ಉತ್ತರಕಾಶಿ ಸುರಂಗದಿಂದ ಸುರಕ್ಷಿತವಾಗಿ ಹೊರಬಂದ 12 ಕಾರ್ಮಿಕರು
ಉತ್ತರಕಾಶಿಯ ಸಿಲ್ಕ್ಯಾರಾ-ಬರ್ಕೋಟ್ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ಪೈಕಿ 12 ಮಂದಿಯನ್ನು ಹೊರ ತರುವಲ್ಲಿ ಎನ್ಡಿಆರ್ಎಫ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಉಳಿದ ಕಾರ್ಮಿಕರ ರಕ್ಷಣಾಕಾರ್ಯವನ್ನು ಮುಂದುವರಿಸಲಾಗಿದೆ. ಸದ್ಯ ಆರೋಗ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಹೊರಬಂದ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೆ, ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ವ್ಯವಸ್ಥೆಗಳನ್ನು ಕೂಡ ಮಾಡಲಾಗಿದೆ.
ಉತ್ತರಕಾಶಿಯ ಸಿಲ್ಕ್ಯಾರಾ-ಬರ್ಕೋಟ್ ಸುರಂಗದಲ್ಲಿ (Uttarkashi tunnel) ಸಿಲುಕಿರುವ 41 ಕಾರ್ಮಿಕರ ಪೈಕಿ 12 ಮಂದಿಯನ್ನು ಹೊರ ತರುವಲ್ಲಿ ಎನ್ಡಿಆರ್ಎಫ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಉಳಿದ ಕಾರ್ಮಿಕರ ರಕ್ಷಣಾಕಾರ್ಯವನ್ನು ಮುಂದುವರಿಸಲಾಗಿದೆ. ಸದ್ಯ ಆರೋಗ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಹೊರಬಂದ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.
ಈಗಾಗಲೇ ರಕ್ಷಣೆಗೆ ಒಳಗಾದ ಕಾರ್ಮಿರನ್ನು ಆ್ಯಂಬುಲೆನ್ಸ್ನಲ್ಲಿ ಕೊಂಡೊಯ್ಯಲಾಗಿದೆ. ಸುರಂಗದಲ್ಲಿ ಸಿಲುಕಿದವರನ್ನು ಹೊರತರಲು ಈಗಾಗಲೇ NDRF ಹಾಗೂ SDRF ಸಿಬ್ಬಂದಿ ಸುರಂಗದೊಳಗೆ ಹೋಗಿದ್ದಾರೆ. ಸ್ಟ್ರೆಚರ್‌ಗಳ ಮೇಲೆ ಕಾರ್ಮಿಕರನ್ನು ಮಲಗಿಸಿ ಪೈಪ್ ಮೂಲಕ ಹೊರತರುತ್ತಿದ್ದಾರೆ.
ಮಾಹಿತಿ ಅಪ್ಡೇಟ್ ಆಗುತ್ತಿದೆ…
Published On - 8:19 pm, Tue, 28 November 23