ವೈದ್ಯಕೀಯ ಸಿಬ್ಬಂದಿ ಮೇಲಿನ ಹಿಂಸಾಚಾರ ವಿರುದ್ಧ ತಿರುಗಿಬಿದ್ದ ಐಎಂಎ; ಗೃಹ ಸಚಿವ ಅಮಿತ್​ ಶಾಗೆ ಪತ್ರ

ನಿನ್ನೆ ಅಸ್ಸಾಂನಲ್ಲಿ ಇಂಥದ್ದೇ ಒಂದು ಘಟನೆ ನಡೆದಿತ್ತು. ಹೋಜಾಯ್​ ಜಿಲ್ಲೆಯ ಆಸ್ಪತ್ರೆಯಲ್ಲಿ ಕೊವಿಡ್​ 19 ರೋಗಿಯೊಬ್ಬರು ಮೃತಪಟ್ಟ ನಂತರ ಅವರ ಕುಟುಂಬದವರು ವೈದ್ಯರಿಗೆ ಥಳಿಸಿದ್ದರು.

ವೈದ್ಯಕೀಯ ಸಿಬ್ಬಂದಿ ಮೇಲಿನ ಹಿಂಸಾಚಾರ ವಿರುದ್ಧ ತಿರುಗಿಬಿದ್ದ ಐಎಂಎ; ಗೃಹ ಸಚಿವ ಅಮಿತ್​ ಶಾಗೆ ಪತ್ರ
ಅಮಿತ್ ಶಾ (ಸಂಗ್ರಹ ಚಿತ್ರ)
Follow us
TV9 Web
| Updated By: Lakshmi Hegde

Updated on:Jun 02, 2021 | 10:45 AM

ಆರೋಗ್ಯ ಕ್ಷೇತ್ರದ ಸಿಬ್ಬಂದಿ ಮೇಲೆ ಹಲ್ಲೆ ಮಾಡುವುದು, ಅವರಿಗೆ ಹಿಂಸೆ ಮಾಡುವವರ ವಿರುದ್ಧ ಸಮಗ್ರ, ಏಕರೂಪ ಮತ್ತು ಪರಿಣಾಮಕಾರಿಯಾದ ಕಾನೂನು ಜಾರಿಗೊಳಿಸಿ ಎಂದು ಭಾರತೀಯ ವೈದ್ಯಕೀಯ ಸಂಘ (IMA) ಗೃಹ ಸಚಿವ ಅಮಿತ್​ ಶಾ ಅವರಿಗೆ ಪತ್ರ ಬರೆದಿದೆ. ದೇಶಾದ್ಯಂತ ವೈದ್ಯರು, ನರ್ಸ್​ಗಳ ಮೇಲಿನ ಹಲ್ಲೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಐಎಂಎ ಕಠಿಣ ಕಾನೂನು ಜಾರಿಗೆ ಆಗ್ರಹಿಸಿದೆ. ದೇಶದಲ್ಲಿ ಕೊವಿಡ್​ 19 ಸೋಂಕು ಹೆಚ್ಚಿದ ಮೇಲೆ ವೈದ್ಯಕೀಯ ಸಿಬ್ಬಂದಿಯನ್ನು ಹಿಂಸಿಸುವುದು, ಅವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಕೊವಿಡ್​ 19 ಮೊದಲ ಅಲೆಯ ಸಂದರ್ಭದಲ್ಲಂತೂ ಅನೇಕ ಕಡೆಗಳಲ್ಲಿ ಇಂಥ ಘಟನೆಗಳು ನಡೆದಿದ್ದವು.

ನಿನ್ನೆ ಅಸ್ಸಾಂನಲ್ಲಿ ಇಂಥದ್ದೇ ಒಂದು ಘಟನೆ ನಡೆದಿತ್ತು. ಹೋಜಾಯ್​ ಜಿಲ್ಲೆಯ ಆಸ್ಪತ್ರೆಯಲ್ಲಿ ಕೊವಿಡ್​ 19 ರೋಗಿಯೊಬ್ಬರು ಮೃತಪಟ್ಟ ನಂತರ ಅವರ ಕುಟುಂಬದವರು ವೈದ್ಯರಿಗೆ ಥಳಿಸಿದ್ದರು. ಮಂಗಳವಾರ ಮಧ್ಯಾಹ್ನ 1.30ರಹೊತ್ತಿಗೆ ನಡೆದ ಈ ಘಟನೆಯ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಐಎಂಎ ಗೃಹ ಸಚಿವರಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಿದೆ. ಆರೋಗ್ಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ನಿಯಮ ಜಾರಿಗೊಳಿಸಿ ಎಂದು ಒತ್ತಾಯಿಸಿದೆ.

ಕೊವಿಡ್​ 19 ವಿರುದ್ಧ ಹೋರಾಟ ಮಾಡಲು ಇಡೀ ವೈದ್ಯಕೀಯ ಕ್ಷೇತ್ರ ಮುಂಚೂಣಿಯಲ್ಲಿ ನಿಂತಿದೆ. ಅವಿರತವಾಗಿ ಶ್ರಮಿಸುತ್ತಿದ್ದೇವೆ. ಆದರೆ ಇಂಥ ವೈದ್ಯಕೀಯ ಸಿಬ್ಬಂದಿ ಜೀವಕ್ಕೇ ಅಪಾಯ ಇದೆ ಎಂದು ಐಎಂಎ ತನ್ನ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದೆ.

ಇದನ್ನೂ ಓದಿ: Coronavirus Cases in India: ಭಾರತದಲ್ಲಿ ಒಂದೇ ದಿನ 1.32 ಲಕ್ಷ ಹೊಸ ಕೊವಿಡ್ ಪ್ರಕರಣ, 3207 ಸಾವು

(Needs effective law against healthcare violence IMA Letter to Home Minister Amit Shah)

Published On - 10:44 am, Wed, 2 June 21

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ