Sign In

By signing in or creating an account, you agree with Associated Broadcasting Company's Terms & Conditions and Privacy Policy.

UPA ಅಧ್ಯಕ್ಷ ಸ್ಥಾನ ನನಗೆ ಬೇಡ ಅಂದ್ರು ಶರದ್​ ಪವಾರ್​: ನಾವೇನೂ ಪ್ರಧಾನಿಯನ್ನು ಆಯ್ಕೆ ಮಾಡುತ್ತಿಲ್ಲವೆಂದ ಚಿದಂಬರಂ

ಈಗ ದೇಶದಲ್ಲಿ ರೈತರ ಪ್ರತಿಭಟನೆಯೇ ಸುದ್ದಿಯಾಗುತ್ತಿದೆ..ಜನರ ಗಮನವನ್ನು ಇಲ್ಲಿಂದ ಬೇರೆಡೆಗೆ ಸೆಳೆಯುವ ಕಾರಣಕ್ಕೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನ ಹೆಸರನ್ನು ಬಳಸಿಕೊಂಡು, ಹೀಗೆಲ್ಲ ಊಹಾಪೋಹಗಳನ್ನು ಹರಿಬಿಡುತ್ತಿದ್ದಾರೆ ಎಂದು ಪವಾರ್​ ತಿಳಿಸಿದರು.

UPA ಅಧ್ಯಕ್ಷ ಸ್ಥಾನ ನನಗೆ ಬೇಡ ಅಂದ್ರು ಶರದ್​ ಪವಾರ್​: ನಾವೇನೂ ಪ್ರಧಾನಿಯನ್ನು ಆಯ್ಕೆ ಮಾಡುತ್ತಿಲ್ಲವೆಂದ ಚಿದಂಬರಂ
ಶರದ್ ಪವಾರ್ (ಸಂಗ್ರಹ ಚಿತ್ರ)
Follow us
Lakshmi Hegde
|

Updated on:Dec 28, 2020 | 3:05 PM

ದೆಹಲಿ: ಸೋನಿಯಾ ಗಾಂಧಿ ಯುಪಿಎ ಅಧ್ಯಕ್ಷೆ ಸ್ಥಾನದಿಂದ ಕೆಳಗಿಳಿಯಲು ಬಯಸುತ್ತಿದ್ದರೂ, ಅದಕ್ಕೆ ನೂತನ ಸಾರಥಿ ಸಿಗುತ್ತಿಲ್ಲ. ಸೋನಿಯಾ ಪುತ್ರ ರಾಹುಲ್​ ಗಾಂಧಿ ಯಾವ ಜವಾಬ್ದಾರಿ ವಹಿಸಿಕೊಳ್ಳಲೂ ಸುತಾರಾಂ ಒಪ್ಪುತ್ತಿಲ್ಲ. ಹೀಗಿರುವಾಗ ಇತ್ತೀಚೆಗೆ ಒಂದು ಸುದ್ದಿ ಹರಡಿತ್ತು.. ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಯುಪಿಎ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲಿದ್ದಾರೆ ಎಂಬುದೊಂದು ಮಾಹಿತಿ ಬಲ್ಲ ಮೂಲಗಳಿಂದಲೇ ಹೊರಬಿದ್ದು, ಚರ್ಚೆಗೆ ಕಾರಣವಾಗಿತ್ತು.. ರಾಜಕೀಯ ತಜ್ಞರು ಈ ಬಗ್ಗೆ ವಿಶ್ಲೇಷಣೆಯನ್ನೂ ಶುರು ಮಾಡಿದ್ದರು.

ಇಷ್ಟು ದಿನ ಶರದ್​ ಪವಾರ್​ ಕೂಡ ಈ ಬಗ್ಗೆ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ ಇದೀಗ ಖಾಸಗಿ ಚಾನಲ್​ವೊಂದಕ್ಕೆ ಸಂದರ್ಶನ ನೀಡಿದ ಅವರು, ನಾನು ಯುಪಿಎ ಅಧ್ಯಕ್ಷನಾಗುತ್ತೇನೆ ಎನ್ನುವ ಊಹಾಪೋಹಗಳಲ್ಲಿ ಹುರುಳಿಲ್ಲ. ನನಗೆ ಅದರಲ್ಲಿ ಯಾವುದೇ ಆಸಕ್ತಿಯೂ ಇಲ್ಲ. ನನಗೆ ಆ ಹುದ್ದೆ ಬೇಡ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಅಷ್ಟೇ ಅಲ್ಲ, ಈಗ ದೇಶದಲ್ಲಿ ರೈತರ ಪ್ರತಿಭಟನೆಯೇ ಸುದ್ದಿಯಾಗುತ್ತಿದೆ.. ಜನರ ಗಮನವನ್ನು ಇಲ್ಲಿಂದ ಬೇರೆಡೆಗೆ ಸೆಳೆಯುವ ಕಾರಣಕ್ಕೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನ ಹೆಸರನ್ನು ಬಳಸಿಕೊಂಡು, ಹೀಗೆಲ್ಲ ಊಹಾಪೋಹಗಳನ್ನು ಹರಿಯಬಿಡುತ್ತಿದ್ದಾರೆ ಎಂದು ಪವಾರ್​ ತಿಳಿಸಿದರು.

ನಾವು ಪ್ರಧಾನಿಯನ್ನು ಆಯ್ಕೆ ಮಾಡುತ್ತಿಲ್ಲ ಶರದ್ ಪವಾರ್ ಯುಪಿಎ ನಾಯಕತ್ವ ವಹಿಸಿಕೊಳ್ಳುವ ಬಗ್ಗೆ ಕಾಂಗ್ರೆಸ್​ ಹಿರಿಯ ನಾಯಕ ಪಿ.ಚಿದಂಬರಂ ಅವರೂ ಪ್ರತಿಕ್ರಿಯೆ ನೀಡಿದ್ದರು. ನನಗನ್ನಿಸುವ ಪ್ರಕಾರ ಶರದ್ ಪವಾರ್ ಈ ಅಧ್ಯಕ್ಷ ಸ್ಥಾನಕ್ಕೇರಲು ಒಪ್ಪುವುದಿಲ್ಲ. ಯುಪಿಎ ಒಕ್ಕೂಟದಲ್ಲಿರುವ ಪಕ್ಷಗಳ ಸಭೆ ಕರೆಯವುದು, ಅಧ್ಯಕ್ಷತೆ ವಹಿಸುವುದು, ಒಕ್ಕೂಟದ ಅತಿದೊಡ್ಡ ಪಕ್ಷದ ನಾಯಕನ ಜವಾಬ್ದಾರಿಯಾಗಿರುತ್ತದೆ. ಅಂದರೆ ಸಹಜವಾಗಿಯೇ ಕಾಂಗ್ರೆಸ್​ನವರೇ ಯುಪಿಎ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಏರಬೇಕು. ನಿಯಮದ ಪ್ರಕಾರ ಉಳಿದ ಪಕ್ಷಗಳಿಗೆ ಅವಕಾಶ ಇರುವುದಿಲ್ಲ. ಇದು ಶರದ್ ಪವಾರ್​ಗೂ ಗೊತ್ತು. ಅಷ್ಟಕ್ಕೂ ಯುಪಿಎ ಅಧ್ಯಕ್ಷನ ಹುದ್ದೆಯೆಂದರೆ ಪ್ರಧಾನಿ ಹುದ್ದೆಯಲ್ಲ.. ನಾವು ಪ್ರಧಾನ ಮಂತ್ರಿಯನ್ನೇನೂ ಆಯ್ಕೆ ಮಾಡುತ್ತಿಲ್ಲ ಎಂದು ನಿನ್ನೆ ಟ್ವೀಟ್ ಮಾಡಿದ್ದರು.

ಯುಪಿಎ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ನಂತರ ಶರದ್ ಪವಾರ್ ಆಯ್ಕೆ ಸಾಧ್ಯತೆ

NCP ಅಧ್ಯಕ್ಷ ಶರದ್ ಪವಾರ್​ಗೆ 80ರ ಸಂಭ್ರಮ; ಹಿರಿಯ ನಾಯಕನಿಗೆ ಅದೃಷ್ಟ ತರಲಿದೆಯಾ ಈ ಬರ್ತ್​ ಡೇ?

Published On - 3:00 pm, Mon, 28 December 20

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು