ಅಕ್ಟೋಬರ್ 15ರಂದು ನಯಾಬ್ ಸೈನಿ ಹರ್ಯಾಣ ಸಿಎಂ ಆಗಿ ಪ್ರಮಾಣವಚನ ಸಾಧ್ಯತೆ
ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ದಾಖಲೆಯ ಮೂರನೇ ಗೆಲುವಿನತ್ತ ಮುನ್ನಡೆಸಿರುವ ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ ಅವರು ಅಕ್ಟೋಬರ್ 15 ರಂದು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.
ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ದಾಖಲೆಯ ಮೂರನೇ ಗೆಲುವಿನತ್ತ ಮುನ್ನಡೆಸಿರುವ ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ ಅವರು ಅಕ್ಟೋಬರ್ 15 ರಂದು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದ ವ್ಯವಸ್ಥೆಗಳ ಮೇಲ್ವಿಚಾರಣೆಗಾಗಿ ರಾಜ್ಯ ಮುಖ್ಯ ಕಾರ್ಯದರ್ಶಿ 10 ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಸಮಿತಿಯ ನೇತೃತ್ವವನ್ನು ಪಂಚಕುಲ ಜಿಲ್ಲಾಧಿಕಾರಿ ವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರ ಪ್ರಮುಖ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಮಾರ್ಚ್‌ನಲ್ಲಿ ಮುಖ್ಯಮಂತ್ರಿಯಾಗಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಬದಲಿಸಿದ ನಯಾಬ್ ಸಿಂಗ್ ಸೈನಿ ಅವರು ಗೆದ್ದರೆ ಉನ್ನತ ಹುದ್ದೆಗೆ ಆಯ್ಕೆಯಾಗುತ್ತಾರೆ ಎಂದು ಬಿಜೆಪಿ ಚುನಾವಣಾ ಸಮಯದಲ್ಲಿ ಸೂಚಿಸಿತ್ತು. ಈ ವಾರದ ಆರಂಭದಲ್ಲಿ, ನಯಾಬ್ ಸಿಂಗ್ ಸೈನಿ ಮತ್ತು ಹರ್ಯಾಣದ ಹೊಸದಾಗಿ ಚುನಾಯಿತರಾದ ಇತರ ಬಿಜೆಪಿ ಶಾಸಕರು ದೆಹಲಿಯಲ್ಲಿ ಪಕ್ಷದ ಹೈಕಮಾಂಡ್ನ್ನು ಭೇಟಿಯಾದರು.
ಮತ್ತಷ್ಟು ಓದಿ: Haryana Results: ಹರಿಯಾಣದಲ್ಲೂ ಸಿಎಂ ಅಭ್ಯರ್ಥಿಯ ಆಯ್ಕೆಯಲ್ಲಿ ಪ್ರಯೋಗ ಮಾಡಿ ಗೆದ್ದ ಬಿಜೆಪಿ
ನಯಾಬ್ ಸಿಂಗ್ ಸೈನಿ ಅವರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರನ್ನು ಭೇಟಿಯಾದರು. ಒಂದು ದಶಕದ ಆಡಳಿತ-ವಿರೋಧಿ ಮತ್ತು ನಿರ್ಗಮನ ಸಮೀಕ್ಷೆಗಳ ಭವಿಷ್ಯವನ್ನು ಧಿಕ್ಕರಿಸಿ, ಬಿಜೆಪಿ ಹರ್ಯಾಣದಲ್ಲಿ ತಿರುವು ಪಡೆದುಕೊಂಡಿತು.
2019 ರಿಂದ ಮಾರ್ಚ್ 2024 ರವರೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಜೆಜೆಪಿ ಹೇಳ ಹೆಸರಿಲ್ಲದಂತಾಯಿತು. ಎಎಪಿ ತನ್ನ ಖಾತೆಯನ್ನು ತೆರೆಯಲು ವಿಫಲವಾಗಿದೆ ಮತ್ತು ಐಎನ್‌ಎಲ್‌ಡಿ ಕೇವಲ ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸಾವಿತ್ರಿ ಜಿಂದಾಲ್ ಸೇರಿದಂತೆ ಮೂವರು ಪಕ್ಷೇತರರೂ ಗೆದ್ದು ಬಿಜೆಪಿಗೆ ಬೆಂಬಲ ನೀಡಲು ನಿರ್ಧರಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ