AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ವಿರುದ್ಧದ ಪೋಸ್ಟ್​, ಸುಪ್ರಿಯಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಮಹಿಳಾ ಆಯೋಗ ಒತ್ತಾಯ

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ನಟಿ ಕಂಗನಾ ರಣಾವತ್(Kangana Ranaut) ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೆಟ್ ಅವರ ಸಂಕಷ್ಟ ಹೆಚ್ಚುತ್ತಿದೆ. ಈ ವಿಚಾರದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗವು ಅವಹೇಳನಕಾರಿ ಹೇಳಿಕೆಗಳಿಗಾಗಿ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೆಟ್ ಮತ್ತು ಪಕ್ಷದ ಮುಖಂಡ ಎಚ್‌ಎಸ್ ಅಹಿರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಕಂಗನಾ ವಿರುದ್ಧದ ಪೋಸ್ಟ್​, ಸುಪ್ರಿಯಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಮಹಿಳಾ ಆಯೋಗ ಒತ್ತಾಯ
ಕಂಗನಾ ರಣಾವತ್-ಸುಪ್ರಿಯಾImage Credit source: ABP Live
ನಯನಾ ರಾಜೀವ್
|

Updated on: Mar 26, 2024 | 11:46 AM

Share

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ನಟಿ ಕಂಗನಾ ರಣಾವತ್(Kangana Ranaut) ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೆಟ್ ಅವರ ಸಂಕಷ್ಟ ಹೆಚ್ಚುತ್ತಿದೆ. ಈ ವಿಚಾರದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗವು ಅವಹೇಳನಕಾರಿ ಹೇಳಿಕೆಗಳಿಗಾಗಿ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೆಟ್ ಮತ್ತು ಪಕ್ಷದ ಮುಖಂಡ ಎಚ್‌ಎಸ್ ಅಹಿರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ರಾಷ್ಟ್ರೀಯ ಮಹಿಳಾ ಆಯೋಗ (NCW) ಪೋಸ್ಟ್‌ನಲ್ಲಿ ತಿಳಿಸಿದೆ, ಕಂಗನಾ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ಮತ್ತು ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ ಅಹಿರ್ ಅವರ ಅಗೌರವದ ನಡವಳಿಕೆಯಿಂದ ಆಘಾತಕ್ಕೊಳಗಾಗಿದ್ದಾರೆ. ಇಂತಹ ನಡವಳಿಕೆಯು ಅಸಹನೀಯ ಮತ್ತು ಮಹಿಳೆಯರ ಘನತೆಗೆ ವಿರುದ್ಧವಾಗಿದೆ ಶರ್ಮರೇಖಾ ಅವರು ಭಾರತದ ಚುನಾವಣಾ ಆಯುಕ್ತರಿಗೆ ಪತ್ರವನ್ನು ಕಳುಹಿಸಿದ್ದು, ಅವರ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಎಲ್ಲಾ ಮಹಿಳೆಯರ ಬಗ್ಗೆ ಗೌರವ ಮತ್ತು ಘನತೆಯನ್ನು ಕಾಪಾಡಿಕೊಳ್ಳೋಣ ಎಂದು ಬರೆದಿದ್ದಾರೆ.

ಕಾಂಗ್ರೆಸ್ ಸೋಷಿಯಲ್ ಮೀಡಿಯಾವನ್ನು ನಿಭಾಯಿಸುತ್ತಿರುವ ಸುಪ್ರಿಯಾ ಇನ್‌ಸ್ಟಾಗ್ರಾಂ ಹ್ಯಾಂಡಲ್‌ನಿಂದ ಪೋಸ್ಟ್ ಮಾಡಿದ ನಂತರ ವಿವಾದ ಹುಟ್ಟಿಕೊಂಡಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಕಂಗನಾ ರಣಾವತ್‌ ಅಭ್ಯರ್ಥಿಯಾಗಿರುವ ಬಗ್ಗೆ ಟೀಕಿಸಿದ್ದರು.

ಮತ್ತಷ್ಟು ಓದಿ: ಏನಿದೆ ರೇಟ್? ಎಂದು ಕಂಗನಾ ಫೋಟೊ ಪೋಸ್ಟ್ ಮಾಡಿ ಅವಮಾನಿಸಿದ ಸುಪ್ರಿಯಾ ಶ್ರಿನೇಟ್; ಅಕೌಂಟ್ ಹ್ಯಾಕ್ ಎಂದು ಸಬೂಬು

ಕಂಗನಾ ಉತ್ತರವೇನಿತ್ತು? ಪ್ರತಿಕ್ರಿಯೆಯಾಗಿ, ಕಂಗನಾ ರಣಾವತ್ ತಮ್ಮ ಪೋಸ್ಟ್‌ನಲ್ಲಿ, ಸುಪ್ರಿಯಾ ಅವರೇ, ಕಲಾವಿದೆಯಾಗಿ ನನ್ನ ವೃತ್ತಿಜೀವನದ ಕಳೆದ 20 ವರ್ಷಗಳಲ್ಲಿ, ನಾನು ಎಲ್ಲಾ ರೀತಿಯ ಮಹಿಳೆಯರ ಪಾತ್ರಗಳನ್ನು ನಿರ್ವಹಿಸಿದ್ದೇನೆ. ಕ್ವೀನ್‌ನಲ್ಲಿನ ಮುಗ್ಧ ಹುಡುಗಿಯಿಂದ ಢಾಕಾಡ್‌ನ ಪತ್ತೇದಾರಿಯವರೆಗೆ, ಮಣಿಕರ್ಣಿಕಾದಲ್ಲಿ ದೇವತೆಯಿಂದ ಚಂದ್ರಮುಖಿಯಲ್ಲಿ ರಾಕ್ಷಸನವರೆಗೆ, ರಜ್ಜೋದಲ್ಲಿ ವೇಶ್ಯೆಯಿಂದ ತಲೈವಿಯಲ್ಲಿ ಕ್ರಾಂತಿಕಾರಿ ನಾಯಕಿವರೆಗೆ ಎಲ್ಲವನ್ನೂ ನಿಭಾಯಿಸಿದ್ದೇನೆ ಎಂದಿದ್ದಾರೆ.

ಸುಪ್ರಿಯಾ ಸ್ಪಷ್ಟನೆ ಏನು? ಈ ವಿವಾದದ ಬಗ್ಗೆ ಸುಪ್ರಿಯಾ ಸ್ಪಷ್ಟನೆ ನೀಡಿದ್ದಾರೆ, ಹಾಗೂ ಆ ಪೋಸ್ಟ್​ ಅನ್ನು ನಾನು ಮಾಡಿಲ್ಲ, ಖಾತೆಯಿಂದ ಯಾರೋ ಮಾಡಿದ್ದಾರೆ, ಅದನ್ನು ಡಿಲೀಟ್​ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ನನ್ನನ್ನು ತಿಳಿದಿರುವ ಯಾರಿಗಾದರೂ ನಾನು ಯಾವುದೇ ಮಹಿಳೆಯ ಬಗ್ಗೆ ವೈಯಕ್ತಿಕ ಮತ್ತು ಅಸಭ್ಯವಾಗಿ ಕಾಮೆಂಟ್ ಮಾಡಲು ಸಾಧ್ಯವಿಲ್ಲ ಎಂದು ಚೆನ್ನಾಗಿ ತಿಳಿದಿದೆ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!