Naxal Encounter: ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌; 9 ನಕ್ಸಲರ ಹತ್ಯೆ

ಭದ್ರತಾ ಪಡೆಗಳ ತಂಡವು ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಇಂದು ಬೆಳಿಗ್ಗೆ 10.30ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು.

Naxal Encounter: ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌; 9 ನಕ್ಸಲರ ಹತ್ಯೆ
ನಕ್ಸಲರ ಎನ್‌ಕೌಂಟರ್‌
Follow us
|

Updated on: Sep 03, 2024 | 3:21 PM

ದಾಂತೇವಾಡ: ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಇಂದು ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 9 ಮಾವೋವಾದಿಗಳು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತಾರ್ ರೇಂಜ್ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿಟಿಐಗೆ ತಿಳಿಸಿದ್ದಾರೆ.

ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ಗೆ ಸೇರಿದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಅದರ ಪಶ್ಚಿಮ ಬಸ್ತಾರ್ ವಿಭಾಗದ ಘಟಕಕ್ಕೆ ಸೇರಿದ ನಕ್ಸಲರ ಉಪಸ್ಥಿತಿಯ ಕುರಿತು ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಛತ್ತೀಸ್​ಗಢ-ಮಹಾರಾಷ್ಟ್ರ ಗಡಿಯಲ್ಲಿ ಪೊಲೀಸರಿಂದ ಎನ್​ಕೌಂಟರ್​, 12 ನಕ್ಸಲರ ಹತ್ಯೆ

ಮಧ್ಯಂತರ ಗುಂಡಿನ ಚಕಮಕಿಯು ದೀರ್ಘಕಾಲದವರೆಗೆ ನಡೆಯಿತು. ಇದರ ನಂತರ ‘ಸಮವಸ್ತ್ರ’ ಧರಿಸಿದ್ದ 9 ನಕ್ಸಲರ ಶವಗಳನ್ನು ಆ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಎನ್‌ಕೌಂಟರ್ ನಡೆದ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಬಸ್ತಾರ್ ಪ್ರದೇಶವು ದಾಂತೇವಾಡ ಮತ್ತು ಬಿಜಾಪುರ ಸೇರಿದಂತೆ 7 ಜಿಲ್ಲೆಗಳನ್ನು ಒಳಗೊಂಡಿದೆ. ಈ ವರ್ಷ ಇದುವರೆಗೆ ಛತ್ತೀಸ್‌ಗಢದಲ್ಲಿ ವಿವಿಧ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 154 ಮಾವೋವಾದಿಗಳನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ