ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಓಂ ಬಿರ್ಲಾ(Om Birla) ಅವರು ಲೋಕಸಭಾ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಅಭ್ಯರ್ಥಿ ಓಂ ಬಿರ್ಲಾ ಅವರನ್ನು ಬುಧವಾರ ಸದನದ ಸ್ಪೀಕರ್ ಆಗಿ ಆಯ್ಕೆ ಮಾಡಲಾಯಿತು.
ಪ್ರತಿಪಕ್ಷಗಳು ಕಾಂಗ್ರೆಸ್ ನಾಯಕ ಕೆ ಸುರೇಶ್ ಅವರನ್ನು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆ ಮಾಡಲು ಪ್ರಸ್ತಾವನೆಯನ್ನು ಮಂಡಿಸಿದ್ದವು. ಆದರೆ ಧ್ವನಿ ಮತದ ನಂತರ ಸದನವು ಪಿಎಂ ಮೋದಿ ಅವರ ಪ್ರಸ್ತಾಪವನ್ನು ಅಂಗೀಕರಿಸಿದ ನಂತರ ಅವರನ್ನು ತಿರಸ್ಕರಿಸಲಾಯಿತು.
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಭ್ಯರ್ಥಿಯನ್ನು ಒಪ್ಪಿಕೊಳ್ಳಲು ಸಾಧ್ಯವಾಗದ ಕಾರಣ ದಶಕಗಳಲ್ಲಿ ಮೊದಲ ಬಾರಿಗೆ ಲೋಕಸಭೆ ಸ್ಪೀಕರ್ ಚುನಾವಣೆ ಬುಧವಾರ ನಡೆದಿದೆ.
ಈ ಹಿಂದೆ, ಲೋಕಸಭಾ ಸ್ಪೀಕರ್ ಚುನಾವಣೆಗಳು 1952, 1967 ಮತ್ತು 1976 ರಲ್ಲಿ ಕೇವಲ ಮೂರು ಬಾರಿ ನಡೆದಿವೆ.
ಮತ್ತಷ್ಟು ಓದಿ: ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಎನ್ಡಿಎಯಿಂದ ಓಂ ಬಿರ್ಲಾ, ಇಂಡಿಯಾ ಒಕ್ಕೂಟದಿಂದ ಕೆ ಸುರೇಶ್ ನಾಮಪತ್ರ ಸಲ್ಲಿಕೆ
ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಓಂ ಬಿರ್ಲಾ ಅವರನ್ನು ಲೋಕಸಭೆಯ ಸ್ಪೀಕರ್ ಕುರ್ಚಿ ಬಳಿ ಕರೆದೊಯ್ದರು. ಲೋಕಸಭೆ ಸ್ಪೀಕರ್ ಆಯ್ಕೆಗೆ ಮೊದಲ ಬಾರಿಗೆ ಮತದಾನ ನಡೆದಿದೆ. ಅವಿರೋಧವಾಗಿ ಸ್ಪೀಕರ್ ಆಯ್ಕೆ ಮಾಡುವ ಸಂಪ್ರದಾಯವನ್ನು ಪ್ರತಿಪಕ್ಷಗಳು ಮುರಿದವು.
#WATCH | BJP MP Om Birla occupies the Chair of Lok Sabha Speaker after being elected as the Speaker of the 18th Lok Sabha.
Prime Minister Narendra Modi, LoP Rahul Gandhi and Parliamentary Affairs Minister Kiren Rijiju accompany him to the Chair. pic.twitter.com/zVU0G4yl0d
— ANI (@ANI) June 26, 2024
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಕೆಳಮನೆಯ ಸ್ಪೀಕರ್ ಆಗಿ ಓಂ ಬಿರ್ಲಾ ಅವರನ್ನು ಆಯ್ಕೆ ಮಾಡುವ ಪ್ರಸ್ತಾಪವನ್ನು ಮಂಡಿಸಿದರು. ಸಾಂಪ್ರದಾಯಿಕವಾಗಿ, ಲೋಕಸಭೆಯ ಸ್ಪೀಕರ್ ಮತ್ತು ಉಪಸಭಾಪತಿಯನ್ನು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ನಡುವಿನ ಒಮ್ಮತದ ಮೂಲಕ ಆಯ್ಕೆ ಮಾಡಲಾಗುತ್ತಿತ್ತು.
ಸ್ಪೀಕರ್ ಹುದ್ದೆಗೆ ನಡೆದ ಸ್ಪರ್ಧೆಯಲ್ಲಿ ರಾಜಸ್ಥಾನದ ಕೋಟಾದಿಂದ ಮೂರು ಬಾರಿ ಸಂಸದರಾಗಿರುವ ಬಿಜೆಪಿಯ ಓಂ ಬಿರ್ಲಾ ಅವರು ಕೇರಳದ ಮಾವೇಲಿಕರದಿಂದ ಎಂಟು ಅವಧಿಗೆ ಸಂಸದರಾಗಿರುವ ಕಾಂಗ್ರೆಸ್‌ನ ಕೋಡಿಕುನ್ನಿಲ್ ಸುರೇಶ್ ವಿರುದ್ಧ ಸ್ಪರ್ಧಿಸಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:20 am, Wed, 26 June 24