Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರದ್ ಪವಾರ್ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಲು 2-3 ದಿನಗಳನ್ನು ತೆಗೆದುಕೊಳ್ಳಲಿದ್ದಾರೆ: ಅಜಿತ್ ಪವಾರ್

ನಾನು ಎನ್‌ಸಿಪಿ ಅಧ್ಯಕ್ಷನಾಗಿ ಕೆಲಸ ಮಾಡುವುದನ್ನು ನಿಲ್ಲಿಸಲು ನಿರ್ಧರಿಸಿದ್ದೇನೆ. ನಾನು ಇನ್ನು ಮುಂದೆ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಜೀವನದಲ್ಲಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಪವಾರ್ ಹೇಳಿದ್ದಾರೆ.

ಶರದ್ ಪವಾರ್ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಲು 2-3 ದಿನಗಳನ್ನು ತೆಗೆದುಕೊಳ್ಳಲಿದ್ದಾರೆ: ಅಜಿತ್ ಪವಾರ್
ಅಜಿತ್ ಪವಾರ್
Follow us
ರಶ್ಮಿ ಕಲ್ಲಕಟ್ಟ
|

Updated on: May 02, 2023 | 8:58 PM

ಶರದ್ ಪವಾರ್(Sharad Pawar) ಅವರು ಮಂಗಳವಾರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವುದಾಗಿ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅಜಿತ್ ಪವಾರ್(Ajit Pawar), ಶರದ್ ಪವಾರ್ ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಲು ಎರಡರಿಂದ ಮೂರು ದಿನಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಕಾರ್ಯಕರ್ತರು ಸಾಕಷ್ಟು ಅಸಮಾಧಾನಗೊಂಡಿದ್ದಾರೆ ಎಂದು ನಾವು ಅವರಿಗೆ (ಶರದ್ ಪವಾರ್) ಹೇಳಿದ್ದೇವೆ. ಕಾರ್ಯಾಧ್ಯಕ್ಷರ ಜೊತೆಗೆ ಪಕ್ಷದ ಅಧ್ಯಕ್ಷರಾಗಿ ಉಳಿಯಬೇಕೆಂದು ಪಕ್ಷದ ಕಾರ್ಯಕರ್ತರು ಬಯಸುತ್ತಾರೆ ಎಂದು ನಾವು ಅವರಿಗೆ ಹೇಳಿದ್ದೇವೆ. ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವುದಾಗಿ ಅವರು ಹೇಳಿದ್ದು ಅದಕ್ಕೆ 2-3 ದಿನಗಳು ಬೇಕು ಎಂದು ಸುದ್ದಿಗಾರರರೊಂದಿಗೆ ಮಾತನಾಡಿದ ಎನ್‌ಸಿಪಿ ನಾಯಕ, ಶರದ್ ಪವಾರ್ ಅವರ ಸೋದರಳಿಯ ಅಜಿತ್ ಪವಾರ್ ಹೇಳಿದ್ದಾರೆ. ಶರದ್ ಪವಾರ್ ನಿರ್ಧಾರ ವಾಪಸ್ ಪಡೆಯಬೇಕು ಎಂದು ಪಕ್ಷದ ಕಾರ್ಯಕರ್ತರು ಮುಂಬೈನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯಸಭೆಯಲ್ಲಿ ನನಗೆ ಮೂರು ವರ್ಷಗಳ ಅಧಿಕಾರವಿದೆ. ನಾನು ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶರದ್ ಪವಾರ್ ಹೇಳಿದ್ದಾರೆ.1999 ರಲ್ಲಿ ಪಕ್ಷವನ್ನು ಸ್ಥಾಪಿಸಿದ ಎನ್‌ಸಿಪಿ ಮುಖ್ಯಸ್ಥ ಪವಾರ್, ತಮ್ಮ ಆತ್ಮಚರಿತ್ರೆಯ ಎರಡನೇ ಆವೃತ್ತಿ ‘ಲೋಕ್ ಮಾಜೆ ಸಂಗಟಿ’ ಬಿಡುಗಡೆ ಸಮಾರಂಭದಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಾನು ನನ್ನ ರಾಜಕೀಯ ಜೀವನವನ್ನು ಮೇ 1, 1960 ರಂದು ಪ್ರಾರಂಭಿಸಿದೆ. ನಿನ್ನೆ ನಾವು ಮೇ ದಿನವನ್ನು ಆಚರಿಸಿದ್ದೇವೆ. ಈ ಸುದೀರ್ಘ ರಾಜಕೀಯ ಜೀವನದ ನಂತರ ಅದನ್ನು ಎಲ್ಲೋ ನಿಲ್ಲಿಸುವ ಬಗ್ಗೆ ಯೋಚಿಸಬೇಕು. ವ್ಯಕ್ತಿಗೆ ದುರಾಸೆ ಇರಬಾರದು ಎಂದು ಅವರು ಹೇಳಿದ್ದಾರೆ.

ಮುಂದಿನ ಕ್ರಮವನ್ನು ನಿರ್ಧರಿಸಲು ಹಿರಿಯ ಎನ್‌ಸಿಪಿ ನಾಯಕರನ್ನು ಒಳಗೊಂಡ ಸಮಿತಿಯನ್ನು ರಚಿಸುವಂತೆ ಪವಾರ್ ಶಿಫಾರಸು ಮಾಡಿದ್ದಾರೆ. ಸಮಿತಿಯಲ್ಲಿ ಪ್ರಫುಲ್ ಪಟೇಲ್, ಸುನಿಲ್ ತಟ್ಕರೆ, ಪಿ ಸಿ ಚಾಕೋ, ನರಹರಿ ಜಿರ್ವಾಲ್, ಅಜಿತ್ ಪವಾರ್, ಸುಪ್ರಿಯಾ ಸುಳೆ, ಜಯಂತ್ ಪಾಟೀಲ್, ಛಗನ್ ಭುಜಬಲ್, ದಿಲೀಪ್ ವಾಲ್ಸೆ-ಪಾಟೀಲ್, ಅನಿಲ್ ದೇಶಮುಖ್, ರಾಜೇಶ್ ಟೋಪೆ, ಜಿತೇಂದ್ರ ಅವ್ಹಾದ್, ಹಸನ್ ಮುಶ್ರಿಫ್, ಧನಂಜಯ್ ಮುಂಡೆ, ಜಯದೇವ್ ಗಾಯಕ್ವಾಡ್ ಮತ್ತು ಪಕ್ಷದ ವಿವಿಧ ಘಟಕಗಳ ಮುಖ್ಯಸ್ಥರು ಇದ್ದಾರೆ ಎಂದು ಪವಾರ್ ಹೇಳಿದ್ದಾರೆ.

ನಾನು ಎನ್‌ಸಿಪಿ ಅಧ್ಯಕ್ಷನಾಗಿ ಕೆಲಸ ಮಾಡುವುದನ್ನು ನಿಲ್ಲಿಸಲು ನಿರ್ಧರಿಸಿದ್ದೇನೆ. ನಾನು ಇನ್ನು ಮುಂದೆ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಜೀವನದಲ್ಲಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಪವಾರ್ ಹೇಳಿದ್ದಾರೆ.

ಇದನ್ನೂ ಓದಿ: ಶರದ್ ಪವಾರ್ ರಾಜೀನಾಮೆ: ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ಸುಪ್ರಿಯಾ ಸುಳೆ, ಅಜಿತ್ ಪವಾರ್ ಆಕಾಂಕ್ಷಿ?

ನಿರ್ಧಾರವನ್ನು ಹಿಂಪಡೆಯಲು ಒತ್ತಾಯಿಸಿದ ಎನ್​​ಸಿಪಿ ಕಾರ್ಯಕರ್ತರು

ಪವಾರ್ ಅವರ ಸಮ್ಮುಖದಲ್ಲಿ ಎನ್‌ಸಿಪಿ ನಾಯಕರು ಮತ್ತು ಕಾರ್ಯಕರ್ತರು ಪವಾರ್ ನಿರ್ಧಾರ ಹಿಂಪಡೆಯಬೇಕು ಎಂದು ಘೋಷಣೆ ಕೂಗಿದ್ದಾರೆ. ಪವಾರ್ ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವವರೆಗೆ ನಾವು ಸಭಾಂಗಣದಿಂದ ಹೊರ ಹೋಗುವುದಿಲ್ಲ. ಸಾಹೇಬರ ನಿರ್ಧಾರವನ್ನು ನಾವು ಒಪ್ಪುವುದಿಲ್ಲ. ಅದನ್ನು ಹಿಂಪಡೆಯಲು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ. ನೀವು ಅದನ್ನು ಮಾಡುವವರೆಗೂ ನಾವು ಕದಲುವುದಿಲ್ಲ ಎಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.

ಅವರು (ಪವಾರ್) ಅಗ್ರಸ್ಥಾನದಲ್ಲಿ ಉಳಿಯುವುದು ಮಹಾರಾಷ್ಟ್ರಕ್ಕೆ ಮಾತ್ರವಲ್ಲದೆ ದೇಶಕ್ಕೆ ಮುಖ್ಯವಾಗಿದೆ. ಈ ದಿಢೀರ್ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ, ಅಂತಹ ನಿರ್ಧಾರ ತೆಗೆದುಕೊಳ್ಳುವ ಹಕ್ಕು ಅವರಿಗೆ ಇಲ್ಲ. ಅವರ ಅನುಭವ ನಮಗೆ ಇಂದಿಗೂ ಬೇಕು. ನೀವು ನಮ್ಮೆಲ್ಲರ ರಾಜೀನಾಮೆಯನ್ನು ತೆಗೆದುಕೊಳ್ಳಬಹುದು. ನಿಮಗೆ ಬೇಕಾದ ರೀತಿಯಲ್ಲಿ ಪಕ್ಷವನ್ನು ರೂಪಿಸಿ. ಆದರೆ ಪಕ್ಷ ಬಿಡುವುದಿಲ್ಲ. ನೀವು ಇಲ್ಲದೆ ನಾವು ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಎನ್‌ಸಿಪಿ ನಾಯಕ ಜಯಂತ್ ಪಾಟೀಲ್ ಕಣ್ಣೀರಿಟ್ಟಿದ್ದಾರೆ.

ನನ್ನ ಸಹೋದ್ಯೋಗಿಗಳೇ, ನಾನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಿದ್ದರೂ, ನಾನು ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುತ್ತಿಲ್ಲ. ನಿರಂತರ ಪ್ರಯಾಣ’ನನ್ನ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಸಾರ್ವಜನಿಕ ಕಾರ್ಯಕ್ರಮಗಳು, ಸಭೆಗಳಲ್ಲಿ ಭಾಗವಹಿಸುವುದನ್ನು ಮುಂದುವರಿಸುತ್ತೇನೆ. ನಾನು ಪುಣೆ, ಮುಂಬೈ, ಬಾರಾಮತಿ, ದೆಹಲಿ ಅಥವಾ ಭಾರತದ ಯಾವುದೇ ಭಾಗದಲ್ಲಿದ್ದರೂ, ನಾನು ಎಂದಿನಂತೆ ನಿಮ್ಮೆಲ್ಲರಿಗೂ ಸಿಗುತ್ತಿರುತ್ತೇನೆ ಎಂದು ಶರದ್ ಪವಾರ್ ಎನ್‌ಸಿಪಿ ಕಾರ್ಯಕರ್ತರಲ್ಲಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ