Neeraj Chopra: 75 ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಚಿನ್ನದ ಹುಡುಗ ನೀರಜ್ ಚೋಪ್ರಾ

ಸಂಸ್ಕೃತಧಾಮಕ್ಕೆ ಭೇಟಿ ನೀಡಿದ ವೇಳೆ ಅವರು ಅಲ್ಲಿ ಸೇರಿದ್ದ ವಿದ್ಯಾರ್ಥಿಗಳೊಂದಿಗೆ ವಿವಿಧ ರೀತಿ ಆಟಗಳನ್ನು ಆಡುವ ಮೂಲಕ ಭಾರತದ ಚಿನ್ನದ ಹುಡುಗ ತಮ್ಮ ಅಮೂಲ್ಯ ಸಮಯವನ್ನು ಮಕ್ಕಳೊಂದಿಗೆ ಮಗುವಾಗಿ ಕಳೆದಿದ್ದಾರೆ.

Neeraj Chopra: 75 ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಚಿನ್ನದ ಹುಡುಗ ನೀರಜ್ ಚೋಪ್ರಾ
ವಿದ್ಯಾರ್ಥಿಗಳೊಂದಿಗೆ ನೀರಜ್ ಚೋಪ್ರಾ
Follow us
TV9 Web
| Updated By: shivaprasad.hs

Updated on: Dec 05, 2021 | 6:23 PM

ಅಹಮದಾಬಾದ್: ಒಲಿಂಪಿಕ್ಸ್​ ನಲ್ಲಿ ಭಾಗವಹಿಸಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದು ಭಾರತದ ಕೀರ್ತಿ ಹೆಚ್ಚಿಸಿದ ನೀರಜ್ ಚೋಪ್ರಾ (Neeraj Chopra) ಇಂದು ಅಹಮದಾಬಾದ್​ನ (Ahmedabad) ಸಂಸ್ಕೃತಧಾಮಕ್ಕೆ ಭೇಟಿ ನೀಡಿದ್ದರು. ಈ ವೇಳೆ 75 ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳೊಂದಿಗೆ ತಮ್ಮ ಸಮಯವನ್ನು ಕಳೆದರು. ಈ ಮೂಲಕ ಪ್ರಧಾನಿ ನರೆಂದ್ರ ಮೋದಿ (PM Narendra Modi) ಅವರ ಮಹಾತ್ವಾಕಾಂಕ್ಷಿ ಯೋಜನೆಯಾದ ಕ್ರೀಡಾಪಟುಗಳು ಮಕ್ಕಳೊಂದಿಗೆ ಸಂವಾದ ನಡೆಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಯೋಜನೆಯನ್ನು ಶಿಕ್ಷಣ ಸಚಿವಾಲಯ ಮತ್ತು ಕ್ರೀಡಾ ಸಚಿವಾಲಯಗಳು ಜಂಟಿಯಾಗಿ ಆಯೋಜಿಸುತ್ತಿದೆ.

ಸಂಸ್ಕೃತಧಾಮಕ್ಕೆ ಭೇಟಿ ನೀಡಿದ ವೇಳೆ ಅವರು ಅಲ್ಲಿ ಸೇರಿದ್ದ ವಿದ್ಯಾರ್ಥಿಗಳೊಂದಿಗೆ ವಿವಿಧ ರೀತಿ ಆಟಗಳನ್ನು ಆಡುವ ಮೂಲಕ ಭಾರತದ ಚಿನ್ನದ ಹುಡುಗ ತಮ್ಮ ಅಮೂಲ್ಯ ಸಮಯವನ್ನು ಮಕ್ಕಳೊಂದಿಗೆ ಮಗುವಾಗಿ ಕಳೆದಿದ್ದಾರೆ. ಜತೆಗೆ ಜಾವಲಿನ್​ ಎಸೆತ, ಜೀವನಶೈಲಿ ಕುರಿತಾಗಿ ಸಮತೋಲಿತ ಆಹಾರ ಸೇವನೆ, ಫಿಟ್ನೆಸ್ ಮತ್ತು ಕ್ರೀಡೆಯ ಪ್ರಾಮುಖ್ಯತೆ ಕುರಿತು ಮಕ್ಕಳಿಗೆ ಸಲಹೆ ನೀಡಿದರು.

ಮಕ್ಕಳೊಂದಿಗೆ ಬೆರೆತ ನೀರಜ್ ಚೋಪ್ರಾ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಪ್ರಶ್ನೆಗೆ ಉತ್ತರಿಸುವ ವೇಳೆ ತಮ್ಮ ನೆಚ್ಚಿನ ಆಹಾರ ಶೈಲಿ ಕುರಿತು ಮಾತನಾಡಿದ ಅವರು, ಕಡಿಮೆ ಮಸಾಲೆಯುಕ್ತ ಬಿರಿಯಾನಿಯನ್ನು ನಾನು ಇಷ್ಟಪಡುತ್ತೇನೆ. ಜತೆಗೆ ತರಕಾರಿಗಳ ಸೇವನೆಯಿಂದ ದೇಹಕ್ಕೆ ಬೇಕಾದ ಕಾರ್ಬೋಹೈಡ್ರೆಟ್ ಹೆಚ್ಚಿನ ಪ್ರಮಾಣದಲ್ಲಿ ಸಿಗುತ್ತದೆ. ಇದಲ್ಲದೆ, ಅಡುಗೆ ಮಾಡುವುದರಿಂದ ಸುದೀರ್ಘ ಸಮಯದವರೆಗೆ ತರಬೇತಿಯಲ್ಲಿದ್ದ ಮನಸ್ಥಿತಿಗೆ ಹೊಸ ವಾತಾವರಣ ಕಲ್ಪಿಸಿಕೊಟ್ಟಂತಾಗುತ್ತದೆ ಎಂದರು.

ಇದೇ ವೇಳೆ ನೀರಜ್ ಚೋಪ್ರಾ ಈ ಯೋಜನೆಯಿಂದ ಯುವಜನತೆಗೆ ಫಿಟ್ನೆಸ್ ಬಗೆಗಿನ ಮಾಹಿತಿ ಹಾಗೂ ಸದೃಢ ದೇಹವನ್ನು ಹೊಂದಲು ಬೇಕಾದ ಸಮತೋಲಿತ ಆಹಾರಗಳ ಬಗೆಗೆ ತಿಳಿಸಿಕೊಡಲು ಅನುಕೂಲಕರವಾಗಿದೆ ಎಂದು ಅಭಿಪ್ರಾಯಪಟ್ಟರುಕಾರ್ಯಕ್ರಮದಲ್ಲಿ ನೀರಜ್ ಚೋಪ್ರಾ ಅವರನ್ನು ಸಂಸ್ಕೃತಧಾಮ ಎಜುಕೇಷನಲ್ ಸೊಸೈಟಿ ವತಿಯಿಂದ ಸನ್ಮಾನಿಸಲಾಯಿತು.

ಇದನ್ನೂ ಓದಿ: 

IND vs NZ: ವಾಂಖೆಡೆಯಲ್ಲಿ 13 ವರ್ಷಗಳ ಹಳೆಯ ದಾಖಲೆ ಮುರಿದ ಭಾರತ..!

IPL 2022: ಹೊಸ ಫ್ರಾಂಚೈಸಿಗಳು ಖರೀದಿಸುವ 6 ಆಟಗಾರರನ್ನು ಹೆಸರಿಸಿದ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್