ಛತ್ತೀಸ್ಗಢ: ನಕ್ಸಲರಿಂದ ಗುಂಡಿನ ದಾಳಿ, ಮಗು ಸಾವು, ತಾಯಿ ಹಾಗೂ ಯೋಧರಿಬ್ಬರಿಗೆ ಗಾಯ
ಛತ್ತೀಸ್ಗಢದ ಬಿಜಾಪುರದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ನಡೆದ ಗುಂಡಿನ ದಾಳಿಯಲ್ಲಿ 6 ತಿಂಗಳ ಹೆಣ್ಣುಮಗು ಸಾವನ್ನಪ್ಪಿದೆ. ಹಾಗೆಯೇ ತಾಯಿ ಮತ್ತು ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಛತ್ತೀಸ್ಗಢದ ಬಿಜಾಪುರದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ನಡೆದ ಗುಂಡಿನ ದಾಳಿಯಲ್ಲಿ 6 ತಿಂಗಳ ಹೆಣ್ಣುಮಗು ಸಾವನ್ನಪ್ಪಿದೆ. ಹಾಗೆಯೇ ತಾಯಿ ಮತ್ತು ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮುತ್ವಂಡಿ ಗ್ರಾಮದ ಬಳಿಯ ಕಾಡಿನಲ್ಲಿ ಡಿಆರ್‌ಜಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಸಂಜೆ 5 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಗಾಯಗೊಂಡ ಮಹಿಳೆ ಮತ್ತು ಇಬ್ಬರು ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಡಿಆರ್‌ಜಿ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿಯಿಂದ ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಸೋಮವಾರ ನಕ್ಸಲೀಯರೊಂದಿಗಿನ ಎನ್‌ಕೌಂಟರ್‌ನಲ್ಲಿ ಆರು ತಿಂಗಳ ಹೆಣ್ಣು ಮಗುವು ಕ್ರಾಸ್ ಫೈರಿಂಗ್ನಲ್ಲಿ ಸಾವನ್ನಪ್ಪಿದೆ. ಜಿಲ್ಲೆಯ ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಮುತವಂಡಿ ಗ್ರಾಮದ ಬಳಿ ಸಂಜೆ 5 ಗಂಟೆ ಸುಮಾರಿಗೆ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಗುವಿನ ತಾಯಿಯ ಕೈಗೆ ಗುಂಡು ತಗುಲಿದೆ, ಯೋಧರು ಮುತ್ವಾಂಡಿ ಗ್ರಾಮದ ಬಳಿ ಬಂದಾಗ ನಕ್ಸಲೀಯರು ಅವರ ಮೇಲೆ ಗುಂಡಿನ ದಾಳಿ ನಡೆಸಿದರು.
ಮತ್ತಷ್ಟು ಓದಿ: ಮೂವರು ಮಾವೋವಾದಿ ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಮಹಿಳೆಯ ಕುಟುಂಬಕ್ಕೆ ಸಹಾಯ ಮಾಡಲು ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪೊಲೀಸ್ ಪಡೆ ಸಿಬ್ಬಂದಿ ತಕ್ಷಣ ತಲುಪಿದ್ದಾರೆ ಎಂದು ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ