ವಿಧಾನಸಭೆ ಚುನಾವಣೆ ವಿಭಿನ್ನವಾಗಿರುತ್ತದೆ; ಸೀಟು ಹಂಚಿಕೆ ಬಗ್ಗೆ ದೊಡ್ಡ ಸುಳಿವು ಕೊಟ್ಟ ಶರದ್ ಪವಾರ್

ಈ ವರ್ಷದ ಕೊನೆಯಲ್ಲಿ ಹರಿಯಾಣ ಮತ್ತು ಜಾರ್ಖಂಡ್‌ನ ಚುನಾವಣೆಗಳೊಂದಿಗೆ ಮಹಾರಾಷ್ಟ್ರದಲ್ಲಿ ಕೂಡ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಎನ್‌ಸಿಪಿ-ಶರದ್‌ ಪವಾರ್, ಶಿವಸೇನೆ (ಉದ್ಧವ್ ಠಾಕ್ರೆ) ಮತ್ತು ಕಾಂಗ್ರೆಸ್ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಸದಸ್ಯರಾಗಿದ್ದಾರೆ.

ವಿಧಾನಸಭೆ ಚುನಾವಣೆ ವಿಭಿನ್ನವಾಗಿರುತ್ತದೆ; ಸೀಟು ಹಂಚಿಕೆ ಬಗ್ಗೆ ದೊಡ್ಡ ಸುಳಿವು ಕೊಟ್ಟ ಶರದ್ ಪವಾರ್
ಶರದ್ ಪವಾರ್
Follow us
|

Updated on: Jun 22, 2024 | 3:35 PM

ಮುಂಬೈ: ಮಹಾ ವಿಕಾಸ್ ಅಘಾಡಿ (MVA)ಯ ವಿಧಾನಸಭಾ ಚುನಾವಣೆಗೆ (Assembly Elections) ಸೀಟು ಹಂಚಿಕೆಯ ಮಾತುಕತೆಯ ಸಂದರ್ಭದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್​ಸಿಪಿ) ಶರದ್ ಪವಾರ್ (Sharad Pawar) ಅವರು ಹೆಚ್ಚಿನ ಸೀಟುಗಳನ್ನು ಬೇಡಿಕೆಯಿಡುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಶುಕ್ರವಾರ ಪುಣೆಯಲ್ಲಿ ನಡೆದ ಎನ್‌ಸಿಪಿ ಸಭೆಯಲ್ಲಿ ಉಪಸ್ಥಿತರಿದ್ದ ಶರದ್ ಪವಾರ್, ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ಕಡಿಮೆ ಸಂಖ್ಯೆಯ ಸ್ಥಾನಗಳಲ್ಲಿ ಸ್ಪರ್ಧಿಸಿದೆ ಎಂದು ಪಕ್ಷದ ಹಿರಿಯ ನಾಯಕರು ಮತ್ತು ಹೊಸದಾಗಿ ಚುನಾಯಿತ ಸಂಸದರಿಗೆ ಹೇಳಿದ್ದಾರೆ. ಆದರೆ, ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನಾವು ಕಡಿಮೆ ಸಂಖ್ಯೆಯ ಸ್ಥಾನಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ಅರ್ಥವಲ್ಲ ಎಂದಿದ್ದಾರೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆಗೆ ಎನ್‌ಸಿಪಿ ಗೌರವಾನ್ವಿತ ಸ್ಥಾನಗಳಿಗೆ ಬೇಡಿಕೆ ಇಡಲಿದೆ ಎಂದು ಶರದ್ ಪವಾರ್ ಪಕ್ಷದ ನಾಯಕರಿಗೆ ತಿಳಿಸಿದ್ದಾರೆ. ಅವರು ಮುಂಬರುವ ಚುನಾವಣೆಯಲ್ಲಿ MVAಯ ಭಾಗವಾಗಿ ಸ್ಪರ್ಧಿಸಲಿದ್ದಾರೆ. ಆದ್ದರಿಂದ ಬಣದ ಏಕತೆಗೆ ಅಡ್ಡಿಪಡಿಸುವ ಯಾವುದೇ ಪ್ರಚೋದನೆಯನ್ನು ನೀಡಬಾರದು ಎಂದು ಶರದ್ ಪವಾರ್ ಹೇಳಿದ್ದಾರೆ.

ಇದನ್ನೂ ಓದಿ: Atal Setu: ಅಟಲ್ ಸೇತು ಮೇಲೆ ಬಿರುಕು; ಮಹಾರಾಷ್ಟ್ರ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಿರುಗೇಟು

ಸರ್ಕಾರದ ಮೇಲೆ ಒತ್ತಡ ಹೇರಲು ಜಾತಿ ಗಣತಿಯ ಬೇಡಿಕೆಯನ್ನು ಬಲವಾಗಿ ಎತ್ತುವಂತೆ ಮತ್ತು ವಿಧಾನಸಭೆಯಲ್ಲಿ ಮರಾಠಾ, ಧಂಗರ್ ಮತ್ತು ಲಿಂಗಾಯತ ಮೀಸಲಾತಿ ವಿಷಯವನ್ನು ಪ್ರಸ್ತಾಪಿಸುವಂತೆ ಪಕ್ಷದ ವರಿಷ್ಠರು ಹೊಸದಾಗಿ ಚುನಾಯಿತರಾದ ಸಂಸದರಿಗೆ ಸೂಚಿಸಿದ್ದಾರೆ.

ಮೈತ್ರಿಯನ್ನು ಉಳಿಸಿಕೊಳ್ಳಲು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ತನ್ನ ಮಹಾ ವಿಕಾಸ್ ಅಘಾಡಿ (MVA) ಮಿತ್ರಪಕ್ಷಗಳಿಗೆ ಕಡಿಮೆ ಸ್ಥಾನಗಳನ್ನು ಬಿಟ್ಟುಕೊಟ್ಟಿದ್ದ ಎನ್​ಸಿಪಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ದೃಢವಾದ ನಿಲುವನ್ನು ಅನುಸರಿಸಲು ಸಜ್ಜಾಗಿದೆ. ಶುಕ್ರವಾರ ನಡೆದ ಪ್ರಮುಖ ಸಭೆಗಳ ಸರಣಿಯಲ್ಲಿ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಪುಣೆ ನಗರ ಮತ್ತು ಜಿಲ್ಲೆಯ ಪಕ್ಷದ ಪದಾಧಿಕಾರಿಗಳನ್ನು ಒಟ್ಟುಗೂಡಿಸಿದ್ದಾರೆ. ನಂತರ ಶಾಸಕರು ಮತ್ತು ಹೊಸದಾಗಿ ಚುನಾಯಿತ ಸಂಸದರೊಂದಿಗೆ ಅಧಿವೇಶನ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ