ಎನ್‌ಡಿಎ ಇತಿಹಾಸದಲ್ಲೇ ಹೆಚ್ಚು ಸ್ಥಾನಗಳೊಂದಿಗೆ ಜಾರ್ಖಂಡ್‌ನಲ್ಲಿ ಸರ್ಕಾರ ರಚನೆ; ಮೋದಿ ವಿಶ್ವಾಸ
ಜಾರ್ಖಂಡ್ ವಿಧಾನಸಭಾ ಚುನಾವಣೆ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ನಡೆಯಲಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಜಾರ್ಖಂಡ್ ರಾಜ್ಯದ 81 ವಿಧಾನಸಭಾ ಸ್ಥಾನಗಳಲ್ಲಿ 68ರಲ್ಲಿ ಸ್ಪರ್ಧಿಸುತ್ತಿದೆ. ಉಳಿದವುಗಳನ್ನು ತನ್ನ ಮಿತ್ರಪಕ್ಷಗಳಿಗೆ ಬಿಟ್ಟುಕೊಟ್ಟಿದೆ.
ರಾಂಚಿ: ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಂದು (ನವೆಂಬರ್ 4) ವಿಶ್ವಾಸ ವ್ಯಕ್ತಪಡಿಸಿದರು. ಜಾರ್ಖಂಡ್‌ನ ಚೈಬಾಸಾದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಚುನಾವಣೆಯ ಅಂಚಿನಲ್ಲಿರುವ ಜಾರ್ಖಂಡ್ ರಾಜ್ಯದಲ್ಲಿ ನಾನು ಒಂದೇ ಬಾರಿ ಪ್ರಚಾರ ನಡೆಸಿದ್ದರೂ ಜಾರ್ಖಂಡ್ ರಾಜ್ಯದಲ್ಲಿ ಎನ್‌ಡಿಎ ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.
“ಇಂದು ನಾನು ಜಾರ್ಖಂಡ್‌ನಲ್ಲಿ ಚುನಾವಣಾ ಪ್ರಚಾರಕ್ಕೆ ಮೊದಲ ಬಾರಿಗೆ ಬಂದಿದ್ದೇನೆ ಮತ್ತು ಇದು ನನ್ನ ಎರಡನೇ ಚುನಾವಣಾ ರ್ಯಾಲಿಯಾಗಿದೆ. ಆದರೆ, ಎರಡೂ ರ್ಯಾಲಿಗಳನ್ನು ನೋಡಿದ ನಂತರ ಬಿಜೆಪಿ ನೇತೃತ್ವದ ಎನ್‌ಡಿಎ ಎಲ್ಲದಕ್ಕಿಂತ ಹೆಚ್ಚು ಸ್ಥಾನಗಳೊಂದಿಗೆ ಇಲ್ಲಿ ಸರ್ಕಾರ ರಚಿಸುತ್ತದೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ ಎಂದು ಪ್ರಧಾನಿ ಮೋದಿ ಹೇಳಿದರು.
मैं आपको विश्वास दिलाता हूं कि झारखंड में भाजपा सरकार बनते ही घुसपैठ पर रोक लगाने के लिए हर कदम उठाए जाएंगे।
अवैध तरीके से हड़प की गई भूमि को फिर से आदिवासी बेटियों के नाम करने के लिए कानून लाए जाएंगे।
– पीएम @narendramodi pic.twitter.com/YAplrI4ueQ
— BJP (@BJP4India) November 4, 2024
ಇದನ್ನೂ ಓದಿ: ಸುಳ್ಳು, ವಂಚನೆ ಮತ್ತು ಪ್ರಚಾರ ನಿಮ್ಮ ಸರ್ಕಾರದ ಮೂಲಮಂತ್ರ: ಮೋದಿ ವಿರುದ್ಧ ಖರ್ಗೆ ವಾಗ್ದಾಳಿ
ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಆದಿವಾಸಿ ಸಹೋದರ-ಸಹೋದರಿಯರ ಆಕಾಂಕ್ಷೆಗಳಿಗಾಗಿ ಬಿಜೆಪಿ ಹೇಗೆ ಕೆಲಸ ಮಾಡುತ್ತಿದೆ ಎಂಬುದನ್ನು ಎತ್ತಿ ತೋರಿಸಿದರು. ‘ಬಿಜೆಪಿಗೆ ಆದಿವಾಸಿ ಸಹೋದರ ಸಹೋದರಿಯರ ಆಕಾಂಕ್ಷೆಗಳು ಮತ್ತು ಅವರ ಆತ್ಮಗೌರವ ಯಾವಾಗಲೂ ಮುಖ್ಯ. ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾದಾಗ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ದೆಹಲಿಯಲ್ಲಿ ಪ್ರಧಾನಿಯಾಗಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿತು. ಆಗಲೇ ಬುಡಕಟ್ಟು ಸಮಾಜಕ್ಕೆ ರಾಜ್ಯದ ಮನ್ನಣೆ ಸಿಕ್ಕಿತು. ಛತ್ತೀಸ್‌ಗಢ ಮತ್ತು ಜಾರ್ಖಂಡ್ ಎಂಬ ಎರಡು ರಾಜ್ಯಗಳನ್ನು ರಚಿಸುವ ಸೌಭಾಗ್ಯ ಬಿಜೆಪಿಗೆ ಸಿಕ್ಕಿದೆ ಎಂದು ಪ್ರಧಾನಿ ಹೇಳಿದರು.
भाजपा के लिए, आदिवासी भाई-बहनों की आकांक्षा, उनका स्वाभिमान हमेशा सर्वोपरि रहा है।
जब पहली बार भाजपा सरकार बनी और दिल्ली में अटल बिहारी वाजपेयी जी को सेवा करने का अवसर मिला, तब जाकर आदिवासी समाज को अलग राज्य मिले। छत्तीसगढ़ और झारखंड ये दो राज्य बनाने का सौभाग्य भाजपा को ही मिला… pic.twitter.com/FWayW7ZkSZ
— BJP (@BJP4India) November 4, 2024
ಇದನ್ನೂ ಓದಿ: Jharkhand Assembly Elections: ಇಂದು ಜಾರ್ಖಂಡ್‌ನಲ್ಲಿ ಎರಡು ಕಡೆ ಪ್ರಧಾನಿ ಮೋದಿ ಚುನಾವಣಾ ಪ್ರಚಾರ
ಜಾರ್ಖಂಡ್‌ನಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ನುಸುಳುವಿಕೆ ತಡೆಯಲು ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದ ಮೋದಿ, ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಭೂಮಿಯನ್ನು ಮತ್ತೆ ಆದಿವಾಸಿ ಹೆಣ್ಣು ಮಕ್ಕಳಿಗೆ ವರ್ಗಾಯಿಸಲು ಕಾನೂನು ತರಲಾಗುವುದು ಎಂದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ