AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್‌ಗಢದ ನಾರಾಯಣಪುರದಲ್ಲಿ 6 ನಕ್ಸಲರ ಎನ್‌ಕೌಂಟರ್‌

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೆಲವು ದಿನಗಳ ಹಿಂದೆ 2026ರ ಮಾರ್ಚ್ 31ರೊಳಗೆ ಭಾರತ ದೇಶವನ್ನು ನಕ್ಸಲಿಸಂನಿಂದ ಮುಕ್ತಗೊಳಿಸುವುದಾಗಿ ಭರವಸೆ ನೀಡಿದ್ದರು. ಇತ್ತೀಚೆಗೆ ನಕ್ಸಲರು ಶರಣಾಗುವ ಮೂಲಕ ಸಾರ್ವಜನಿಕ ಜೀವನಕ್ಕೆ ಆಗಮಿಸಲು ಒಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಅದರ ಮಧ್ಯೆ ಇಂದು ಛತ್ತೀಸ್​ಗಢದಲ್ಲಿ 6 ನಕ್ಸಲರನ್ನು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಲಾಗಿದೆ.

ಛತ್ತೀಸ್‌ಗಢದ ನಾರಾಯಣಪುರದಲ್ಲಿ 6 ನಕ್ಸಲರ ಎನ್‌ಕೌಂಟರ್‌
Indian Army
ಸುಷ್ಮಾ ಚಕ್ರೆ
|

Updated on: Jul 18, 2025 | 8:58 PM

Share

ನವದೆಹಲಿ, ಜುಲೈ 18: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ (Encounter) 6 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಈ ಬಗ್ಗೆ ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಅಬುಜ್ಮದ್ ಪ್ರದೇಶದ ಕಾಡಿನಲ್ಲಿ ಇಂದು ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಎನ್‌ಕೌಂಟರ್ ನಡೆದಿತ್ತು. ಈ ಪ್ರದೇಶದಲ್ಲಿ ನಕ್ಸಲರ ಉಪಸ್ಥಿತಿಯ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು ಎಂದಿದ್ದಾರೆ.

“ಮಧ್ಯಾಹ್ನದಿಂದ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಅನೇಕ ಗುಂಡಿನ ಚಕಮಕಿಗಳು ನಡೆದಿವೆ. ಇಲ್ಲಿಯವರೆಗೆ ಎನ್‌ಕೌಂಟರ್ ಸ್ಥಳದಿಂದ 6 ಮಾವೋವಾದಿಗಳ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೇ, ಎಕೆ -47 ಸೇರಿದಂತೆ ಇತರ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳು ಮತ್ತು ದಿನನಿತ್ಯ ಬಳಸುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 2026ರ ಮಾರ್ಚ್ ವೇಳೆಗೆ ಭಾರತ ನಕ್ಸಲಿಸಂನಿಂದ ಮುಕ್ತ; ಕೇರಳದಲ್ಲಿ ಅಮಿತ್ ಶಾ

ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ನಕ್ಸಲರನ್ನು ನಿಗ್ರಹಿಸುವ ಪ್ರಯತ್ನದಲ್ಲಿ ಭದ್ರತಾ ಪಡೆಗಳು ಬಹು ಕಾರ್ಯಾಚರಣೆಗಳನ್ನು ಪ್ರಾರಂಭಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೆಲವು ದಿನಗಳ ಹಿಂದೆ 2026ರ ಮಾರ್ಚ್ 31ರೊಳಗೆ ಭಾರತ ದೇಶವನ್ನು ನಕ್ಸಲಿಸಂನಿಂದ ಮುಕ್ತಗೊಳಿಸುವುದಾಗಿ ಭರವಸೆ ನೀಡಿದ್ದರು. ನಕ್ಸಲಿಸಂ ಅನ್ನು ಕೊನೆಗೊಳಿಸುವ ತಮ್ಮ ಸರ್ಕಾರದ ಬದ್ಧತೆಯನ್ನು ಪ್ರಧಾನಿ ಮೋದಿ ಕೂಡ ಪುನರುಚ್ಚರಿಸಿದ್ದಾರೆ.

ಇಂದು ಪ್ರಧಾನಿ ನರೇಂದ್ರ ಮೋದಿ ಬಿಹಾರದ ಮೋತಿಹರಿಯಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ನಕ್ಸಲಿಸಂ ಅನ್ನು ಕೊನೆಗೊಳಿಸುವ ತಮ್ಮ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದರು. “ಒಂದು ಕಾಲದಲ್ಲಿ ಮಾವೋವಾದಿ ಹಿಂಸಾಚಾರದಿಂದ ಹಿಮ್ಮೆಟ್ಟಲ್ಪಟ್ಟಿದ್ದ ಔರಂಗಾಬಾದ್, ಗಯಾ ಮತ್ತು ಜಮುಯಿ ಮುಂತಾದ ಬಿಹಾರ ಜಿಲ್ಲೆಗಳಿಗೆ ನಮ್ಮ ಸರ್ಕಾರ ಪ್ರಯೋಜನವನ್ನು ನೀಡಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ಛತ್ತೀಸ್‌ಗಢದ ಸುಕ್ಮಾದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಸಾವು, ಹಲವರಿಗೆ ಗಾಯ

ಈ ತಿಂಗಳ ಆರಂಭದಲ್ಲಿ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಸುಮಾರು 1.18 ಕೋಟಿ ರೂ.ಗಳ ಒಟ್ಟು ಬಹುಮಾನದೊಂದಿಗೆ ಸುಮಾರು 23 ನಕ್ಸಲರು ಶರಣಾಗಿದ್ದರು. ಈ 23 ಜನರಲ್ಲಿ 11 ಮಂದಿ ಹಿರಿಯ ಸಿಬ್ಬಂದಿಯಾಗಿದ್ದರೆ, 9 ಮಂದಿ ಮಹಿಳೆಯರು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಇತರ ಪೊಲೀಸ್ ಅಧಿಕಾರಿಗಳ ಮುಂದೆ ಶರಣಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ