2024ರ ಲೋಕಸಭೆ ಚುನಾವಣೆಯಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಪರ್ಧಿಸುವುದಿಲ್ಲ: ಮೂಲಗಳು

Sharad Pawar: ಮೂಲಗಳ ಪ್ರಕಾರ, 82 ವರ್ಷದ ಹಿರಿಯ ನಾಯಕ ಪಶ್ಚಿಮ ಮತ್ತು ಉತ್ತರ ಮಹಾರಾಷ್ಟ್ರದ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಸಿದ್ಧತೆಗಳನ್ನು ಪರಿಶೀಲಿಸಲು ನಡೆದ ಸಭೆಯಲ್ಲಿ ತಮ್ಮ ತೀರ್ಮಾನ ಹೇಳಿದ್ದಾರೆ.ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪಕ್ಷದ ಮುಖಂಡರು ಪವಾರ್ ಅವರನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಪರ್ಧಿಸುವುದಿಲ್ಲ: ಮೂಲಗಳು
ಶರದ್ ಪವಾರ್
Follow us
ರಶ್ಮಿ ಕಲ್ಲಕಟ್ಟ
|

Updated on: Oct 19, 2023 | 5:03 PM

ಮುಂಬೈ ಅಕ್ಟೋಬರ್​​ 19: ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಮುಖ್ಯಸ್ಥ ಶರದ್ ಪವಾರ್ (Sharad Pawar) ಅವರು 2024 ರಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ  (Lok Sabha Election )ಸ್ಪರ್ಧಿಸುವುದಿಲ್ಲ ಎಂದು ಮೂಲಗಳು ಗುರುವಾರ ಹೇಳಿವೆ. ಮೂಲಗಳ ಪ್ರಕಾರ, 82 ವರ್ಷದ ಹಿರಿಯ ನಾಯಕ ಪಶ್ಚಿಮ ಮತ್ತು ಉತ್ತರ ಮಹಾರಾಷ್ಟ್ರದ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಸಿದ್ಧತೆಗಳನ್ನು ಪರಿಶೀಲಿಸಲು ನಡೆದ ಸಭೆಯಲ್ಲಿ ತಮ್ಮ ತೀರ್ಮಾನ ಹೇಳಿದ್ದಾರೆ ಎಂದು ಇಂಡಿಯಾ ಟಿವಿ ನ್ಯೂಸ್ ಡಾಟ್ ಕಾಂ ವರದಿ ಮಾಡಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪಕ್ಷದ ಮುಖಂಡರು ಪವಾರ್ ಅವರನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಎನ್‌ಸಿಪಿ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ, ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಸೇರಿದಂತೆ ಹಿರಿಯ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು. ದಿಂಡೋರಿ, ಅಹ್ಮದ್‌ನಗರ, ಹಿಂಗೋಲಿ, ವಾರ್ಧಾ, ಅಮರಾವತಿ, ಬೀಡ್, ಭಿವಂಡಿ ಮತ್ತು ಜಲ್ನಾ ಕ್ಷೇತ್ರಗಳಲ್ಲಿ ಎನ್‌ಸಿಪಿ ಮುಖ್ಯಸ್ಥರು ಸಿದ್ಧತೆಗಳನ್ನು ಪರಿಶೀಲಿಸುತ್ತಿದ್ದರು.

ಎಂವಿಎ ಸೀಟು ಹಂಚಿಕೆ ಕುರಿತು ಪವಾರ್

ಮುಂಬರುವ ಲೋಕಸಭೆ ಚುನಾವಣೆಗೆ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಸದಸ್ಯರ ನಡುವೆ ಸೀಟು ಹಂಚಿಕೆಯನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು ಎಂದು ಪವಾರ್ ಬುಧವಾರ ಹೇಳಿದ್ದಾರೆ. ಪವಾರ್ ನೇತೃತ್ವದ ಎನ್‌ಸಿಪಿ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಮತ್ತು ಕಾಂಗ್ರೆಸ್ ಮಹಾರಾಷ್ಟ್ರದಲ್ಲಿ ಎಂವಿಎಯ ಮೂರು ಸದಸ್ಯರು. ಗಮನಾರ್ಹವಾಗಿ, ಈ ಮೂರು ಪಕ್ಷಗಳು ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾದ ಭಾಗವಾಗಿದೆ

ಪವಾರ್ ಅವರು ಬಿಜೆಪಿ ನೇತೃತ್ವದ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಿದ್ದು, ಈ ನ್ಯೂನತೆಗಳನ್ನು ಸಾರ್ವಜನಿಕರಿಗೆ ಬಹಿರಂಗವಾಗಿ ತಿಳಿಸಲು ಪಕ್ಷದ ಕಾರ್ಯಕರ್ತರನ್ನು ಉತ್ತೇಜಿಸಿದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:  ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ಕುರಿತು ಹೇಳಿಕೆ ನೀಡಿದ ಶರದ್ ಪವಾರ್ ವಿರುದ್ಧ ಪಿಯೂಷ್ ಗೋಯಲ್ ವಾಗ್ದಾಳಿ 

2024ರ ಲೋಕಸಭೆ ಚುನಾವಣೆ

18 ನೇ ಲೋಕಸಭೆಯ ಸದಸ್ಯರನ್ನು ಆಯ್ಕೆ ಮಾಡಲು 2024 ರ ಏಪ್ರಿಲ್ ಮತ್ತು ಮೇ ನಡುವೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಪ್ರಸ್ತುತ ಲೋಕಸಭೆಯ ಅಧಿಕಾರಾವಧಿಯು ಜೂನ್ 2024 ರಲ್ಲಿ ಕೊನೆಗೊಳ್ಳಲಿದೆ. ಹಿಂದಿನ ಸಾರ್ವತ್ರಿಕ ಚುನಾವಣೆಗಳು ಏಪ್ರಿಲ್-ಮೇ 2019 ರಲ್ಲಿ ನಡೆದಿತ್ತು. ಚುನಾವಣೆಯ ನಂತರ, ಬಿಜೆಪಿ ನೇತೃತ್ವದ NDA ಕೇಂದ್ರ ಸರ್ಕಾರವನ್ನು ರಚಿಸಿ, ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರಕ್ಕೇರಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ