ನವದೆಹಲಿ: ಛತ್ತೀಸ್ಗಢದಲ್ಲಿ ನಕ್ಸಲರು ಮತ್ತೆ ಅಟ್ಟಹಾಸ ಮುಂದುವರೆಸಿದ್ದು, ದಂತೇವಾಡ ಜಿಲ್ಲೆಯಲ್ಲಿ ಎಸ್ಯುವಿ ವಾಹನವೊಂದನ್ನು ಸ್ಫೋಟಿಸಿದ್ದಾರೆ. ಈ ದುರಂತದಲ್ಲಿ ಒಬ್ಬರು ಸಾವನ್ನಪ್ಪಿದ್ದು, 11 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಛತ್ತೀಸ್ಗಢದ ದಂತೇವಾಡ ಜಿಲ್ಲೆಯ ರಸ್ತೆಯಲ್ಲಿ ಸ್ಫೋಟಕಗಳನ್ನು ಬಳಸಿ ಎಸ್ಯುವಿ ವಾಹನವೊಂದನ್ನು ಸ್ಫೋಟಿಸಲಾಗಿದೆ. ಮಾಲೇವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 7.30ರ ವೇಳೆಗೆ ಈ ಘಟನೆ ನಡೆದಿದೆ. ನಾರಾಯಣಪುರದಿಂದ ದಂತೇವಾಡಕ್ಕೆ ರಸ್ತೆ ಮಾರ್ಗದ ಕಾಮಗಾರಿ ನಡೆಯುತ್ತಿತ್ತು. ಈ ಮಾರ್ಗದಲ್ಲಿಯೇ ಎಸ್ಯುವಿ ಕಾರನ್ನು ಸ್ಫೋಟ ಮಾಡಲಾಗಿದೆ.
ಗಂಭೀರವಾಗಿ ಗಾಯಗೊಂಡ 11 ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇತ್ತೀಚೆಗೆ ದಂತೇವಾಡದ ಸುತ್ತಮುತ್ತಲೂ ನಕ್ಸಲರ ಹಾವಳಿ ಹೆಚ್ಚಾಗಿದೆ. ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಕ್ಸಲರು ಈ ದಾಳಿ ನಡೆಸಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಭದ್ರತಾ ಸಿಬ್ಬಂದಿಯ ವಾಹನದ ಬದಲಾಗಿ ಸಾರ್ವಜನಿಕರ ಕಾರನ್ನು ಸ್ಫೋಟಿಸಿರುವ ಸಾಧ್ಯತೆಯಿದೆ.
“At least 12 persons were injured in an IED blast by Maoists at Ghotiya at around 7.30 am. Dantewada police reached the spot to rescued & shift the injured to the hospital,” says Dantewada SP Abhishek Pallav#Chhattisgarh
— ANI (@ANI) August 5, 2021
ಸಾವನ್ನಪ್ಪಿರುವ ವ್ಯಕ್ತಿ ತಮ್ಮ ಊರಾದ ತೆಲಂಗಾಣಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಆ ವೇಳೆ ಅವರ ಕಾರು ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ 11 ಜನರಲ್ಲಿ ಮಹಿಳೆಯೂ ಸೇರಿದ್ದು ಇಬ್ಬರ ಪರಿಸ್ಥಿತಿ ತುಂಬ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
#Chhattisgarh | One of the injured persons in the IED blast at Ghotiya, has succumbed to the injuries: Dantewada SP Abhishek Pallav
— ANI (@ANI) August 5, 2021
ಇದನ್ನೂ ಓದಿ: Jammu Kashmir: ಕಾಶ್ಮೀರದ ಪೊಲೀಸರಿಂದ 10 ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿ ಬಿಡುಗಡೆ
Pulwama Encounter: ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಪುಲ್ವಾಮಾ ದಾಳಿಯ ಮೋಸ್ಟ್ ವಾಂಟೆಡ್ ಉಗ್ರನ ಹತ್ಯೆ
(Naxals Attack: 1 Killed 11 Injured as Naxal Blast SUV in Chhattisgarh Dantewada on Today Morning)