ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಸಮಾವೇಶಕ್ಕೆ ಅಜಿತ್ ಪವಾರ್ ಗೈರು; ಪಕ್ಷ ತೊರೆಯುತ್ತಾರೆ ಎಂದು ಊಹಿಸಬೇಕಾಗಿಲ್ಲ: ಎನ್​​ಸಿಪಿ

 ಅಜಿತ್ ಪವಾರ್ ಅವರು ಆಡಳಿತಾರೂಢ ಬಿಜೆಪಿಯೊಂದಿಹೆ ಬೆಳೆಯುತ್ತಿರುವ ಸಾಮೀಪ್ಯ ಕುರಿತು ಮಹಾರಾಷ್ಟ್ರದ ರಾಜಕೀಯ ವಲಯಗಳಲ್ಲಿ ತೀವ್ರ ಊಹಾಪೋಹಗಳು ನಡೆಯುತ್ತಿವೆ. ಕಳೆದ ವಾರ ಅವರು ತಮ್ಮ ನಿಗದಿತ ಸಭೆಗಳನ್ನು ಹಠಾತ್ತನೆ ರದ್ದುಗೊಳಿಸಿದಾಗ ಅವರ ಮುಂದಿನ ರಾಜಕೀಯ ನಡೆಯ ಬಗ್ಗೆ ವದಂತಿಗಳು ಹರಡಲು ಪ್ರಾರಂಭಿಸಿದವು.

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಸಮಾವೇಶಕ್ಕೆ ಅಜಿತ್ ಪವಾರ್ ಗೈರು; ಪಕ್ಷ ತೊರೆಯುತ್ತಾರೆ ಎಂದು ಊಹಿಸಬೇಕಾಗಿಲ್ಲ: ಎನ್​​ಸಿಪಿ
ಅಜಿತ್ ಪವಾರ್
Follow us
ರಶ್ಮಿ ಕಲ್ಲಕಟ್ಟ
|

Updated on: Apr 21, 2023 | 3:38 PM

ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (Nationalist Congress Party) ಹಿರಿಯ ನೇತಾರ ಅಜಿತ್ ಪವಾರ್ (Ajit Pawar) ಮುಂಬೈನಲ್ಲಿ ನಡೆಯುತ್ತಿರುವ ಪಕ್ಷದ ಸಮಾವೇಶಕ್ಕೆ ಇಂದು(ಶುಕ್ರವಾರ)ಗೈರಾಗಿದ್ದಾರೆ. ಈಗಾಗಲೇ ನಿಗದಿಯಾಗಿರುವ ಕಾರ್ಯವೊಂದರಲ್ಲಿ ಭಾಗವಹಿಸಲಿರುವುದರಿಂದ ಅವರು ಈ ಸಮಾವೇಶಕ್ಕೆ ಭಾಗಿಯಾಗಿಲ್ಲ ಎನ್ನಲಾಗಿದೆ. ಅದೇ ವೇಳೆ ಪವಾರ್ ಪಕ್ಷ ತೊರೆಯಲಿದ್ದಾರೆ ಎಂಬ ಊಹಾಪೋಹಗಳಿಗೆ ಇದು ಮತ್ತಷ್ಟು ಪುಷ್ಠಿ ನೀಡಿದೆ. ಪುಣೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪವಾರ್, ಬೇರೊಂದು ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದರಿಂದ ನನಗೆ ಸಮಾವೇಶದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದಿದ್ದಾರೆ. ಅವರು ಪಕ್ಷದ ಸಭೆಗೆ ಹಾಜರಾಗದೇ ಇರುವುದರಿಂದ ಅವರು ಪಕ್ಷ ತೊರೆಯಲಿದ್ದಾರೆ ಎಂದು ಅರ್ಥೈಸಿಕೊಳ್ಳಬೇಕಾಗಿಲ್ಲ ಎಂದು ಎನ್​​ಸಿಪಿ ಹೇಳಿದೆ. ಶುಕ್ರವಾರ ಸಂಜೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ (Sharad Pawar) ಅವರು ರಾಜ್ಯ ರಾಜಧಾನಿಯಲ್ಲಿ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪಕ್ಷದ ಸಭೆ ಇಂದು ಬೆಳಗ್ಗೆ ಆರಂಭವಾಗಿದೆ.

ಆಡಳಿತಾರೂಢ ಬಿಜೆಪಿಯೊಂದಿಗೆ ಅಜಿತ್ ಪವಾರ್ ಅವರ ಸಾಮೀಪ್ಯ ಕುರಿತು ಮಹಾರಾಷ್ಟ್ರದ ರಾಜಕೀಯ ವಲಯಗಳಲ್ಲಿ ತೀವ್ರ ಊಹಾಪೋಹಗಳು  ಕೇಳಿಬರುತ್ತಿವೆ. ಕಳೆದ ವಾರ ಅವರು ತಮ್ಮ ನಿಗದಿತ ಸಭೆಗಳನ್ನು ಹಠಾತ್ತನೆ ರದ್ದುಗೊಳಿಸಿದಾಗ ಅವರ ಮುಂದಿನ ರಾಜಕೀಯ ನಡೆಯ ಬಗ್ಗೆ ವದಂತಿಗಳು ಹರಡಲು ಪ್ರಾರಂಭಿಸಿದವು. ಅವರು ಬಿಜೆಪಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪಾಳೆಯದ ಬಗ್ಗೆ ಮೃದುವಾದ ಕಾಮೆಂಟ್‌ಗಳನ್ನು ಮಾಡಿದ್ದರು.

ಬಿಜೆಪಿ ಶಿಂಧೆ ಸರ್ಕಾರದ ಭಾಗವಾಗಿದೆ.

ಸಭೆಯಲ್ಲಿ ಅಜಿತ್ ಪವಾರ್ ಗೈರುಹಾಜರಿಯ ಬಗ್ಗೆ ಮಾತನಾಡಿದ ಎನ್‌ಸಿಪಿ ವಕ್ತಾರ ಕ್ಲೈಡ್ ಕ್ರಾಸ್ಟೊ, ಪಕ್ಷದ ಮುಂಬೈ ಕಾರ್ಯಕ್ರಮವನ್ನು ಒಂದು ತಿಂಗಳ ಹಿಂದೆ ಯೋಜಿಸಲಾಗಿತ್ತು. ಅಜಿತ್ ದಾದಾ ಅವರು ನಿರಂತರವಾಗಿ ಕಾರ್ಯನಿರತರಾಗಿದ್ದಾರೆ. ಅವರು ಪುಣೆಯಲ್ಲಿ ಹಲವಾರು ಕಾರ್ಯಕ್ರಮಗಳಿಗೆ ಆಹ್ವಾನಗಳನ್ನು ಸ್ವೀಕರಿಸಿದ್ದಾರೆ. ಎನ್‌ಸಿಪಿ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದರು. ಎಲ್ಲಾ ನಾಯಕರು ಅನುಸರಿಸಲು ಅವರ ವೇಳಾಪಟ್ಟಿಯನ್ನು ಹೊಂದಿದ್ದಾರೆ. ಅವರು ಒಂದು ಕಾರ್ಯಕ್ಕೆ ಹಾಜರಾಗಲು ಸಾಧ್ಯವಾಗದ ಕಾರಣ, ಅವರು ಪಕ್ಷ ತ್ಯಜಿಸಲು ಯೋಜಿಸುತ್ತಿದ್ದಾರೆ ಎಂಬುದು ಸರಿಯಲ್ಲ.  ಮುಂಬೈನಲ್ಲಿ ಈ ವಾರದ ಆರಂಭದಲ್ಲಿ ನಡೆದ ‘ಇಫ್ತಾರ್’ ಕೂಟಕ್ಕೆ ಅವರು (ಶರದ್) ಪವಾರ್ ಸಾಹೇಬ್ ಅವರೊಂದಿಗೆ ಹಾಜರಿದ್ದರು ಎಂದು ಕ್ರಾಸ್ಟೊ ಹೇಳಿದರು.

ಪುಣೆಯಲ್ಲಿ, ಅಜಿತ್ ಪವಾರ್ ಅವರು ಒಂದೇ ಸಮಯದಲ್ಲಿ ನಡೆಯುವ ಎರಡು ರಾಜಕೀಯ ಕಾರ್ಯಕ್ರಮಗಳಲ್ಲಿ ಒಂದನ್ನು ಆರಿಸಬೇಕಾಗುತ್ತದೆ. ಮುಂಬೈನಲ್ಲಿ ಪಕ್ಷದ ಸಭೆಗೆ ಗೈರುಹಾಜರಾಗಿರುವ ಬಗ್ಗೆ ಕೇಳಿದಾಗ, “ಯಾವುದೇ ಅನುಮಾನ ಬೇಡ ಎಂದಿದ್ದಾರೆ ಕ್ರಾಸ್ಟೊ.

ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿಯಾಗಿರುವ ಅಜಿತ್ ಪವಾರ್ ಅವರು ಬದುಕಿರುವವರೆಗೂ ಪಕ್ಷಕ್ಕಾಗಿ ಕೆಲಸ ಮಾಡುವುದಾಗಿ ಮಂಗಳವಾರ ಹೇಳಿದ್ದರು.

ಇದನ್ನೂ ಓದಿ: ಅಮೆರಿಕದ ಗ್ಯಾಸ್ ಸ್ಟೇಷನ್​​ನಲ್ಲಿ ಭಾರತೀಯ ವಿದ್ಯಾರ್ಥಿ ಗುಂಡಿಗೆ ಬಲಿ; ಶಂಕಿತ ದಾಳಿಕೋರರ ಫೋಟೊ ಬಿಡುಗಡೆ

2019 ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಹೊರಬಿದ್ದ ನಂತರ ಮತ್ತು ಶಿವಸೇನೆ (ಅವಿಭಜಿತ) ಮಿತ್ರಪಕ್ಷ ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡ ನಂತರ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಯಲ್ಲಿದ್ದಾಗ, ಅಜಿತ್ ಪವಾರ್ ಅವರು ದೇವೇಂದ್ರ ಫಡ್ನವಿಸ್ ಅವರೊಂದಿಗೆ ರಹಸ್ಯವಾಗಿ ಕೈಜೋಡಿಸಿದ್ದರು. ಈಗ  ಫಡ್ನವಿಸ್ ಮುಖ್ಯಮಂತ್ರಿಯಾಗಿ ಪವಾರ್ ಉಪಮುಖ್ಯಮಂತ್ರಿಯಾಗಿ ಸರ್ಕಾರ ರಚನೆಯಾಗಿತ್ತು. ಆದರೆ, ಅಜಿತ್ ಪವಾರ್ ರಾಜೀನಾಮೆ ನೀಡಿದ ನಂತರ ಆ ಸರ್ಕಾರ ಕೇವಲ 80 ಗಂಟೆಗಳ ಕಾಲ ನಡೆಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ