NDA Meeting: ದೆಹಲಿಯಲ್ಲಿ ಇಂದು ಎನ್‌ಡಿಎ ನಾಯಕರ ಮಹತ್ವದ ಸಭೆ
ಸಮ್ಮಿಶ್ರ ಸರ್ಕಾರದ ಮುಖ್ಯಸ್ಥರಾಗಿ ಸತತ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಲು ಸಿದ್ಧತೆ ನಡೆಸುತ್ತಿರುವ ಮೋದಿ ಅವರು ಬುಧವಾರ ಆಡಳಿತಾರೂಢ ಮೈತ್ರಿಕೂಟದ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಅವರನ್ನು ಅದರ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ (NDA) ಒಕ್ಕೂಟದ ಹೊಸದಾಗಿ ಚುನಾಯಿತ ಸಂಸದರು ನರೇಂದ್ರ ಮೋದಿ (Narendra Modi) ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಲು ಇಂದು (ಶುಕ್ರವಾರ) ಸಭೆ ಸೇರಲಿದ್ದು, ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ದಾರಿ ಮಾಡಿಕೊಡಲಿದ್ದಾರೆ. ಎನ್‌ಡಿಎ ಸಂಸದರ ನಾಯಕರಾಗಿ ಮೋದಿ ಆಯ್ಕೆಯಾದ ನಂತರ, ಮೈತ್ರಿಕೂಟದ ಹಿರಿಯ ಸದಸ್ಯರಾದ ಟಿಡಿಪಿಯ ಎನ್ ಚಂದ್ರಬಾಬು ನಾಯ್ಡು (Chandrababu Naidu) ಮತ್ತು ಜೆಡಿಯುನ ನಿತೀಶ್ ಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾಗಲಿದ್ದಾರೆ. ಬಳಿಕ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲು ಯಾವೆಲ್ಲ ಸಂಸದರು ಬೆಂಬಲ ನೀಡುತ್ತಾರೆಂಬ ಪಟ್ಟಿಯನ್ನು ಅವರಿಗೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಮ್ಮಿಶ್ರ ಸರ್ಕಾರದ ಮುಖ್ಯಸ್ಥರಾಗಿ ಸತತ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಲು ಸಿದ್ಧತೆ ನಡೆಸುತ್ತಿರುವ ಪಿಎಂ ಮೋದಿ ಬುಧವಾರ ಆಡಳಿತಾರೂಢ ಮೈತ್ರಿಕೂಟದ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅವರು ಮೋದಿಯನ್ನು ಅದರ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಿದರು. ಸಭೆಯಲ್ಲಿ ಅಂಗೀಕರಿಸಿದ ನಿರ್ಣಯದಲ್ಲಿ ಎನ್‌ಡಿಎ ಸರ್ಕಾರವು ತನ್ನ ಪರಂಪರೆಯನ್ನು ಉಳಿಸಿಕೊಂಡು ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಜನರ ಜೀವನಮಟ್ಟವನ್ನು ಎತ್ತುವ ಕೆಲಸವನ್ನು ಮುಂದುವರಿಸುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ನಾವು ಗೆಲ್ಲಿಸುವ ಸಂಸದರ ಸಂಬಳ, ಸಿಗುವ ಸೌಲಭ್ಯಗಳ ಬಗ್ಗೆ ನಿಮಗೆಷ್ಟು ಗೊತ್ತು?
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದು, ಕಾಂಗ್ರೆಸ್ 99 ಸ್ಥಾನಗಳೊಂದಿಗೆ ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಎನ್‌ಡಿಎ 293 ಸ್ಥಾನಗಳೊಂದಿಗೆ ಬಹುಮತ ಹೊಂದಿದ್ದು, ಸರ್ಕಾರ ರಚನೆ ಕುರಿತು ಸಭೆ ನಡೆಸುತ್ತಿದೆ. ಬಿಜೆಪಿಗೆ ಸ್ವಂತವಾಗಿ ಬಹುಮತದ ಕೊರತೆ ಎದುರಾದರೂ, ಅದು ತನ್ನ ಮಿತ್ರಪಕ್ಷಗಳ ಬೆಂಬಲದ ಆಧಾರದ ಮೇಲೆ ಸರ್ಕಾರ ರಚಿಸಬಹುದು. ಆಂಧ್ರಪ್ರದೇಶ ಮತ್ತು ಬಿಹಾರದಲ್ಲಿ ಕ್ರಮವಾಗಿ 16 ಮತ್ತು 12 ಸ್ಥಾನಗಳನ್ನು ಗೆದ್ದಿರುವ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ನಿತೀಶ್ ಕುಮಾರ್ ಅವರ ಜೆಡಿಯು ಹಾಗೂ ಇತರ ಮೈತ್ರಿ ಪಾಲುದಾರರ ಬೆಂಬಲದೊಂದಿಗೆ ಎನ್‌ಡಿಎ ಬಹುಮತವನ್ನು ಪಡೆದಿದೆ.
ಇದೇ ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ. ಆದರೆ, ಅಂತಿಮ ದಿನಾಂಕವನ್ನು ಇನ್ನೂ ಬಹಿರಂಗಪಡಿಸಿಲ್ಲ. ಈಗಾಗಲೇ ರಾಷ್ಟ್ರಪತಿ ಭವನದಲ್ಲಿ ನೂತನ ಪ್ರಧಾನಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆಗಳು ಶುರುವಾಗಿವೆ.
ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಮೋದಿ ಸಲಹೆ ನೀಡಿದ್ದೇಕೆ? ಇದು ದೊಡ್ಡ ಹಗರಣ: ರಾಹುಲ್ ಗಾಂಧಿ
ಗುರುವಾರ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ಭೇಟಿಯಾದರು. ಅವರು ತಮ್ಮ ಪಾಲಿನ ಮಂತ್ರಿ ಸ್ಥಾನದಂತಹ ವಿಷಯಗಳ ಬಗ್ಗೆ ಮಿತ್ರಪಕ್ಷಗಳನ್ನು ತಲುಪುವ ಮತ್ತು ಸಮ್ಮಿಶ್ರ ಸರ್ಕಾರಕ್ಕೆ ತಮ್ಮ ಪಕ್ಷದೊಳಗಿನ ಸಂಭಾವ್ಯರನ್ನು ಆಯ್ಕೆ ಮಾಡುವ ಪಕ್ಷದ ನಿರ್ಧಾರದ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ