AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಟಲಿನ ಸೋಂಕಿನಿಂದ ಎನ್​ಸಿಪಿ ನಾಯಕ ಶರದ್ ಪವಾರ್ ಆಸ್ಪತ್ರೆಗೆ ದಾಖಲು

ಎನ್‌ಸಿಪಿಯ ಹಿರಿಯ ನಾಯಕ ಶರದ್ ಪವಾರ್ ಗಂಟಲು ನೋವಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದಾಗಿ ಇಂದು ಪುಣೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯ ಹದಗೆಟ್ಟ ನಂತರ ಇಂದು ಅವರನ್ನು ಮಹಾರಾಷ್ಟ್ರದ ಬಾರಾಮತಿಯಿಂದ ಪುಣೆಗೆ ಕರೆದೊಯ್ಯಲಾಯಿತು. ಈ ಸಮಯದಲ್ಲಿ ಅವರ ಮಗಳು ಸುಪ್ರಿಯಾ ಸುಳೆ ಮತ್ತು ಪತ್ನಿ ಪ್ರತಿಭಾ ಪವಾರ್ ಅವರೊಂದಿಗೆ ಇದ್ದರು. ಕೆಮ್ಮು, ಶೀತ ಮತ್ತು ಉಸಿರಾಟದ ತೊಂದರೆ ಸೇರಿದಂತೆ ಗಂಟಲಿನ ಸೋಂಕಿನ ಲಕ್ಷಣಗಳು ಕಂಡುಬಂದ ನಂತರ ಅವರನ್ನು ಪುಣೆಯ ರೂಬಿ ಹಾಲ್ ಕ್ಲಿನಿಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಗಂಟಲಿನ ಸೋಂಕಿನಿಂದ ಎನ್​ಸಿಪಿ ನಾಯಕ ಶರದ್ ಪವಾರ್ ಆಸ್ಪತ್ರೆಗೆ ದಾಖಲು
Sharad Pawar
ಸುಷ್ಮಾ ಚಕ್ರೆ
|

Updated on:Feb 09, 2026 | 4:23 PM

Share

ಪುಣೆ, ಫೆಬ್ರವರಿ 9: ಎನ್​ಸಿಪಿ ನಾಯಕ ಶರದ್ ಪವಾರ್ (Sharad Pawar) ಗಂಟಲು ಸಂಬಂಧಿತ ಸಮಸ್ಯೆಗಳು, ಕೆಮ್ಮು ಮತ್ತು ಜ್ವರದ ಕಾರಣದಿಂದ ಇಂದು ಮಧ್ಯಾಹ್ನ ಪುಣೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಅವರನ್ನು ಮಹಾರಾಷ್ಟ್ರದ ಬಾರಾಮತಿಯಲ್ಲಿರುವ ಅವರ ನಿವಾಸದಿಂದ ಆಸ್ಪತ್ರೆಗೆ ಸೇರಿಸಲಾಯಿತು. ಬಾರಾಮತಿಯಲ್ಲಿದ್ದಾಗಲೇ ಅವರು ಅಸ್ವಸ್ಥರಾಗಿದ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದರೂ ಅವರ ಅನಾರೋಗ್ಯ ಮುಂದುವರಿದ ಕಾರಣದಿಂದ ಚಿಕಿತ್ಸೆಗಾಗಿ ಅವರನ್ನು ಪುಣೆಗೆ ಸ್ಥಳಾಂತರಿಸಲು ವೈದ್ಯರು ಸಲಹೆ ನೀಡಿದರು.

ಎನ್‌ಸಿಪಿ ನಾಯಕ ಶರದ್ ಪವಾರ್ ಗಂಟಲು ಸೋಂಕಿನಿಂದ ಬಳಲುತ್ತಿದ್ದಾರೆ. ಅವರು ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. “ಆಸ್ಪತ್ರೆಗೆ ಬಂದ ನಂತರ ವೈದ್ಯರ ತಂಡವು ಅವರನ್ನು ಪರಿಶೀಲಿಸುತ್ತಿದೆ. ವೈದ್ಯರ ಸಲಹೆಯ ಮೇರೆಗೆ ಮುಂದಿನ ಕ್ರಮವನ್ನು ನಿರ್ಧರಿಸಲಾಗುತ್ತದೆ” ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಜಿತ್ ಪವಾರ್ ಸಾವಿನಲ್ಲಿ ಷಡ್ಯಂತ್ರವಿಲ್ಲ, ಅದೊಂದು ಅಪಘಾತ; ಶರದ್ ಪವಾರ್ ಮೊದಲ ಪ್ರತಿಕ್ರಿಯೆ

ಎನ್​ಸಿಪಿ ಸಂಸದೆ ಮತ್ತು ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಮತ್ತು ಅವರ ಅಳಿಯ ಸದಾನಂದ ಸುಳೆ ಆಸ್ಪತ್ರೆಯಲ್ಲಿ ಶರದ್ ಪವಾರ್ ಅವರೊಂದಿಗೆ ಇದ್ದಾರೆ. ಎನ್​ಸಿಪಿ ನಾಯಕರು ಮತ್ತು ಬೆಂಬಲಿಗರು ಶರದ್ ಪವಾರ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮರಣದ ನಂತರವೂ ಶರದ್ ಪವಾರ್ ಜನರನ್ನು ಭೇಟಿ ಮಾಡುವುದನ್ನು ಮತ್ತು ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದರು. ವೈದ್ಯರು ವೈದ್ಯಕೀಯ ಪರೀಕ್ಷೆಯನ್ನು ಪೂರ್ಣಗೊಳಿಸಿ, ಚಿಕಿತ್ಸೆಗೆ ಅವರ ಪ್ರತಿಕ್ರಿಯೆಯನ್ನು ಪರಿಶೀಲಿಸಿದ ನಂತರ ಅವರ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ಸಿಗುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Mon, 9 February 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್: ಮಹದೇವಪ್ಪ
ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್: ಮಹದೇವಪ್ಪ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
2 ಹಸು ವಿತರಣೆ ಭರವಸೆಯ ಹಿಂದಿನ ಅಸಲಿ ಗೇಮ್‌ಪ್ಲಾನ್ ಏನು ಗೊತ್ತಾ?
2 ಹಸು ವಿತರಣೆ ಭರವಸೆಯ ಹಿಂದಿನ ಅಸಲಿ ಗೇಮ್‌ಪ್ಲಾನ್ ಏನು ಗೊತ್ತಾ?
ಗರ್ಭಿಣಿ ಮಹಿಳೆಯರಂತೆಯೇ ಎರಡು ಹಸುಗಳಿಗೆ ಸೀಮಂತ ಸಂಭ್ರಮ
ಗರ್ಭಿಣಿ ಮಹಿಳೆಯರಂತೆಯೇ ಎರಡು ಹಸುಗಳಿಗೆ ಸೀಮಂತ ಸಂಭ್ರಮ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ