ್ಲೇಡ್‌ಗಳಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕೊಚ್ಚಿಯ ಸೌತ್ ನೇವಲ್ ಕಮಾಂಡ್ ಪ್ರಧಾನ ಕಚೇರಿಯಲ್ಲಿರುವ ಐಎನ್​ಎಸ್ ಗರುಡ ರನ್ ವೇಯಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಹೆಲಿಕಾಪ್ಟರ್‌ನ ಪೈಲಟ್ ಸೇರಿದಂತೆ ಇಬ್ಬರಿಗೆ ಗಾಯಗಳಾಗಿವೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಗಾಯಾಳುಗಳಿಬ್ಬರನ್ನೂ ನೌಕಾಪಡೆಯ ಪ್ರಧಾನ ಕಚೇರಿಯ ಸಂಜೀವನಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತಕ್ಕೆ ಸಂಬಂಧಿಸಿ ಭಾರತೀಯ ನೌಕಾಪಡೆಯಿಂದ ದೃಢೀಕೃತ ಮಾಹಿತಿಗಾಗಿ ಕಾಯಲಾಗುತ್ತಿದೆ. ಅಪಘಾತದ ನಂತರ ಕೊಚ್ಚಿ ಹಾರ್ಬರ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

(ಮಾಹಿತಿ ಅಪ್​ಡೇಟ್ ಆಗುತ್ತಿದೆ)

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ