AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ. 12ರಂದು ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ; ಪ್ರಧಾನಿ ಮೋದಿ, ಜೆಪಿ ನಡ್ಡಾ ನಿರ್ಧಾರವೇ ಅಂತಿಮ

ಜಗದೀಪ್ ಧಂಖರ್ ದಿಢೀರನೆ ರಾಜೀನಾಮೆ ನೀಡಿದ್ದರಿಂದ ಉಪರಾಷ್ಟ್ರಪತಿ ಹುದ್ದೆ ಖಾಲಿಯಾಗಿದೆ. ಆಗಸ್ಟ್ 12ರಂದು ಎನ್​ಡಿಎಯಿಂದ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿ, ಜೆ.ಪಿ ನಡ್ಡಾ ಅವರೇ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ನಿರ್ಧರಿಸಲಿದ್ದಾರೆ. ಜಗದೀಪ್ ಧಂಖರ್ ಅವರ ಆಘಾತಕಾರಿ ರಾಜೀನಾಮೆಯ ನಂತರ ಪ್ರಧಾನಿ ಮೋದಿ, ಜೆ.ಪಿ ನಡ್ಡಾ ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ.

ಆ. 12ರಂದು ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ; ಪ್ರಧಾನಿ ಮೋದಿ, ಜೆಪಿ ನಡ್ಡಾ ನಿರ್ಧಾರವೇ ಅಂತಿಮ
Modi- Jp Nadda
ಸುಷ್ಮಾ ಚಕ್ರೆ
|

Updated on: Aug 07, 2025 | 7:15 PM

Share

ನವದೆಹಲಿ, ಆಗಸ್ಟ್ 7: ಉಪರಾಷ್ಟ್ರಪತಿ (Vice President) ಅಭ್ಯರ್ಥಿಯನ್ನು ಆಯ್ಕೆ ಮಾಡಲು ಬಿಜೆಪಿ ನೇತೃತ್ವದ ಎನ್​ಡಿಎ ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಅವರಿಗೆ ಅಧಿಕಾರ ನೀಡಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಇದು ಸರ್ವಾನುಮತದ ನಿರ್ಧಾರ ಎಂದು ಸಂಸದೀಯ ವ್ಯವಹಾರಗಳ ಸಚಿವರು ತಿಳಿಸಿದ್ದಾರೆ. ಇಂದು ಸಂಸತ್ತಿನ ಸಂಕೀರ್ಣದಲ್ಲಿ ಪ್ರಮುಖ ಬಿಜೆಪಿ ನಾಯಕರು ಮತ್ತು ಅವರ ಮಿತ್ರಪಕ್ಷಗಳ ಸಭೆ ನಡೆದಿದ್ದು, ಅಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಎನ್ಡಿಎ ಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಜೆ.ಪಿ ನಡ್ಡಾ ಅವರಿಗೆ ಮೈತ್ರಿಕೂಟದ ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆ ಮಾಡುವ ಅಧಿಕಾರ ನೀಡಲಾಗಿದೆ. ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಅನಾರೋಗ್ಯ ಕಾರಣಗಳಿಂದಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳ ನಂತರ ಈ ಸಭೆ ನಡೆದಿದೆ. ಮುಂಗಾರು ಅಧಿವೇಶನದ ಮೊದಲ ದಿನದಿಂದ ಉಪರಾಷ್ಟ್ರಪತಿ ಸ್ಥಾನ ತೆರವಾಗಿದೆ.

ಇದನ್ನೂ ಓದಿ: ಉಪರಾಷ್ಟ್ರಪತಿ ಜಗದೀಪ್ ಧನಖರ್ ರಾಜೀನಾಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕಾರ

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಅಭ್ಯರ್ಥಿಯ ಹೆಸರನ್ನು ಆಗಸ್ಟ್ 12ರಂದು ಘೋಷಿಸುವ ಸಾಧ್ಯತೆಯಿದೆ. ಸಂಸತ್ತಿನ ಕಟ್ಟಡದಲ್ಲಿ ನಡೆದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ನಾಯಕರ ನಿರ್ಣಾಯಕ ಸಭೆಯ ನಂತರ ಅವರ ಈ ಹೇಳಿಕೆಗಳು ಬಂದಿವೆ.

ಇದನ್ನೂ ಓದಿ: Explainer: ಜಗದೀಪ್ ಧನ್ಖರ್ ರಾಜೀನಾಮೆ, ಭಾರತದಲ್ಲಿ ಉಪ ರಾಷ್ಟ್ರಪತಿ ಆಯ್ಕೆ ಹೇಗೆ? ಪ್ರಕ್ರಿಯೆ ಏನು?

ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಶಿವಸೇನಾ ನಾಯಕ ಶ್ರೀಕಾಂತ್ ಶಿಂಧೆ, ಮಿಲಿಂದ್ ದಿಯೋರಾ, ಪ್ರಫುಲ್ ಪಟೇಲ್, ಚಿರಾಗ್ ಪಾಸ್ವಾನ್, ಉಪೇಂದ್ರ ಕುಶ್ವಾಹ, ರಾಮ್ ಮೋಹನ್, ಲಲ್ಲನ್ ಸಿಂಗ್, ಅಪ್ನಾ ದಳ (ಎಸ್) ನಾಯಕಿ ಅನುಪ್ರಿಯಾ ಪಟೇಲ್ ಮತ್ತು ರಾಮದಾಸ್ ಅಠಾವಳೆ ಸೇರಿದಂತೆ ಹಿರಿಯ ನಾಯಕರು ಇಂದಿನ ಸಭೆಯಲ್ಲಿ ಉಪಸ್ಥಿತರಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ