NEET Exam 2021: ವಿದ್ಯಾರ್ಥಿಗಳೇ ಗಮನಿಸಿ; ನೀಟ್ ಪರೀಕ್ಷೆಯ ದಿನಾಂಕ ಘೋಷಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

| Updated By: guruganesh bhat

Updated on: Jul 12, 2021 | 10:36 PM

ನಾಳೆ (ಜುಲೈ 13)ರಿಂದಲೇ ಅರ್ಜಿಗಳನ್ನು ಹಾಕಲು ಅವಕಾಶ ಕಲ್ಪಿಸಲಾಗುವುದು ಎಂದು ಸಹ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

NEET Exam 2021: ವಿದ್ಯಾರ್ಥಿಗಳೇ ಗಮನಿಸಿ; ನೀಟ್ ಪರೀಕ್ಷೆಯ ದಿನಾಂಕ ಘೋಷಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
ಸಚಿವ ಧರ್ಮೇಂದ್ರ ಪ್ರಧಾನ್ (ಸಂಗ್ರಹ ಚಿತ್ರ)
Follow us on

ದೆಹಲಿ: 2021 ರ ನೀಟ್ (ಯುಜಿ) ಪರೀಕ್ಷೆಯನ್ನು ದೇಶದಾದ್ಯಂತ ಸೆಪ್ಟೆಂಬರ್ 12ರಂದು ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಘೋಷಿಸಿದ್ದಾರೆ. ನಾಳೆ (ಜುಲೈ 13) ಸಂಜೆ 5 ಗಂಟೆಯಿಂದಲೇ ಅರ್ಜಿಗಳನ್ನು ಹಾಕಲು ಅವಕಾಶ ಕಲ್ಪಿಸಲಾಗುವುದು ಎಂದು ಸಹ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಕೊವಿಡ್ ಸೋಂಕು ಇರುವುದರಿಂದ ದೇಶದಾದ್ಯಂತ ನಡೆಯಲಿರುವ ಈ ಪರೀಕ್ಷೆಯ ಕೇಂದ್ರಗಳನ್ನು ಹೆಚ್ಚಿಸಲಾಗುವುದು. ಈ ಹಿಂದೆ ನಡೆಯುತ್ತಿದ್ದ 155 ನಗರಗಳಲ್ಲಿ ನೀಟ್ ಪರೀಕ್ಷೆ ನಡೆಯುತ್ತಿದ್ದು, ಇದನ್ನು 198 ನಗರಗಳಿಗೆ ಹೆಚ್ಚಿಸಲಾಗುವುದು. ಅಲ್ಲದೇ ಪರೀಕ್ಷಾ ಕೇಂದ್ರಗಳನ್ನು  3,862 ಕ್ಕೆ ಹೆಚ್ಚಿಸಲಾಗುವುದು ಎಂದು ಸಹ ಅವರು ಟ್ವೀಟ್​ನಲ್ಲಿ ಮಾಹಿತಿ ನೀಡಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಫೇಸ್​ ಮಾಸ್ಕನ್ನು ಒದಗಿಸಲಾಗುವುದು. ಕೊವಿಡ್ ತಡೆ ಮಾರ್ಗಸೂಚಿ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಪರೀಕ್ಷೆ ನಡೆಸಲಾಗುವುದು ಎಂದು ಅವರು ತಿಳಿಸಿದರು. ಪರೀಕ್ಷಾರ್ಥಿಗಳು ಅಪ್ಲಿಕೇಶನ್​ ಫಾರ್ಮ್​​​ಗಳನ್ನು ಎನ್​ಟಿಎಯ ಅಧಿಕೃತ ವೆಬ್​ಸೈಟ್​ neet.nta.nic.in.ನಲ್ಲಿ ಪಡೆಯಬಹುದು.

ಇದನ್ನೂ ಓದಿ: 

VTU Exams 2021: ವಿಟಿಯು ಮೊದಲ ಸೆಮಿಸ್ಟರ್​ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಇಲ್ಲಿದೆ ವಿವರ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಮುಖ್ಯ ಎಂದ ಹೈಕೋರ್ಟ್​; ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಆನೆ ಬಲ!

(NEET 2021 Exam date September 12 Education Minister Dharmendra Pradhan announced)

Published On - 6:32 pm, Mon, 12 July 21