ಮಂಡನೆಯಾದ ಮಸೂದೆ ಮೇಲೆ ರೈತ ಸಂಘಟನೆಗಳ ಕಣ್ಣು; ಮತ್ತೊಂದು ಚಳವಳಿಗೆ ಸಿದ್ಧವಾಗಬೇಕು ಎಂದ ರಾಕೇಶ್ ಟಿಕಾಯತ್
ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದರು. ಕಳೆದ ತಿಂಗಳು ಅಂದರೆ ನವೆಂಬರ್ 19ರಂದು ಪ್ರಧಾನಿ ಮೋದಿ ಆ ಕಾಯ್ದೆಗಳನ್ನು ವಾಪಸ್ ಪಡೆದಿದ್ದಾರೆ.
ದೆಹಲಿ: ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದು, ಅದನ್ನು ಸಂಸತ್ತಿನಲ್ಲಿ ರದ್ದುಗೊಳಿಸಿದ್ದರೂ ರೈತರು ಪ್ರತಿಭಟನೆ ನಿಲ್ಲಿಸುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಒಂದಲ್ಲ, ಒಂದು ಬೇಡಿಕೆಯನ್ನು ಮುಂದಿಟ್ಟುಕೊಂಡು ಹೋರಾಟ ಮುಂದುವರಿಸುತ್ತಲೇ ಇದ್ದಾರೆ. ಇದೀಗ ರೈತರ ಮುಖಂಡ ಕೇಂದ್ರ ಸರ್ಕಾರದ ಹೊಸ ಚಳವಳಿ ಘೋಷಿಸಿದ್ದಾರೆ. ಬ್ಯಾಂಕ್ಗಳ ಖಾಸಗೀಕರಣದ ವಿರುದ್ಧ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರೈತ ಮುಖಂಡ ರಾಕೇಶ್ ಟಿಕಾಯತ್, ಸಾರ್ವಜನಿಕ ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವ ಸಂಬಂಧ ಡಿಸೆಂಬರ್ 6ರಂದು ಸಂಸತ್ತಿನಲ್ಲಿ ಮಸೂದೆ ಮಂಡನೆಯಾಗಲಿದೆ. ಆದರೆ ಅದರ ವಿರುದ್ಧ ದೇಶಾದ್ಯಂತ ಹೋರಾಟ ನಡೆಯಬೇಕು. ಕೃಷಿ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯ ಮಾದರಿಯಲ್ಲೇ ಬ್ಯಾಂಕ್ಗಳ ಖಾಸಗೀಕರಣದ ವಿರುದ್ಧವೂ ಹೋರಾಟದ ಅಗತ್ಯವಿದೆ ಎಂದಿದ್ದಾರೆ.
हमने आंदोलन की शुरुआत में आगाह किया था कि अगला नंबर बैंकों का होगा। नतीजा देखिए, 6 दिसंबर को संसद में सरकारी बैंकों के निजीकरण का बिल पेश होने जा रहा है। निजीकरण के खिलाफ देशभर में साझा आंदोलन की जरूरत है । #StopPrivatization
— Rakesh Tikait (@RakeshTikaitBKU) December 4, 2021
ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದರು. ಕಳೆದ ತಿಂಗಳು ಅಂದರೆ ನವೆಂಬರ್ 19ರಂದು ಪ್ರಧಾನಿ ಮೋದಿ ಆ ಕಾಯ್ದೆಗಳನ್ನು ವಾಪಸ್ ಪಡೆದಿದ್ದಾರೆ. ಸಂಸತ್ತಿನಲ್ಲಿ ಕೂಡ ಕಾಯ್ದೆಗಳು ರದ್ದುಗೊಂಡಿವೆ. ಆದರೆ ರೈತರು ಆಂದೋಲನ ನಿಲ್ಲಿಸಿಲ್ಲ. ಬದಲಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನಾತ್ಮಕ ಗ್ಯಾರಂಟಿ ಕೊಡಬೇಕು, ರೈತರ ವಿರುದ್ಧ ದಾಖಲಿಸಲಾದ ಕೇಸ್ಗಳನ್ನು ಹಿಂಪಡೆಯಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಸದ್ಯ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇದರಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್ಗಳ ಖಾಸಗೀಕರಣ ಸಂಬಂಧ ಮಸೂದೆ ಮಂಡನೆ ಮಾಡಲು ಹಣಕಾಸು ಸಚಿವಾಲಯ ಸಿದ್ಧತೆ ಮಾಡಿಕೊಂಡಿದೆ.
ಇದನ್ನೂ ಓದಿ: ರಂಗೇರಿದ ವಿಧಾನ ಪರಿಷತ್ ಚುನಾವಣೆ ಪ್ರಚಾರ: ಇಂದಿನಿಂದ 3 ದಿನ ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ ಬಸವರಾಜ ಬೊಮ್ಮಾಯಿ
Published On - 9:38 am, Sun, 5 December 21