ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ(Eknath Shinde) ಕನಸ್ಸಿನಲ್ಲಿಯೂ ರಾಜೀನಾಮೆ ನೀಡುವುದಿಲ್ಲ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಈಗಿನ ರಾಜಕೀಯ ನಾಯಕರುಗಳ ನಡುವೆ ಅಗಾಧ ವ್ಯತ್ಯಾಸವಿದೆ ಎಂದು ಎನ್ಸಿಪಿ ನಾಯಕ ಅಜಿತ್ ಪವಾರ್ ಹೇಳಿದ್ದಾರೆ. ಉದ್ಧವ್ ಠಾಕ್ರೆಯವರು ಏಕನಾಥ್ ಶಿಂದೆ ನೈತಿಕತೆ ಆಧಾರದ ಮೇಲೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಸಂಚಲನ ಶುರುವಾಗಿದೆ.
ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಉದ್ಧವ್ ಠಾಕ್ರೆ ನೈತಿಕ ಆಧಾರದ ಮೇಲೆ ಸಿಎಂ ಏಕನಾಥ್ ಶಿಂದೆ ಅವರಿಂದ ರಾಜೀನಾಮೆ ಕೇಳಿದ್ದರೆ, ಅದರ ಅಗತ್ಯವಿಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.
ನೈತಿಕತೆ ಆಧಾರದ ಮೇಲೆ ಮುಖ್ಯಮಂತ್ರಿ ಏಕನಾಥ್ ಶಿಂದೆ ರಾಜೀನಾಮೆ ನೀಡಬೇಕು ಎಂದು ಉದ್ಧವ್ ಠಾಕ್ರೆ ಶುಕ್ರವಾರ ಹೇಳಿದ್ದಾರೆ. ಕಳೆದ ವರ್ಷ ಸಿಎಂ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿದ್ದನ್ನು ಉಲ್ಲೇಖಿಸಿ ಅವರು ಈ ಬೇಡಿಕೆ ಇಟ್ಟಿದ್ದರು.
ಮತ್ತಷ್ಟು ಓದಿ: ಶರದ್ ಪವಾರ್ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಲು 2-3 ದಿನಗಳನ್ನು ತೆಗೆದುಕೊಳ್ಳಲಿದ್ದಾರೆ: ಅಜಿತ್ ಪವಾರ್
ನೈತಿಕತೆಯ ಆಧಾರದ ಮೇಲೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ಠಾಕ್ರೆ ಹೇಳಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ನಾನು ಸಿಎಂ ಆಗಲು ಬಯಸಲಿಲ್ಲ. ದ್ರೋಹ ಮಾಡಿದವರು ಸರ್ಕಾರ ರಚಿಸಿದರು ಎಂದು ಹೇಳಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ