AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NCERT ಪುಸ್ತಕ ವಿವಾದ; ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಅಧ್ಯಾಯ ಬರೆದ ಲೇಖಕರಿಗೆ ಸುಪ್ರೀಂ ಕೋರ್ಟ್ ನಿಷೇಧ

NCERT ಪಠ್ಯ ವಿವಾದಕ್ಕೆ ಸಂಬಂಧಿಸಿದಂತೆ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಅಧ್ಯಾಯ ಬರೆದ ಲೇಖಕರನ್ನು ಕಪ್ಪು ಪಟ್ಟಿಗೆ ಸೇರಿಸಲು ಹಾಗೂ ಅವರು ಇನ್ನು ಯಾವುದೇ ಪಠ್ಯಕ್ರಮ ತಂಡದಲ್ಲಿ ಭಾಗಿಯಾಗದಂತೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಆ್ಯಂಡ್ ಟ್ರೈನಿಂಗ್ (NCERT) ಪುಸ್ತಕ ವಿವಾದದ ಮಧ್ಯೆ, ಸುಪ್ರೀಂ ಕೋರ್ಟ್ 8ನೇ ತರಗತಿಯ ನ್ಯಾಯಾಂಗ ಅಧ್ಯಾಯದ ಲೇಖಕರನ್ನು ಕಪ್ಪುಪಟ್ಟಿಗೆ ಸೇರಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

NCERT ಪುಸ್ತಕ ವಿವಾದ; ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಅಧ್ಯಾಯ ಬರೆದ ಲೇಖಕರಿಗೆ ಸುಪ್ರೀಂ ಕೋರ್ಟ್ ನಿಷೇಧ
Supreme Court
ಸುಷ್ಮಾ ಚಕ್ರೆ
|

Updated on: Mar 11, 2026 | 3:15 PM

Share

ನವದೆಹಲಿ, ಮಾರ್ಚ್ 11: 8ನೇ ತರಗತಿಯ NCERT ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ (NCERT Row) ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಕುರಿತು ಅಧ್ಯಾಯವನ್ನು ಬರೆದ ಬಗ್ಗೆ ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಮಹತ್ವದ ಆದೇಶ ಹೊರಡಿಸಲಾಗಿದ್ದು, ಈ ರೀತಿಯ ವಿವಾದಾತ್ಮಕ ವಿಷಯವನ್ನು ಸಿದ್ಧಪಡಿಸುವಲ್ಲಿ ಭಾಗಿಯಾಗಿರುವ ವ್ಯಕ್ತಿಗಳಿಂದ ದೂರವಿರಲು ಕೇಂದ್ರ, ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಸಾರ್ವಜನಿಕವಾಗಿ ಅನುದಾನ ಪಡೆದ ಶಿಕ್ಷಣ ಸಂಸ್ಥೆಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಅಧ್ಯಾಯದ ಲೇಖಕರು ಮುಂದಿನ ಪೀಳಿಗೆಗೆ ಎಂದಿಗೂ ಪಠ್ಯಪುಸ್ತಕಗಳನ್ನು ಸಿದ್ಧಪಡಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಾಂಗ ಅಧ್ಯಾಯದ ಕುರಿತು 8ನೇ ತರಗತಿಯ NCERT ಪಠ್ಯಪುಸ್ತಕಕ್ಕೆ ಸಂಬಂಧಿಸಿದ ಸುಮೋಟು ಪ್ರಕರಣದಲ್ಲಿ ನ್ಯಾಯಾಲಯದ ಹಿಂದಿನ ಆದೇಶದ ನಂತರ ಬೇಜವಾಬ್ದಾರಿಯಿಂದ ಪೋಸ್ಟ್ ಮಾಡಿದ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳ ವಿರುದ್ಧವೂ ಸುಪ್ರೀಂ ಕೋರ್ಟ್ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನ್ಯಾಯಾಂಗಕ್ಕೆ ಅಗೌರವ ತೋರುವ ಉದ್ದೇಶವಿಲ್ಲ; NCERT ಪಠ್ಯಪುಸ್ತಕ ವಿವಾದದ ತನಿಖೆಗೆ ಕೇಂದ್ರ ಸರ್ಕಾರ ಆದೇಶ

ಬೇರೆ ಎಲ್ಲಾ ತರಗತಿಗಳ ಪಠ್ಯಪುಸ್ತಕಗಳನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರವು NCERTಗೆ ನಿರ್ದೇಶನ ನೀಡಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. “ಉಂಟಾದ ಅನಾನುಕೂಲತೆಗೆ ನಾವು ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ. ಶೈಕ್ಷಣಿಕ ವಿಷಯದಲ್ಲಿ ನಿಖರತೆ, ಸೂಕ್ಷ್ಮತೆ ಮತ್ತು ಜವಾಬ್ದಾರಿಯ ಅತ್ಯುನ್ನತ ಮಾನದಂಡಗಳನ್ನು ಕಾಪಾಡಿಕೊಳ್ಳಲು NCERT ಬದ್ಧವಾಗಿದೆ” ಎಂದು NCERT ತಿಳಿಸಿದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ! ಗೂಗಲ್ ಸೇರಿ ಹಲವು ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ

ಹಾಗೇ, NCERT ಅಧ್ಯಾಯದ ವಿಷಯವನ್ನು ಹೊಂದಿರುವ ಎಲ್ಲಾ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಡಿಲೀಟ್ ಮಾಡುವಂತೆ ಕರೆ ನೀಡಿತು. ಸುಪ್ರೀಂ ಕೋರ್ಟ್ ಸಮಾಜ ವಿಜ್ಞಾನ ಪುಸ್ತಕದ ಮೇಲೆ ನಿಷೇಧ ಹೇರಿದ ನಂತರ, ಕೇಂದ್ರ ಶಿಕ್ಷಣ ಸಚಿವಾಲಯ ಗುರುವಾರ ಮಾಹಿತಿ ಮತ್ತು ಪ್ರಸಾರ ಮತ್ತು ಎಲೆಕ್ಟ್ರಾನಿಕ್ಸ್ ಸಚಿವಾಲಯಗಳಿಗೆ ಪತ್ರ ಬರೆದಿದ್ದು, ವಿವಾದಾತ್ಮಕ NCERT ಪಠ್ಯಪುಸ್ತಕವನ್ನು ಡಿಜಿಟಲ್ ವೇದಿಕೆಗಳು ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು