AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕಾಲದಲ್ಲಿ ಗುಂಡಿನ ಸದ್ದು, ಇಂದು ಪಟಾಕಿಗಳ ಬೆಳಕು: ಬಸ್ತರ್‌ನಲ್ಲಿ ಹೊಸ ಇತಿಹಾಸ, ಯೋಧರೊಂದಿಗೆ ದೀಪಾವಳಿ ಆಚರಿಸಿದ ಮೋದಿ

ಪ್ರಧಾನಿ ಮೋದಿ ಬಸ್ತರ್‌ನಲ್ಲಿ ಯೋಧರೊಂದಿಗೆ ನಕ್ಸಲ್‌ ಮುಕ್ತ ಭಾರತದ ಮೊದಲ ದೀಪಾವಳಿ ಆಚರಿಸಿದರು. ಒಂದು ಕಾಲದಲ್ಲಿ ಹಿಂಸಾಚಾರದಿಂದ ನಲುಗಿದ್ದ ಈ ಪ್ರದೇಶ ಈಗ ಶಾಂತಿಯ ಸನ್ನಿಧಿಯಾಗಿದೆ. 2014ರ ನಂತರದ ಸರ್ಕಾರದ ಕಾರ್ಯತಂತ್ರಗಳು ಮತ್ತು ಯೋಧರ ತ್ಯಾಗದಿಂದ ನಕ್ಸಲಿಸಂ ಸಂಪೂರ್ಣವಾಗಿ ಅಂತ್ಯಗೊಂಡಿದೆ ಎಂದು ಪ್ರಧಾನಿ ಶ್ಲಾಘಿಸಿದರು. ಇದು ಅಭಿವೃದ್ಧಿ ಮತ್ತು ನವ ಭಾರತದ ಕಡೆಗೆ ಬಸ್ತರ್‌ನ ಪಯಣದ ಸಂಕೇತವಾಗಿದೆ.

ಒಂದು ಕಾಲದಲ್ಲಿ ಗುಂಡಿನ ಸದ್ದು, ಇಂದು ಪಟಾಕಿಗಳ ಬೆಳಕು: ಬಸ್ತರ್‌ನಲ್ಲಿ ಹೊಸ ಇತಿಹಾಸ, ಯೋಧರೊಂದಿಗೆ ದೀಪಾವಳಿ ಆಚರಿಸಿದ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Nov 08, 2026 | 1:05 PM

Share

ಬಸ್ತರ್, ನವೆಂಬರ್ 08: ಒಂದು ಕಾಲದಲ್ಲಿ ನಕ್ಸಲ್‌ ಹಿಂಸಾಚಾರದಿಂದ ನಲುಗಿದ್ದ ಛತ್ತೀಸ್‌ಗಢದ ಬಸ್ತರ್‌ನಲ್ಲಿ ಈ ಬಾರಿ ದೀಪಾವಳಿ ಸಂಭ್ರಮ ಮನೆಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತಾ ಪಡೆಗಳ ಯೋಧರೊಂದಿಗೆ ದೀಪಾವಳಿ ಆಚರಿಸಿ, ನಕ್ಸಲಿಸಂ ವಿರುದ್ಧದ ಹೋರಾಟದಲ್ಲಿ ಅವರ ಶೌರ್ಯ, ತ್ಯಾಗ ಮತ್ತು ಸಮರ್ಪಣೆಯನ್ನು ಕೊಂಡಾಡಿದ್ದಾರೆ. ದೇಶದಲ್ಲಿ ನಕ್ಸಲ್‌ ಪ್ರಭಾವ ಸಂಪೂರ್ಣವಾಗಿ ಅಂತ್ಯಗೊಂಡ ಬಳಿಕ ಆಚರಿಸುತ್ತಿರುವ ಮೊದಲ ದೀಪಾವಳಿ ಇದು ಎಂದು ಪ್ರಧಾನಿ ಹೇಳಿದ್ದಾರೆ.

ಒಂದು ಕಾಲದಲ್ಲಿ 20 ರಾಜ್ಯಗಳಲ್ಲಿ ನಕ್ಸಲರ ಪ್ರಭಾವ

ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ನಕ್ಸಲಿಸಂ ವಿರುದ್ಧದ ಹೋರಾಟದ ಹಿಂದಿನ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಒಂದು ಕಾಲದಲ್ಲಿ ದೇಶದ 20 ರಾಜ್ಯಗಳ 230ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಕ್ಸಲ್‌ ಚಟುವಟಿಕೆಗಳ ಪ್ರಭಾವವಿತ್ತು. ಅನೇಕ ಗ್ರಾಮಗಳಲ್ಲಿ ಜನರು ಭಯದ ವಾತಾವರಣದಲ್ಲಿ ಬದುಕುತ್ತಿದ್ದರು. ರಾತ್ರಿ ವೇಳೆ ಮನೆಯಿಂದ ಹೊರಬರಲು ಕೂಡ ಆತಂಕ ಪಡಬೇಕಾದ ಪರಿಸ್ಥಿತಿ ಇತ್ತು. ಜನರು ಸ್ವತಂತ್ರವಾಗಿ ಮತದಾನ ಮಾಡುವುದಕ್ಕೂ ನಕ್ಸಲರ ಬೆದರಿಕೆ ಎದುರಿಸಬೇಕಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

2010ರಲ್ಲಿ ಛತ್ತೀಸ್‌ಗಢದ ದಂತೇವಾಡದಲ್ಲಿ ನಡೆದ ಭೀಕರ ದಾಳಿಯಲ್ಲಿ 76 ಸಿಆರ್‌ಪಿಎಫ್ ಸಿಬ್ಬಂದಿ ಹುತಾತ್ಮರಾಗಿದ್ದರು. ಇಂತಹ ಹಲವು ದಾಳಿಗಳಲ್ಲಿ ಭದ್ರತಾ ಪಡೆಗಳ ಯೋಧರು ಮತ್ತು ನಾಗರಿಕರು ಪ್ರಾಣ ಕಳೆದುಕೊಂಡಿದ್ದರು. ಐಇಡಿ ಸ್ಫೋಟಗಳಿಂದ ಅನೇಕ ಯೋಧರು ಗಂಭೀರವಾಗಿ ಗಾಯಗೊಂಡು ಕೈಕಾಲುಗಳನ್ನು ಕಳೆದುಕೊಂಡಿದ್ದರು. ದಶಕಗಳ ಕಾಲ ಈ ಹೋರಾಟ ಮುಂದುವರಿದಿತ್ತು.

ಇದನ್ನೂ ಓದಿ: ನಕ್ಸಲ್ ಅಂದ್ರೆ ದೇಶಪ್ರೇಮಿಗಳು, ಸಮಾನತೆಗಾಗಿ ಹೋರಾಟ ಮಾಡ್ತಿರೋರು: ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ

2014ರ ನಂತರ ಬದಲಾದ ಕಾರ್ಯತಂತ್ರ: ಮೋದಿ

ನಕ್ಸಲಿಸಂ ವಿರುದ್ಧದ ಹೋರಾಟದಲ್ಲಿ ಹಿಂದಿನ ಸರ್ಕಾರಗಳಿಗೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿತ್ತು ಎಂದು ಮೋದಿ ಟೀಕಿಸಿದ್ದಾರೆ. 2014ರಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭದ್ರತಾ ಪಡೆಗಳಿಗೆ ಕಾರ್ಯಾಚರಣೆ ನಡೆಸಲು ಹೆಚ್ಚಿನ ಸ್ವಾತಂತ್ರ್ಯ ನೀಡಲಾಯಿತು. ನಕ್ಸಲರಿಗೆ ಸಿಗುತ್ತಿದ್ದ ಬೆಂಬಲ ಮತ್ತು ಅವರ ಜಾಲವನ್ನು ದುರ್ಬಲಗೊಳಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಯಿತು ಎಂದು ಹೇಳಿದ್ದಾರೆ.

“ಒಂದು ಕಾಲದಲ್ಲಿ ನಕ್ಸಲರ ದಾಳಿಗಳಲ್ಲಿ ಹುತಾತ್ಮರಾಗುತ್ತಿದ್ದ ನಮ್ಮ ಯೋಧರ ಸಂಖ್ಯೆ, ಹತರಾಗುತ್ತಿದ್ದ ನಕ್ಸಲರ ಸಂಖ್ಯೆಗಿಂತ ಹೆಚ್ಚಿತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದೆ. ಸರಿಯಾದ ಉದ್ದೇಶ ಮತ್ತು ಸೂಕ್ತ ನೀತಿಗಳಿಂದ ಈ ಯಶಸ್ಸು ಸಾಧ್ಯವಾಗಿದೆ. ಇದು ಯೋಧರ ಶೌರ್ಯ, ಧೈರ್ಯ ಮತ್ತು ಸಂಯಮದ ಗೆಲುವು” ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.

47 ವರ್ಷಗಳಲ್ಲಿ ಮೊದಲ ಬಾರಿಗೆ ಸಿಆರ್‌ಪಿಎಫ್‌ಗೆ ಮಹತ್ವದ ಸಾಧನೆ

ಸಿಆರ್‌ಪಿಎಫ್ ಕಳೆದ 12 ತಿಂಗಳುಗಳಲ್ಲಿ ಕಾರ್ಯಾಚರಣೆಯ ಸಂದರ್ಭದಲ್ಲಿ ಒಬ್ಬ ಸಿಬ್ಬಂದಿಯನ್ನೂ ಕಳೆದುಕೊಂಡಿಲ್ಲ. 47 ವರ್ಷಗಳ ಬಳಿಕ ಮೊದಲ ಬಾರಿಗೆ ಇಂತಹ ಸಾಧನೆ ಮಾಡಿದೆ ಎಂದು ವರದಿಯಾಗಿದೆ. ಆಧುನಿಕ ಉಪಕರಣಗಳು, ಉತ್ತಮ ತರಬೇತಿ, ಕಾರ್ಯತಂತ್ರದ ಯೋಜನೆ ಮತ್ತು ಗಾಯಾಳುಗಳನ್ನು ತ್ವರಿತವಾಗಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಈ ಸಾಧನೆಗೆ ನೆರವಾಗಿದೆ ಎಂದು ಸಿಆರ್‌ಪಿಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಈ ಸಾಧನೆಯನ್ನು ಶ್ಲಾಘಿಸಿದ್ದಾರೆ.

ಮಾರ್ಚ್ 31ರಂದು ನಕ್ಸಲ್‌ ನಿರ್ಮೂಲನೆಯ ಗುರಿ ಸಾಧನೆ ಘೋಷಣೆ

ನಕ್ಸಲ್‌ ಹಿಂಸಾಚಾರವನ್ನು ಅಂತ್ಯಗೊಳಿಸುವ ಗುರಿಯನ್ನು ಕೇಂದ್ರ ಸರ್ಕಾರ 2026ರ ಮಾರ್ಚ್ 31ಕ್ಕೆ ನಿಗದಿಪಡಿಸಿತ್ತು. ಆ ದಿನ ದೇಶದಲ್ಲಿ ನಕ್ಸಲ್‌ ಸಮಸ್ಯೆಯನ್ನು ನಿರ್ಮೂಲನೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿತು. ಹಲವು ಪ್ರಮುಖ ನಕ್ಸಲ್‌ ನಾಯಕರು ಮತ್ತು ಕಾರ್ಯಕರ್ತರು ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಹತರಾಗಿದ್ದು, ನೂರಾರು ಮಂದಿ ಶರಣಾಗಿದ್ದರು.

ಆದರೆ ನಕ್ಸಲ್‌ ಪ್ರಭಾವ ಅಂತ್ಯಗೊಂಡಿದೆ ಎಂಬ ಘೋಷಣೆಯಷ್ಟೇ ಸಾಕಾಗುವುದಿಲ್ಲ. ಹಿಂದೆ ಹಿಂಸಾಚಾರದಿಂದ ಹಿಂದುಳಿದಿದ್ದ ಪ್ರದೇಶಗಳಿಗೆ ರಸ್ತೆ, ವಿದ್ಯುತ್‌, ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತು ಸಂಪರ್ಕ ವ್ಯವಸ್ಥೆ ತಲುಪಿಸುವುದೂ ಅಷ್ಟೇ ಮುಖ್ಯ. ಬಸ್ತರ್‌ನಲ್ಲಿ ಭದ್ರತಾ ಶಿಬಿರಗಳನ್ನು ಜನಸೇವಾ ಕೇಂದ್ರಗಳಾಗಿ ಪರಿವರ್ತಿಸಿ ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವ ಪ್ರಯತ್ನಗಳೂ ನಡೆಯುತ್ತಿವೆ.

ವಿಡಿಯೋ

ಯೋಧರೇ ನನ್ನ ಕುಟುಂಬ: ಮೋದಿ “ದೇಶದ ಪ್ರತಿಯೊಬ್ಬ ಯೋಧನೂ ನನ್ನ ಕುಟುಂಬದ ಸದಸ್ಯ. ನೀವು ನಿಮ್ಮ ಕುಟುಂಬದಿಂದ ದೂರವಿದ್ದು ದೇಶದ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುತ್ತಿದ್ದೀರಿ. ನಿಮ್ಮ ತ್ಯಾಗ ಮತ್ತು ಸೇವೆಗೆ ನಾನು ತಲೆಬಾಗುತ್ತೇನೆ” ಎಂದು ಮೋದಿ ಹೇಳಿದ್ದಾರೆ.

ಯಾವುದೇ ತಾಯಿಯ ಮಡಿಲು ಖಾಲಿಯಾಗಬಾರದು, ಯಾವುದೇ ಯುವಕನ ಭವಿಷ್ಯ ಹಾಳಾಗಬಾರದು ಎಂಬುದು ಸರ್ಕಾರದ ಗುರಿ ಎಂದು ಅವರು ತಿಳಿಸಿದ್ದಾರೆ. ನಕ್ಸಲಿಸಂ ವಿರುದ್ಧದ ಹೋರಾಟದಲ್ಲಿ ಭದ್ರತಾ ಪಡೆಗಳ ಪಾತ್ರವನ್ನು ಸ್ಮರಿಸಿ, ಶಾಂತಿ ಮತ್ತು ಅಭಿವೃದ್ಧಿಯ ಹಾದಿಯಲ್ಲಿ ಬಸ್ತರ್ ಮುನ್ನಡೆಯಬೇಕು ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಮೋದಿ ದೀಪಾವಳಿ ಆಚರಣೆಯ ಸಂಪ್ರದಾಯ ಪ್ರಧಾನಿ ಮೋದಿ 2014ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಪ್ರತಿ ವರ್ಷ ದೀಪಾವಳಿಯನ್ನು ಸೈನಿಕರು ಮತ್ತು ಭದ್ರತಾ ಪಡೆಗಳ ಸಿಬ್ಬಂದಿಯೊಂದಿಗೆ ಆಚರಿಸುವ ಸಂಪ್ರದಾಯ ಬೆಳೆಸಿಕೊಂಡಿದ್ದಾರೆ. 2025ರಲ್ಲಿ ಗೋವಾ ಮತ್ತು ಕಾರವಾರದ ಸಮುದ್ರ ಪ್ರದೇಶದಲ್ಲಿ ಐಎನ್‌ಎಸ್ ವಿಕ್ರಾಂತ್‌ನಲ್ಲಿ ನೌಕಾಪಡೆ ಸಿಬ್ಬಂದಿಯೊಂದಿಗೆ ಹಬ್ಬ ಆಚರಿಸಿದ್ದರು. ಈ ಬಾರಿ ನಕ್ಸಲ್‌ ಹೋರಾಟದ ಪ್ರಮುಖ ಕೇಂದ್ರವಾಗಿದ್ದ ಬಸ್ತರ್‌ ಆಯ್ಕೆ ಮಾಡಿಕೊಂಡಿರುವುದು ವಿಶೇಷವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:00 pm, Sun, 8 November 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ
ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಗಂಭೀರ ಗಾಯ
ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಗಂಭೀರ ಗಾಯ
ಕರ್ನಾಟಕದ ಡಿಪಿಆರ್‌ ತಿರಸ್ಕರಿಸಲು ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ
ಕರ್ನಾಟಕದ ಡಿಪಿಆರ್‌ ತಿರಸ್ಕರಿಸಲು ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ