ಹರ್ಯಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ
ಹರ್ಯಾಣದ ಬಿಜೆಪಿ ಮುಖ್ಯಸ್ಥ ನಯಾಬ್ ಸಿಂಗ್ ಸೈನಿ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಕುರುಕ್ಷೇತ್ರದ ಸಂಸದ ಹಾಗೂ ಒಬಿಸಿ ಸಮುದಾಯದ ನಾಯಕರಾಗಿರುವ ಸೈನಿ ಅವರನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹರಿಯಾಣ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.
ಚಂಡೀಗಢ: ಹರ್ಯಾಣದ (Haryana) ಬಿಜೆಪಿ ಮುಖ್ಯಸ್ಥ ನಯಾಬ್ ಸಿಂಗ್ ಸೈನಿ (Nayab Singh Saini) ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಕುರುಕ್ಷೇತ್ರದ ಸಂಸದ ಹಾಗೂ ಒಬಿಸಿ ಸಮುದಾಯದ ನಾಯಕರಾಗಿರುವ ಸೈನಿ ಅವರನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹರಿಯಾಣ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. 2019 ರಿಂದ ರಾಜ್ಯವನ್ನು ಆಳಿದ ಆಡಳಿತಾರೂಢ ಭಾರತೀಯ ಜನತಾ ಪಕ್ಷ-ಜನನಾಯಕ್ ಜನತಾ ಪಕ್ಷ (ಬಿಜೆಪಿ-ಜೆಜೆಪಿ) ಮೈತ್ರಿಯ ಬಿರುಕುಗಳ ಮಧ್ಯೆ ಮನೋಹರ್ ಲಾಲ್ ಖಟ್ಟರ್ ಕೆಳಗಿಳಿದ ನಂತರ ಸೈನಿ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಯಿತು.
ನಾನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಹರಿಯಾಣ ಬಿಜೆಪಿ ಉಸ್ತುವಾರಿ ಬಿಪ್ಲಬ್ ದೇಬ್ ಮತ್ತು ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಧನ್ಯವಾದಗಳನ್ನು ತಿಳಿಸುವೇ ಎಂದು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಮಾತುಕತೆ ವಿಫಲವಾದ ನಂತರ ಉಭಯ ಪಕ್ಷಗಳ ನಡುವಿನ ಬಾಂಧವ್ಯ ಹದಗೆಟ್ಟಿತ್ತು. ಖಟ್ಟರ್ ಸಂಪುಟದಲ್ಲಿ ಸಿಎಂ ಸೇರಿದಂತೆ 14 ಮಂದಿ ಸಚಿವರಿದ್ದು, ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ನೇತೃತ್ವದ ಜೆಜೆಪಿಯ ಮೂವರು ಸದಸ್ಯರು ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ: ಹರ್ಯಾಣದ ಸಿಎಂ ಸ್ಥಾನಕ್ಕೇರಿದ ಬಿಜೆಪಿ ಮುಖ್ಯಸ್ಥ; ಯಾರು ಈ ನಯಾಬ್ ಸಿಂಗ್ ಸೈನಿ?
ಪ್ರಸ್ತುತ, ವಿಧಾನಸಭೆಯಲ್ಲಿ 90 ಸದಸ್ಯರಲ್ಲಿ ಬಿಜೆಪಿ 41 ಶಾಸಕರನ್ನು ಹಾಗೂ ಜೆಜೆಪಿ 10 ಸದಸ್ಯರನ್ನು ಹೊಂದಿದೆ. ಪ್ರತಿಪಕ್ಷ ಕಾಂಗ್ರೆಸ್ 30 ಶಾಸಕರನ್ನು ಹೊಂದಿದೆ ಮತ್ತು ಇಂಡಿಯನ್ ನ್ಯಾಷನಲ್ ಲೋಕ ದಳ ಮತ್ತು ಹರಿಯಾಣ ಲೋಕಿತ್ ಪಕ್ಷ ತಲಾ ಒಂದು ಸ್ಥಾನವನ್ನು ಹೊಂದಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಎಲ್ಲಾ 10 ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:10 pm, Tue, 12 March 24