AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಮೂರು ದಿನಗಳಲ್ಲಿ 51 ಲಕ್ಷ ಡೋಸ್ ಕೊವಿಡ್ ಲಸಿಕೆ ರಾಜ್ಯಗಳಿಗೆ ಸಿಗಲಿದೆ: ಕೇಂದ್ರ ಆರೋಗ್ಯ ಸಚಿವಾಲಯ

Covid 19 Vaccine: ಕೇಂದ್ರವು ಈವರೆಗೆ 20 ಕೋಟಿಗೂ ಹೆಚ್ಚು ಲಸಿಕೆ ಡೋಸ್ ನ್ನು (20,28,09,250) ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ನೀಡಿದೆ ಎಂದು ಸಚಿವಾಲಯ ಹೇಳಿದೆ.

ಮುಂದಿನ ಮೂರು ದಿನಗಳಲ್ಲಿ 51 ಲಕ್ಷ ಡೋಸ್ ಕೊವಿಡ್ ಲಸಿಕೆ ರಾಜ್ಯಗಳಿಗೆ ಸಿಗಲಿದೆ: ಕೇಂದ್ರ ಆರೋಗ್ಯ ಸಚಿವಾಲಯ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 16, 2021 | 4:51 PM

Share

ದೆಹಲಿ: 1.84 ಕೋಟಿಗೂ ಹೆಚ್ಚು ಡೋಸ್ ಕೊವಿಡ್ -19 ಲಸಿಕೆ ಇನ್ನೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ. ಅದೇ ವೇಳೆ ಆದರೆ ಸುಮಾರು 51 ಲಕ್ಷ ಡೋಸ್ ಮೂರು ದಿನಗಳಲ್ಲಿ ರಾಜ್ಯಗಳಿಗೆ ಪೂರೈಕೆ ಆಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ಕೇಂದ್ರವು ಈವರೆಗೆ 20 ಕೋಟಿಗೂ ಹೆಚ್ಚು ಲಸಿಕೆ ಡೋಸ್ ನ್ನು (20,28,09,250) ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ನೀಡಿದೆ ಎಂದು ಸಚಿವಾಲಯ ಹೇಳಿದೆ.  ಶನಿವಾರ ಸಂಜೆ 7 ಗಂಟೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ ವ್ಯರ್ಥವಾಗಿರುವ ಡೋಸ್ ಸೇರಿದಂತೆ ಮೇ 14 ರವರೆಗೆ ಸರಾಸರಿ ಆಧರಿಸಿ ಲೆಕ್ಕಹಾಕಲಾದ ಒಟ್ಟು ಬಳಕೆ 18,43,67,772 ಡೋಸ್ ಆಗಿದೆ.

1.84 ಕೋಟಿಗಿಂತಲೂ ಹೆಚ್ಚು ಕೊವಿಡ್ ಲಸಿಕೆ ಡೋಸ್ ಗಳು(1,84,41,478) ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಲಭ್ಯವಿದೆ. ಋಣಾತ್ಮಕ ಸಮತೋಲನ ಹೊಂದಿರುವ ರಾಜ್ಯಗಳು ಲಸಿಕೆಗಿಂತ ಹೆಚ್ಚಿನ ಬಳಕೆಯನ್ನು (ವ್ಯರ್ಥ ಸೇರಿದಂತೆ) ತೋರಿಸುತ್ತಿವೆ ಏಕೆಂದರೆ ಅವುಗಳು ಲಸಿಕೆಯನ್ನು ಸಮನ್ವಯಗೊಳಿಸಲಿಲ್ಲ. 50,95,640 ಲಸಿಕೆ ಡೋಸ್ ಗಳು ಸಿಗಲಿದ್ದು ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಅದನ್ನು ಸ್ವೀಕರಿಸಲಿವೆ ಎಂದು ಸಚಿವಾಲಯ ಹೇಳಿದೆ.

ಲಸಿಕೆ ವಿತರಣೆಯು ಸಾಂಕ್ರಾಮಿಕ ರೋಗದ ನಿಯಂತ್ರಣ ಮತ್ತು ನಿರ್ವಹಣೆಯ (ಟೆಸ್ಟ್, ಟ್ರ್ಯಾಕ್, ಟ್ರೀಟ್ ಮತ್ತು ಕೊವಿಡ್ ಸೂಕ್ತ ವರ್ತನೆ ಸೇರಿದಂತೆ) ಭಾರತ ಸರ್ಕಾರದ ಸಮಗ್ರ ಕಾರ್ಯತಂತ್ರದ ಒಂದು ಅವಿಭಾಜ್ಯ ಅಂಗವಾಗಿದೆ.

ಕೊವಿಡ್ ಲಸಿಕೆಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ನೀಡುವ ಮೂಲಕ ಕೇಂದ್ರವು ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅನ್ನು ಬೆಂಬಲಿಸುತ್ತಿದೆ.ಅದರ ಉತ್ಪಾದನೆ ಮತ್ತು ಪೂರೈಕೆಯನ್ನು ಹೆಚ್ಚಿಸಲು ಹಲವಾರು ಪ್ರಯತ್ನಗಳನ್ನು ಮಾಡಿದೆ ಎಂದು ಸಚಿವಾಲಯ ತಿಳಿಸಿದೆ.

ಕೊವಿಡ್ ವ್ಯಾಕ್ಸಿನೇಷನ್‌ನ ಉದಾರೀಕರಣ ಮತ್ತು ವೇಗವರ್ಧಿತ ಹಂತ 3 ಕಾರ್ಯತಂತ್ರದ ಅನುಷ್ಠಾನವು ಮೇ 1 ರಿಂದ ಪ್ರಾರಂಭವಾಗಿದೆ, ಇದರ ಭಾಗವಾಗಿ ಸರ್ಕಾರವು 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ವಿತರಣೆ ಆರಂಭಿಸಿದೆ.

ಈ ಕಾರ್ಯತಂತ್ರದ ಅಡಿಯಲ್ಲಿ, ಪ್ರತಿ ತಿಂಗಳು ಒಟ್ಟು ಸೆಂಟ್ರಲ್ ಡ್ರಗ್ಸ್ ಲ್ಯಾಬೊರೇಟರಿ ( CDL) ಅನುಮೋದಿಸಿದ ಯಾವುದೇ ಉತ್ಪಾದಕರು ಉತ್ಪಾದಿಸಿದ ಲಸಿಕೆಯನ್ನು ಕೇಂದ್ರ ಸರ್ಕಾರ ಸಂಗ್ರಹಿಸುತ್ತದೆ. ಈ ಲಸಿಕೆಗಳನ್ನು ಕೇಂದ್ರವು ಈ ಹಿಂದೆ ಮಾಡಿದಂತೆ ರಾಜ್ಯ ಸರ್ಕಾರಗಳಿಗೆ ಉಚಿತವಾಗಿ ಲಭ್ಯವಾಗುವಂತೆ ಮಾಡುತ್ತದೆ.

ಇದನ್ನೂ ಓದಿ:  2021ರ ಏಪ್ರಿಲ್‌ನಿಂದ ಕೊವಿಡ್‌ಗೆ ಬಲಿಯಾದ ಶಿಕ್ಷಕರು, ಉಪನ್ಯಾಸಕ ಕುರಿತು ವರದಿ ಸಲ್ಲಿಸಲು ಸೂಚಿಸಿದ ಸಚಿವ ಸುರೇಶ್ ಕುಮಾರ್

(Nearly 51 lakh Covid 19 vaccine doses are in the pipeline and will be received by States within the next three day says Union Health Ministry)

Published On - 4:48 pm, Sun, 16 May 21

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ