AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಇನ್ನೂ ಮುಗಿದಿಲ್ಲ ಆಟ: ಪಿಕ್ಚರ್​ ಅಭೀ ಬಾಕಿ ಹೈ!

ಮುಂಬೈ: ನಿನ್ನೆ ರಾತ್ರಿ ಬಿಜೆಪಿ ಹೈಕಮಾಂಡ್​ ನಡೆಸಿರುವ ಸರ್ಜಿಕಲ್​ ಸ್ಟ್ರೈಕ್​ ನಿಂದ ಎನ್​ಸಿಪಿ- ಶಿವಸೇನೆ ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದಿದೆ. ಈ ಮಧ್ಯೆ, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ದೇವೇಂದ್ರ ಫಡ್ನವೀಸ್ ಅವ್ರು ಎನ್‌ಸಿಪಿ ಶಾಸಕರ ಬೆಂಬಲವಿರುವ ಸಹಿಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ. ಶರದ್ ಪವಾರ್​ ಫ್ಯಾಮಿಲಿ, ಪಕ್ಷ ಇಬ್ಭಾಗ, ಶಾಸಕರ ಉಚ್ಛಾಟನೆಯಾದ್ರೆ ಮುಂದೇನು? ಆದ್ರೆ ಅತ್ತ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ ಕೆಂಡಾಮಂಡಲಗೊಂಡಿದ್ದಾರೆ. ಹೊಸ ಸರ್ಕಾರಕ್ಕೆ ಸುತರಾಂ ಸಮ್ಮತಿಯಿಲ್ಲ ಎಂದು ಕಿಡಿಕಾರಿದ್ದಾರೆ. ಜೊತೆಗೆ, ಶಿವಸೇನೆ ಮತ್ತು ಕಾಂಗ್ರೆಸ್​ ಜೊತೆಗೂಡಿ ಸರ್ಕಾರ […]

ಮಹಾರಾಷ್ಟ್ರದಲ್ಲಿ ಇನ್ನೂ ಮುಗಿದಿಲ್ಲ ಆಟ: ಪಿಕ್ಚರ್​ ಅಭೀ ಬಾಕಿ ಹೈ!
ಶರದ್ ಪವಾರ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 23, 2019 | 11:26 AM

Share

ಮುಂಬೈ: ನಿನ್ನೆ ರಾತ್ರಿ ಬಿಜೆಪಿ ಹೈಕಮಾಂಡ್​ ನಡೆಸಿರುವ ಸರ್ಜಿಕಲ್​ ಸ್ಟ್ರೈಕ್​ ನಿಂದ ಎನ್​ಸಿಪಿ- ಶಿವಸೇನೆ ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದಿದೆ. ಈ ಮಧ್ಯೆ, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ದೇವೇಂದ್ರ ಫಡ್ನವೀಸ್ ಅವ್ರು ಎನ್‌ಸಿಪಿ ಶಾಸಕರ ಬೆಂಬಲವಿರುವ ಸಹಿಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ.

ಶರದ್ ಪವಾರ್​ ಫ್ಯಾಮಿಲಿ, ಪಕ್ಷ ಇಬ್ಭಾಗ, ಶಾಸಕರ ಉಚ್ಛಾಟನೆಯಾದ್ರೆ ಮುಂದೇನು? ಆದ್ರೆ ಅತ್ತ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ ಕೆಂಡಾಮಂಡಲಗೊಂಡಿದ್ದಾರೆ. ಹೊಸ ಸರ್ಕಾರಕ್ಕೆ ಸುತರಾಂ ಸಮ್ಮತಿಯಿಲ್ಲ ಎಂದು ಕಿಡಿಕಾರಿದ್ದಾರೆ. ಜೊತೆಗೆ, ಶಿವಸೇನೆ ಮತ್ತು ಕಾಂಗ್ರೆಸ್​ ಜೊತೆಗೂಡಿ ಸರ್ಕಾರ ರಚಿಸುವ ಈ ಹಿಂದಿನ ತೀರ್ಮಾನಕ್ಕೆ ವಿರುದ್ಧವಾಗಿ ಎನ್‌ಸಿಪಿ ಶಾಸಕರೇನಾದ್ರೂ ಬಿಜೆಪಿಗೆ ಬೆಂಬಲ ನೀಡಿದರೆ ಅಂತಹವರನ್ನು ಪಕ್ಷದಿಂದ ಉಚ್ಛಾಟಿಸುವ ಅಸ್ತ್ರ ಝಳಪಿಸಿದ್ದಾರೆ, ಶರದ್ ಪವಾರ್‌.

ಹಾಗಾಗಿ ಇಂದು ಸಂಜೆ 4.30ಕ್ಕೆ ಎನ್‌ಸಿಪಿ ಶಾಸಕರ ತುರ್ತು ಸಭೆ ಕರೆದಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯ ನಂತರ ಇಂದು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಅಜಿತ್ ಪವಾರ್‌ ಅವರನ್ನ ಉಚ್ಚಾಟನೆ ಮಾಡುವ ಸಾಧ್ಯತೆಯಿದೆ.

ಅದಕ್ಕೂ ಮೊದಲು ಇನ್ನೇನು ಕೆಲವೇ ಕ್ಷಣಗಳಲ್ಲಿ ಶರದ್ ಪವಾರ್‌ ಮತ್ತು ಶಿವ ಸೇನೆ ಮುಖ್ಯಸ್ಥ ಉದ್ಧವ್​ ಠಾಕ್ರೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಅದರಲ್ಲಿ ಪಕ್ಷದ ನಿಲುವುಗಳನ್ನು ಸ್ಪಷ್ಟಪಡಿಸುವ ಸಾಧ್ಯತೆಯಿದೆ. ಇದೇ ವೇಳೆ, ಕಾಂಗ್ರೆಸ್​ ಸಹ ತುರ್ತು ಸಭೆ ಕರೆದಿದ್ದು, ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್​ ಅವರನ್ನು ಸಭೆಯಲ್ಲಿ ಹಾಜರಿರುವಂತೆ ಸೂಚಿಸಿದೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ