ಕೊಚ್ಚಿ, ನವೆಂಬರ್ 4: ಕೇರಳದ ಕೊಚ್ಚಿಯಲ್ಲಿ (Kochi) ಭಾರತೀಯ ನೌಕಾಪಡೆಯ (Indian Navy) ಚೇತಕ್ ಹೆಲಿಕಾಪ್ಟರ್ ಪತನಗೊಂಡು (helicopter crash) ನೌಕಾಪಡೆಯ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. ಶನಿವಾರ ಮಧ್ಯಾಹ್ನ 2.30ರ ಸುಮಾರಿಗೆ ನಿತ್ಯದ ತರಬೇತಿ ವೇಳೆ ಹೆಲಿಕಾಪ್ಟರ್ ಪತನವಾಗಿದ್ದು, ಇದೇ ವೇಳೆ ರನ್‌ವೇಯಲ್ಲಿದ್ದ ನೌಕಾಪಡೆಯ ಅಧಿಕಾರಿ ಹೆಲಿಕಾಪ್ಟರ್‌ನ ರೋಟರ್ ಬ್ಲೇಡ್‌ಗಳಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಕೊಚ್ಚಿಯ ಸೌತ್ ನೇವಲ್ ಕಮಾಂಡ್ ಪ್ರಧಾನ ಕಚೇರಿಯಲ್ಲಿರುವ ಐಎನ್ಎಸ್ ಗರುಡ ರನ್ ವೇಯಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಹೆಲಿಕಾಪ್ಟರ್‌ನ ಪೈಲಟ್ ಸೇರಿದಂತೆ ಇಬ್ಬರಿಗೆ ಗಾಯಗಳಾಗಿವೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಗಾಯಾಳುಗಳಿಬ್ಬರನ್ನೂ ನೌಕಾಪಡೆಯ ಪ್ರಧಾನ ಕಚೇರಿಯ ಸಂಜೀವನಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತಕ್ಕೆ ಸಂಬಂಧಿಸಿ ಭಾರತೀಯ ನೌಕಾಪಡೆಯಿಂದ ದೃಢೀಕೃತ ಮಾಹಿತಿಗಾಗಿ ಕಾಯಲಾಗುತ್ತಿದೆ. ಅಪಘಾತದ ನಂತರ ಕೊಚ್ಚಿ ಹಾರ್ಬರ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ)
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ