AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿ, ಆರ್​ಎಸ್​ಎಸ್​ ವಿರುದ್ಧ ಹೋರಾಡಲು ನಮ್ಮ ಪಕ್ಷದಲ್ಲಿ ಏಕತೆ ಇರಬೇಕು’-ಸೋನಿಯಾ ಗಾಂಧಿ

ಕಾಂಗ್ರೆಸ್​ ನೀತಿಯ ಕುರಿತಂತೆ ನಮ್ಮ ರಾಜ್ಯಮಟ್ಟದ ನಾಯಕರಲ್ಲೂ ಸ್ಪಷ್ಟತೆ ಮತ್ತು ಒಗ್ಗಟ್ಟಿನ ಕೊರತೆಯಿದೆ ಎಂಬುದನ್ನು ನಾನು ಕಂಡುಕೊಂಡಿದ್ದೇನೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

‘ಬಿಜೆಪಿ, ಆರ್​ಎಸ್​ಎಸ್​ ವಿರುದ್ಧ ಹೋರಾಡಲು ನಮ್ಮ ಪಕ್ಷದಲ್ಲಿ ಏಕತೆ ಇರಬೇಕು’-ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
TV9 Web
| Updated By: Lakshmi Hegde|

Updated on:Oct 26, 2021 | 2:33 PM

Share

ದೆಹಲಿ: 2022ರಲ್ಲಿ ಉತ್ತರಪ್ರದೇಶ, ಉತ್ತರಾಖಂಡ್​​, ಪಂಜಾಬ್, ಗೋವಾ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬೆನ್ನಲ್ಲೇ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಪಕ್ಷದಲ್ಲಿನ ಸ್ಥಿರತೆ ಕಾಪಾಡುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಇಂದು ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿಗಳು, ರಾಜ್ಯಗಳ ಅಧ್ಯಕ್ಷರು ಮತ್ತು ಇತರ ಹಿರಿಯ ನಾಯಕರೊಂದಿಗೆ ಸಭೆ ನಡೆಸಿದ ಸೋನಿಯಾ ಗಾಂಧಿ, ಬಿಜೆಪಿ ಮತ್ತು ಆರ್​ಎಸ್​ಎಸ್ (BJP And RSS)​ ವಿರುದ್ಧ ಹೋರಾಡಲು ಪಕ್ಷದಲ್ಲಿ ಶಿಸ್ತು ಮತ್ತು ಏಕತೆ ತುಂಬ ಮುಖ್ಯ ಎಂದು ಹೇಳಿದರು. ಬಿಜೆಪಿ ಮತ್ತು ಆರ್​ಎಸ್​​ಎಸ್​​ನ ಕುಟಿಲತೆಯ ವಿರುದ್ಧ ಸೈದ್ಧಾಂತಿಕವಾಗಿ ಹೋರಾಟ ಮಾಡಬೇಕು.  ಅವರು ಹೇಳುತ್ತಿರುವುದು ಸುಳ್ಳು ಎಂಬುದನ್ನು ಜನರಿಗೆ ತೋರಿಸಿಕೊಡಬೇಕು. ಇದನ್ನೆಲ್ಲ ನಾವು ದೃಢವಿಶ್ವಾಸದಿಂದ ಮಾಡಬೇಕು ಎಂದು ಹೇಳಿದರು. 

ಈ ದೇಶ ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಎಐಸಿಸಿ ಪ್ರತಿದಿನ ಬಹಳ ಮುಖ್ಯವಾದ ಮತ್ತು ವಿವರವಾದ ಪ್ರಕಟಣೆಗಳನ್ನು ಬಿಡುಗಡೆ ಮಾಡುತ್ತಿದೆ. ಆದರೆ ಅವು ಜಿಲ್ಲಾ ಮತ್ತು ಬ್ಲಾಕ್​ ಮಟ್ಟದ ಕಾರ್ಯಕರ್ತರಿಗೆ ತಲುಪುತ್ತಿದೆ ಎಂಬ ಬಗ್ಗೆ ನನಗೆ ನಂಬಿಕೆಯಿಲ್ಲ. ಹಾಗೇ, ಕಾಂಗ್ರೆಸ್​ ನೀತಿಯ ಕುರಿತಂತೆ ನಮ್ಮ ರಾಜ್ಯಮಟ್ಟದ ನಾಯಕರಲ್ಲೂ ಸ್ಪಷ್ಟತೆ ಮತ್ತು ಒಗ್ಗಟ್ಟಿನ ಕೊರತೆಯಿದೆ ಎಂಬುದನ್ನು ನಾನು ಕಂಡುಕೊಂಡಿದ್ದೇನೆ ಎಂದೂ ಸೋನಿಯಾ ಗಾಂಧಿ ಹೇಳಿದರು. ನಮ್ಮ ಪಕ್ಷದ ಬಲವರ್ಧನೆ ಪ್ರತಿಯೊಬ್ಬರ ಆದ್ಯತೆಯಾಗಬೇಕು. ನಿಮ್ಮ ವೈಯಕ್ತಿಕ ಮಹತ್ವಾಕಾಂಕ್ಷೆಗಳನ್ನೂ ಮೀರಿ ಪಕ್ಷದ ಸಂಘಟನೆ ಕಡೆಗೆ ಗಮನಹರಿಸಿ. ಹೀಗೆ ಮಾಡಿದಾಗಲೇ ವೈಯಕ್ತಿಕ ಮತ್ತು ಸಾಮೂಹಿಕ ಯಶಸ್ಸು ಗಳಿಸಲು ಸಾಧ್ಯ ಎಂದು ಹೇಳಿದರು.

ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ನಮ್ಮ ಸಂಸ್ಥೆಗಳನ್ನು ನಾಶ ಮಾಡಲು ಯತ್ನಿಸುತ್ತಿದೆ. ಸಂವಿಧಾನದ ಮೂಲ  ಮೌಲ್ಯಗಳನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ ಎಂದು ಸೋನಿಯಾ ಗಾಂಧಿ ಇಂದಿನ ಸಭೆಯಲ್ಲಿ ಹೇಳಿದರು.  ಹಾಗೇ, ಈ ಕೇಂದ್ರ ಸರ್ಕಾರದ ಕೆಟ್ಟ ನೀತಿಯಿಂದ ಅನೇಕರು ಸಂತ್ರಸ್ತರಾಗುತ್ತಿದ್ದಾರೆ. ಇದರ ವಿರುದ್ಧ ಕಾಂಗ್ರೆಸ್​ ಹೋರಾಟವನ್ನು ದ್ವಿಗುಣಗೊಳಿಸಬೇಕು ಎಂದೂ ಹೇಳಿದರು.

ಇದನ್ನೂ ಓದಿ: ಜಮೀರ್​ ಪುತ್ರ ಝೈದ್​ ಖಾನ್​ ಹೊಸ ದಾಖಲೆ; ಭಾರಿ ಮೊತ್ತಕ್ಕೆ ಲಹರಿ, ಟಿ-ಸಿರೀಸ್​ ಪಾಲಾಯ್ತು ‘ಬನಾರಸ್​’ ಆಡಿಯೋ

Dabur India: ಮಧ್ಯಪ್ರದೇಶ ಸಚಿವರಿಂದ ಕಾನೂನು ಕ್ರಮದ ಎಚ್ಚರಿಕೆ; ಸಲಿಂಗಿ ಜೋಡಿಯ ಕರ್ವಾ ಚೌತ್​ ಜಾಹೀರಾತು ವಾಪಸ್​ ಪಡೆದ ಡಾಬರ್​ ಇಂಡಿಯಾ

Published On - 1:22 pm, Tue, 26 October 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ