Maharashtra Politics: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್(Ajit Pawar)  ಪ್ರಮಾಣವಚನ ಸ್ವೀಕರಿಸಿದ್ದಾರೆ. ಎನ್​ಸಿಪಿಯ ಅಜಿತ್ ಪವಾರ್ 9 ನಾಯಕರೊಂದಿಗೆ ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಗೊಂಡಿದ್ದಾರೆ.

Maharashtra Politics: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ
ಅಜಿತ್ ಪವಾರ್

Updated on: Jul 02, 2023 | 2:54 PM

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್(Ajit Pawar)  ಪ್ರಮಾಣವಚನ ಸ್ವೀಕರಿಸಿದ್ದಾರೆ. ಎನ್​ಸಿಪಿಯ ಅಜಿತ್ ಪವಾರ್ 9 ನಾಯಕರೊಂದಿಗೆ ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಗೊಂಡಿದ್ದಾರೆ. ಪವಾರ್ ಅವರು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಉಪಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಳ್ಳಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, 53 ಎನ್‌ಸಿಪಿ ಶಾಸಕರ ಪೈಕಿ 43 ಶಾಸಕರ ಬೆಂಬಲವನ್ನು ಅಜಿತ್ ಪವಾರ್ ಹೊಂದಿದ್ದಾರೆ.

ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಕೆಳಗಿಳಿಯುವ ಇಚ್ಛೆಯನ್ನು ಪವಾರ್ ಸಾರ್ವಜನಿಕವಾಗಿ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಈ ಮಹತ್ವದ ಬೆಳವಣಿಗೆ ನಡೆದಿದೆ. ಇಂದು ಮುಂಜಾನೆ, ಎನ್‌ಸಿಪಿ ಶಾಸಕರ ಗುಂಪು ಅಜಿತ್ ಪವಾರ್ ಅವರ ಮುಂಬೈ ನಿವಾಸದಲ್ಲಿ ಸಭೆ ನಡೆಸಿತು, ಅಲ್ಲಿ ಪಕ್ಷದ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಲೆ ಮತ್ತು ಹಿರಿಯ ನಾಯಕ ಛಗನ್ ಭುಜಬಲ್ ಕೂಡ ಹಾಜರಿದ್ದರು. ಪಕ್ಷದ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಸಭೆಗೆ ಹಾಜರಾಗಿರಲಿಲ್ಲ.

ಮತ್ತಷ್ಟು ಓದಿ: Maharashtra Politics: ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಶಿಂದೆ ಸರ್ಕಾರ ಸೇರಲಿದ್ದಾರೆ ಅಜಿತ್ ಪವರ್: 29 ಶಾಸಕರ ಬೆಂಬಲ

ಈ ಮಧ್ಯೆ, ಮುಂಬೈನಲ್ಲಿ ನಡೆದ ಸಭೆಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಶರದ್ ಪವಾರ್ ಪುಣೆಯಲ್ಲಿ ಸುದ್ದಿಗಾರರಿಗೆ ಹೇಳಿದ್ದರು.

 

ರಾಷ್ಟ್ರೀಯ ದುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:46 pm, Sun, 2 July 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us