Nawab Malik: ಸಮೀರ್ ವಾಂಖೆಡೆ ವಿರುದ್ಧದ ಹೇಳಿಕೆಗೆ ಬಾಂಬೆ ಹೈಕೋರ್ಟ್​ಗೆ ಬೇಷರತ್ ಕ್ಷಮೆ ಯಾಚಿಸಿದ ನವಾಬ್ ಮಲಿಕ್

| Updated By: ಸುಷ್ಮಾ ಚಕ್ರೆ

Updated on: Dec 10, 2021 | 6:02 PM

ತಮ್ಮ ಮಗನ ವಿರುದ್ಧ ಮತ್ತೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಸಮೀರ್ ವಾಂಖೆಡೆ ಅವರ ತಂದೆ ಜ್ಞಾನದೇವ್ ವಾಂಖೆಡೆ ನವಾಬ್ ಮಲಿಕ್ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದರು.

Nawab Malik: ಸಮೀರ್ ವಾಂಖೆಡೆ ವಿರುದ್ಧದ ಹೇಳಿಕೆಗೆ ಬಾಂಬೆ ಹೈಕೋರ್ಟ್​ಗೆ ಬೇಷರತ್ ಕ್ಷಮೆ ಯಾಚಿಸಿದ ನವಾಬ್ ಮಲಿಕ್
ನವಾಬ್​ ಮಲ್ಲಿಕ್​
Follow us on

ಮುಂಬೈ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ವಿರುದ್ಧ ನೀಡಿದ್ದ ಹೇಳಿಕೆಗೆ ಬಾಂಬೆ ಹೈಕೋರ್ಟ್​ ಮುಂದೆ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ಇನ್ನು ಮುಂದೆ ಅಂತಹ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಅವರು ಈ ಹಿಂದೆ ಬಾಂಬೆ ಹೈಕೋರ್ಟ್​ಗೆ ಭರವಸೆ ನೀಡಿದ್ದರು. ಆದರೆ, ಮತ್ತೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರಿಂದ ಅವರು ಕ್ಷಮೆ ಯಾಚಿಸಿದ್ದಾರೆ. ಸಮೀರ್ ವಾಂಖೆಡೆ ಅವರ ವಿರುದ್ಧ ಯಾವುದೇ ನೇರ ಅಥವಾ ಪರೋಕ್ಷ ಹೇಳಿಕೆ ನೀಡುವುದಿಲ್ಲ ಎಂದು ನವಾಬ್ ಮಲಿಕ್ ಮತ್ತು ಅವರ ಕುಟುಂಬ ಬಾಂಬೆ ಹೈಕೋರ್ಟ್‌ಗೆ ಭರವಸೆ ನೀಡಿತ್ತು.

ನವಾಬ್ ಮಲಿಕ್ ಅವರು ಉದ್ದೇಶಪೂರ್ವಕವಾಗಿ ತಮ್ಮ ಮಾತನ್ನು ಮೀರಿ, ಕೋರ್ಟ್​ಗೆ ನೀಡಿದ್ದ ಭರವಸೆಯನ್ನು ಉಲ್ಲಂಘಿಸಿದ್ದಾರೆ ಮತ್ತು ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಮತ್ತು ಅವರ ಕುಟುಂಬದ ವಿರುದ್ಧ ಮಾತನಾಡಿದ್ದಾರೆ ಎಂದು ನ್ಯಾಯಾಲಯ ತೀರ್ಮಾನಿಸಿದೆ. ತಮ್ಮ ಮಗನ ವಿರುದ್ಧ ಮತ್ತೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಸಮೀರ್ ವಾಂಖೆಡೆ ಅವರ ತಂದೆ ಜ್ಞಾನದೇವ್ ವಾಂಖೆಡೆ ನವಾಬ್ ಮಲಿಕ್ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದರು.

ನವಾಬ್ ಮಲಿಕ್ ಇಂದು ಕೋರ್ಟ್​ ಎದುರು ನೀಡಿರುವ ಹೇಳಿಕೆಯಲ್ಲಿ, ನವೆಂಬರ್ 25 ಮತ್ತು ನವೆಂಬರ್ 29ರ ಆದೇಶಗಳಲ್ಲಿ ದಾಖಲಾಗಿರುವಂತೆ ಈ ನ್ಯಾಯಾಲಯಕ್ಕೆ ನೀಡಲಾದ ನನ್ನ ಒಪ್ಪಂದದ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ನಾನು ಈ ಗೌರವಾನ್ವಿತ ನ್ಯಾಯಾಲಯಕ್ಕೆ ಬೇಷರತ್ ಕ್ಷಮೆ ಯಾಚಿಸುತ್ತೇನೆ. ಇದು ಉದ್ದೇಶಪೂರ್ವಕವಾಗಿ ಮಾಡಿದ ತಪ್ಪಲ್ಲ. ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುವಾಗ ಸಮೀರ್ ವಾಂಖೆಡೆ ವಿರುದ್ಧ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.

ಮಾಧ್ಯಮಗಳಿಗೆ ನೀಡಿದ ಸಂದರ್ಶನದ ಸಂದರ್ಭದಲ್ಲಿ ನಾನು ನೀಡಿದ ಪ್ರತಿಕ್ರಿಯೆಗಳು ಈ ನ್ಯಾಯಾಲಯಕ್ಕೆ ನಾನು ನೀಡಿದ ಭರವಸೆಯ ವ್ಯಾಪ್ತಿಯಲ್ಲಿಲ್ಲ ಎಂಬ ನಂಬಿಕೆಯಿಂದ ನಾನು ಈ ಪ್ರತಿಕ್ರಿಯೆಗಳನ್ನು ನೀಡಿದ್ದೆ. ಅದಾದ ನಂತರ ನನಗೆ ಅದು ತಪ್ಪೆಂದು ಗೊತ್ತಾಯಿತು ಎಂದು ನವಾಬ್ ಮಲಿಕ್ ಹೇಳಿದ್ದಾರೆ.

ಇದನ್ನೂ ಓದಿ: ಧ್ಯಾನ್​​ದೇವ್ ವಾಂಖೆಡೆ ಕುಟುಂಬದ ವಿರುದ್ಧ ಡಿಸೆಂಬರ್ 9ರವರೆಗೆ ಸಾರ್ವಜನಿಕವಾಗಿ ಯಾವುದೇ ಪೋಸ್ಟ್ ಮಾಡುವುದಿಲ್ಲ: ನವಾಬ್ ಮಲಿಕ್

ಸಮೀರ್ ವಾಂಖೆಡೆ ವಿರುದ್ಧದ ನವಾಬ್ ಮಲಿಕ್ ಆರೋಪಗಳು ಪ್ರಾಥಮಿಕ ಹಂತದಲ್ಲಿ ಸಂಪೂರ್ಣವಾಗಿ ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್