AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET 2022: ಒಳಉಡುಪು ತೆಗೆದಿಟ್ಟು ಪರೀಕ್ಷೆ ಬರೆಯಲು ಸೂಚನೆ; ವಿದ್ಯಾರ್ಥಿನಿಯ ತಂದೆಯಿಂದ ಪೊಲೀಸ್​ರಿಗೆ ದೂರು

ನಿನ್ನೆ (ಜುಲೈ 17) ರಂದು ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದ NEET ಪರೀಕ್ಷೆಯಲ್ಲಿ ಒಳ ಉಡುಪು ತೆಗೆದಿಟ್ಟು ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಸೂಚನೆ

NEET 2022: ಒಳಉಡುಪು ತೆಗೆದಿಟ್ಟು ಪರೀಕ್ಷೆ ಬರೆಯಲು ಸೂಚನೆ; ವಿದ್ಯಾರ್ಥಿನಿಯ ತಂದೆಯಿಂದ ಪೊಲೀಸ್​ರಿಗೆ  ದೂರು
ಸಾಂಧರ್ಬಿಕ ಚಿತ್ರImage Credit source: The News Minute
TV9 Web
| Updated By: ವಿವೇಕ ಬಿರಾದಾರ|

Updated on:Jul 18, 2022 | 10:34 PM

Share

ನಿನ್ನೆ (ಜುಲೈ 17) ರಂದು ಕೇರಳದ ಕೊಲ್ಲಂ ಜಿಲ್ಲೆಯ ಆಯುರ್‌ನ ಮಾರ್ ಥೋಮಾ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಮಹಾವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಪ್ರವೇಶಿಸುವ ಮೊದಲು ತಮ್ಮ ಬ್ರಾಗಳನ್ನು ತೆಗೆದಿಟ್ಟು ಪರೀಕ್ಷಾ ಕೇಂದ್ರದಲ್ಲಿ ಪ್ರವೇಶಿಸುವಂತೆ ಸಿಬ್ಬಂದಿಗಳು ಒತ್ತಾಯ ಪಡಿಸಿದ್ದಾರೆ ಎಂದು ವಿದ್ಯಾರ್ಥಿನಿಯ ತಂದೆ ಕೊಲ್ಲಂ ಗ್ರಾಮಾಂತರ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ.

ಪ್ರಕರಣವು ವಿದ್ಯಾರ್ಥಿನಿಯ ಪೋಷಕರು ಕೊಲ್ಲಂ ಗ್ರಾಮಾಂತರ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ದೂರಿನಲ್ಲಿ ಬ್ರಾನಲ್ಲಿ ಮೆಟಲ್ ಹುಕ್ಸ್ ಇರುವುದರಿಂದ ಬ್ರಾ ಧರಿಸಿಕೊಂಡು NEET ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲವೆಂದು ಉಲ್ಲೇಖಿಸಿದ್ದಾರೆ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಹೊರಡಿಸಿರುವ ಅಧಿಕೃತ ಸುತ್ತೋಲೆಯಲ್ಲಿ ಲೋಹದ ಕೊಕ್ಕೆ ಇರುವ ಬ್ರಾಗಳನ್ನು ನಿಷೇಧಿಸಿರುವಂತೆ  ಉಲ್ಲೇಖಿಸಿಲ್ಲ ಎಂದು ವಿದ್ಯಾರ್ಥಿನಿಯ ತಂದೆ ಗೋಪಕುಮಾರ್ ಸೂರನಾಡ್ ತಮ್ಮ ದೂರಿನಲ್ಲಿ ಸೂಚಿಸಿದ್ದಾರೆ. ಅವರ ಮಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವಾಗ ಒಳ ಉಡುಪುಗಳನ್ನು ತೆಗೆದಿಟ್ಟು ಪರೀಕ್ಷೆ ಬರೆಯಲು ಸೂಚಿಸಿದ್ದಾರೆ. ಇದಕ್ಕೆ ಒಪ್ಪದಿದ್ದಾಗ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲವೆಂದು ತಿಳಿಸಿದ್ದಾರೆ.

ಇದರಿಂದ ನೊಂದ ವಿದ್ಯಾರ್ಥಿನಿ ಅಳುತ್ತಾ, ಸಂಕಟದಿಂದ ಮನೆಗೆ ವಾಪಸ್​ ಆಗಿದ್ದಾಳೆ. ನನ್ನ ಮಗಳು ಈ ಪರೀಕ್ಷೆಗೆ ಬಹಳ ಸಮಯದಿಂದ ತಯಾರಿ ನಡೆಸುತ್ತಿದ್ದಳು. ಆದರೆ ಆಕೆಗೆ ಈಗ ಪರೀಕ್ಷೆ ಬರೆಯಲು ಆಗಲಿಲ್ಲ.  ಇದೆ ರೀತಿಯಾಗಿ ಮಹಾವಿದ್ಯಾಲಯದಲ್ಲಿ ಬೇರೆ ವಿದ್ಯಾರ್ಥಿನಿಯರಿಗೂ ಕೂಡ ಕಡ್ಡಾಯವಾಗಿ ತಮ್ಮ ಒಳಉಡುಪುಗಳನ್ನು ತೆಗೆಯುವಂತೆ ಸೂಚಿಸಿದ್ದಾರೆ.

ಇದರಿಂದ ವಿದ್ಯಾರ್ಥಿನಿಯರಿಗು ತುಂಬಾ ನೋವಾಗಿದೆ. ಇದು ನಿಯಮವಾಗಿದ್ದರೆ, ಅವರು ಫ್ರಿಸ್ಕಿಂಗ್ ಸಮಯದಲ್ಲಿ ಒಳ ಉಡುಪುಗಳನ್ನು ಪರಿಶೀಲಿಸಬಹುದು. ಆದರೆ ಅವುಗಳನ್ನು ಏಕೆ ತೆಗೆಯಬೇಕು ? NEET ಪರೀಕ್ಷೆ ನಿಯಮ ಸುತ್ತೋಲೆಯಲ್ಲಿ ಇಲ್ಲ ಎಂದು ಅವರು TNM ಗೆ ತಿಳಿಸಿದರು.

ಈ ಮಧ್ಯೆ ಮಾರ್ ಥೋಮಾ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿಯ ಅಧಿಕಾರಿಗಳು TNM ಗೆ ತಮ್ಮ ಯಾವುದೇ ಸಿಬ್ಬಂದಿ ಪರಿಶೀಲನೆ ಪ್ರಕ್ರಿಯೆಯಲ್ಲಿ ಭಾಗಿಯಾಗಿಲ್ಲ ಎಂದು ತಿಳಿಸಿದ್ದಾರೆ. “ಬಯೋಮೆಟ್ರಿಕ್ ಹಾಜರಾತಿಯನ್ನು ಪರೀಕ್ಷಿಸಲು ಮತ್ತು ಗಮನಿಸಲು NTA ನಿಂದ ಎರಡು ಏಜೆನ್ಸಿಗಳನ್ನು ನಿಯೋಜಿಸಲಾಗಿದೆ. ಈ ನಿಯಮಗಳೇನು ಎಂಬುದೇ ನಮಗೆ ತಿಳಿದಿಲ್ಲ. ಏಜೆನ್ಸಿಯ ಸಿಬ್ಬಂದಿಯೇ ಇದನ್ನೆಲ್ಲ ಪರಿಶೀಲಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ, ಮಕ್ಕಳು ಶಾಲು ಹಾಕಲು ಅನುಮತಿ ಕೇಳಲು ನಮ್ಮ ಬಳಿಗೆ ಬಂದಾಗ, ನಾವು ಮಧ್ಯಪ್ರವೇಶಿಸಿ ಅವರಿಗೆ ಅನುಮತಿ ನೀಡಿದ್ದೇವೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

NEET (UG) ಗೆ ಸಂಬಂಧಿಸಿದಂತೆ NTA ಹೊರಡಿಸಿದ ಅಧಿಕೃತ ಮಾಹಿತಿ ಪ್ರಾಕಾರ ಲೋಹದ ಕೊಕ್ಕೆಗಳನ್ನು ಹೊಂದಿರುವ ಬ್ರಾಗಳ ನಿಷೇಧದ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದು ಗಮನಿಸಬಹುದು. ಅಧಿಸೂಚನೆ ಪ್ರಕಾರ  “ಉದ್ದನೆಯ ತೋಳುಗಳನ್ನು ಹೊಂದಿರುವ ಹಗುರವಾದ ಬಟ್ಟೆಗಳನ್ನು ಅನುಮತಿಸಲಾಗುವುದಿಲ್ಲ. ಆದಾಗ್ಯೂ, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಸಾಂಸ್ಕೃತಿಕ/ ಸಾಂಪ್ರದಾಯಿಕ ಉಡುಗೆಯಲ್ಲಿ ಬಂದರೆ, ಅವರು ಕೊನೆಯ ವರದಿ ಮಾಡುವ ಸಮಯಕ್ಕಿಂತ ಕನಿಷ್ಠ ಒಂದು ಗಂಟೆ ಮೊದಲು ಅಂದರೆ ಮಧ್ಯಾಹ್ನ 12.30 ಕ್ಕೆ ಪರೀಕ್ಷಾ ಮೇಲ್ವಿಚಾರಕರಿಗೆ ತಿಳಿಸಿರಬೇಕು ಎಂದು ಹೇಳಿದೆ.

ಹಾಗೇ ವಿದ್ಯಾರ್ಥಿನಿಯರಿಗೆ ಯಾವುದೇ ಲೋಹೀಯ ವಸ್ತುವನ್ನು ಪರೀಕ್ಷಾ ಕೊಠಡಿಯಲ್ಲಿ ಅನುಮತಿಸಲಾಗುವುದಿಲ್ಲ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

Published On - 10:33 pm, Mon, 18 July 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!