ಪಕ್ಷ ಯಾವುದಿರಲಿ ಸಂಸದನಿಗೆ ದೇಶವೇ ಮೊದಲ ಜವಾಬ್ದಾರಿಯಾಗಿರಬೇಕು: ನರೇಂದ್ರ ಮೋದಿ

ಪ್ರಧಾನಿ ಮೋದಿ ಸಂಸದರಿಗೆ ದೇಶವನ್ನು ಮೊದಲ ಜವಾಬ್ದಾರಿಯನ್ನಾಗಿ ನೋಡಿ, ಯಾವುದೇ ವಿಚಾರದ ಬಗ್ಗೆ ಪ್ರತಿಕ್ರಿಯಿಸುವಾಗ ಅದರ ಬಗ್ಗೆ ಅಧ್ಯಯನ ಮಾಡಿರಿ ಎಂದು ಸಲಹೆ ನೀಡಿದ್ದಾರೆ. ಪ್ರಧಾನಿ ಮೋದಿ ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡಿದ್ದು, ಮೊದಲ ಎನ್​ಡಿಎ ಸಂಸದರ ಸಭೆ ನಡೆಸಿದ್ದಾರೆ.

ಪಕ್ಷ ಯಾವುದಿರಲಿ ಸಂಸದನಿಗೆ ದೇಶವೇ ಮೊದಲ ಜವಾಬ್ದಾರಿಯಾಗಿರಬೇಕು: ನರೇಂದ್ರ ಮೋದಿ
ನರೇಂದ್ರ ಮೋದಿImage Credit source: India Today
Follow us
ನಯನಾ ರಾಜೀವ್
|

Updated on: Jul 02, 2024 | 11:55 AM

ಯಾವುದೇ ಪಕ್ಷದವರಾಗಿರಲಿ ರಾಷ್ಟ್ರ ಸೇವೆ ಎಂಬುದು ಪ್ರತಿಯೊಬ್ಬ ಸಂಸದನಿಗೂ ಮೊದಲ ಜವಾಬ್ದಾರಿಯಾಗಿರಬೇಕು, ಬೇರೆಯವರನ್ನು ಟೀಕಿಸುವ ಮುನ್ನ ವಿಷಯಗಳ ಅಧ್ಯಯನ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಸಂಸದರಿಗೆ ಸಲಹೆ ನೀಡಿದ್ದಾರೆ.

ಐತಿಹಾಸಿಕವಾಗಿ ಮೂರನೇ ಅವಧಿಗೆ ಚುನಾಯಿತರಾದ ನಂತರ ಎನ್‌ಡಿಎ ಸಂಸದರನ್ನುದ್ದೇಶಿಸಿ ಮಾಡಿದ ಮೊದಲ ಔಪಚಾರಿಕ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೂತನ ಸಂಸದರಿಗೆ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡುವಂತೆ ಸಲಹೆ ನೀಡಿದರು.

ಕಲಿಯಲು ಸಂಸತ್ತಿಗಿಂತ ಉತ್ತಮ ಸ್ಥಳವಿಲ್ಲ, ಮಹಾನ್ ಪ್ರಯಾಣದ ಬಗ್ಗೆ ತಿಳಿಯಲು ಮತ್ತು ಅವರ ಅನುಭವದಿಂದ ಕಲಿಯಲು ಅವರು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಬೇಕು ಎಂದು ಮೋದಿ ಹೇಳಿದ್ದಾರೆ ಎನ್ನಲಾಗಿದೆ.

ಸಂಸದರು ದೇಶ ಸೇವೆ ಮಾಡಲು ಇಲ್ಲಿಗೆ ಬಂದಿದ್ದಾರೆ ಮತ್ತು ರಾಷ್ಟ್ರವನ್ನು ಯಾವಾಗಲೂ ಮೊದಲ ಸ್ಥಾನದಲ್ಲಿರಿಸಲು ಎಲ್ಲರಿಗೂ ಸಲಹೆ ನೀಡಿದ್ದಾರೆ. ಎನ್​ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿ ಎನ್​ಡಿಎ ಸಂಸದರಿಗೆ ಸಂಸದೀಯ ನಿಯಮಗಳು ಹಾಗೂ ನಡವಳಿಕೆಯನ್ನು ಅನುಸರಿಸುವಂತೆ, ಸಂಸದರು ನಿಯಮಿತವಾಗಿ ಸಂಸತ್ತಿಗೆ ಹಾಜರಾಗಬೇಕು. ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಬೇಕು ಎಂದು ಹೇಳಿದರು.

ಯಾವುದೇ ವಿಷಯದ ಬಗ್ಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸುವ ಮೊದಲು ಅದನ್ನು ಅಧ್ಯಯನ ಮಾಡುವಂತೆ ಸೂಚಿಸಿದರು. ಎನ್​ಡಿಎ ಸಂಸದರು ಸಾರ್ವಜನಿಕವಾಗಿ ಮಾತನಾಡುವುದರಲ್ಲಿ ಏಕರೂಪತೆ ಇರಬೇಕು, ಸಂಸದರು ಕ್ಷೇತ್ರಗಳೊಂದಿಗೆ ಸಂಪರ್ಕದಲ್ಲಿರಲು ಮತ್ತು ಬೆಂಬಲ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುವಂತೆ ಸಲಹೆ ನೀಡಿದರು.

ಮತ್ತಷ್ಟು ಓದಿ: Lok Sabha Session: ಮೋದಿ, ಬಿಜೆಪಿ, ಆರ್‌ಎಸ್‌ಎಸ್ ಎಂದರೆ ಹಿಂದೂ ಸಮಾಜವಲ್ಲ; ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಸಭೆಯಲ್ಲಿ ಗಿರಿರಾಜ್ ಸಿಂಗ್, ಮಿಲಿಂದ್ ದಿಯೋರಾ, ಕಂಗನಾ ರಾನಾವತ್ ಮತ್ತು ಜಯಂತ್ ಚೌಧರಿ ಸೇರಿದಂತೆ ವಿವಿಧ ಎನ್‌ಡಿಎ ನಾಯಕರು ಸಭೆಗೆ ಆಗಮಿಸಿದ್ದಾರೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಆಡಳಿತ ಪಕ್ಷದ ಸಂಸದರನ್ನುದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ಸಂಸದರನ್ನು ಉದ್ದೇಶಿಸಿ ಇಂದು ಮಾತನಾಡಲಿದ್ದಾರೆ.

ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಭಾಷಣದ ಹಲವು ಭಾಗಗಳನ್ನು ತೆಗೆದುಹಾಕಲಾಗಿದೆ. ತೆಗೆದುಹಾಕಲಾದ ಭಾಗಗಳಲ್ಲಿ ಹಿಂದೂಗಳು ಮತ್ತು ಪಿಎಂ ನರೇಂದ್ರ ಮೋದಿ-ಬಿಜೆಪಿ-ಆರ್‌ಎಸ್‌ಎಸ್ ಬಗ್ಗೆ ಮಾತನಾಡಿ ರಾಹುಲ್ ವಿವಾದ ಸೃಷ್ಟಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್