NEET 2022: ನೀಟ್ ಪರೀಕ್ಷೆ ಬರೆಯುವ ಯುವತಿಯರಿಗೆ ಒಳಉಡುಪು ತೆಗೆಯಲು ಒತ್ತಾಯ; ಕೇರಳದಲ್ಲಿ ಕೇಸ್ ದಾಖಲು

ಕೊಲ್ಲಂ ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ನಡೆದ ನೀಟ್ ಪರೀಕ್ಷೆ ವೇಳೆ ಯುವತಿಯರಿಗೆ ಒಳಉಡುಪು ಕಳಚಲು ಒತ್ತಾಯಿಸಿ ಅವಮಾನ ಮಾಡಲಾಗಿತ್ತು. ಕೊನೆಗೆ ಯುವತಿಯರು ಒಳಉಡುಪು ತೆಗೆದಿಟ್ಟು ಪರೀಕ್ಷೆ ಬರೆದಿದ್ದರು.

NEET 2022: ನೀಟ್ ಪರೀಕ್ಷೆ ಬರೆಯುವ ಯುವತಿಯರಿಗೆ ಒಳಉಡುಪು ತೆಗೆಯಲು ಒತ್ತಾಯ; ಕೇರಳದಲ್ಲಿ ಕೇಸ್ ದಾಖಲು
ಸಾಂದರ್ಭಿಕ ಚಿತ್ರImage Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 19, 2022 | 12:12 PM

ಕೊಲ್ಲಂ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಬರೆಯಲು ಬಂದಿದ್ದ ಯುವತಿಯರಿಗೆ ತಮ್ಮ ಬ್ರಾ ತೆಗೆದರೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಹೇಳಿರುವ ಘಟನೆ ಕೇರಳದ ಕೊಲ್ಲಂ (Kollam) ಜಿಲ್ಲೆಯಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಕೇರಳ ಪೊಲೀಸರು ಇಂದು ಕೇಸ್ ದಾಖಲಿಸಿಕೊಂಡಿದ್ದಾರೆ.

ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 354, 509 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೊಲ್ಲಂ ಪೊಲೀಸರು ತಿಳಿಸಿದ್ದಾರೆ. ಕೊಲ್ಲಂ ಜಿಲ್ಲೆಯ ಆಯುರ್‌ನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ನಡೆದ ನೀಟ್ ಪರೀಕ್ಷೆಗೆ ಹಾಜರಾಗುವ ವೇಳೆ ಪರೀಕ್ಷಾ ಕೇಂದ್ರದ ಹೊರಗೆ ಯುವತಿಯರಿಗೆ ಒಳಉಡುಪು ಕಳಚಲು ಒತ್ತಾಯಿಸಿ ಅವಮಾನ ಮಾಡಲಾಗಿತ್ತು. ಕೊನೆಗೆ ಯುವತಿಯರು ಒಳಉಡುಪು ಕಳಚಿಟ್ಟು ಪರೀಕ್ಷೆ ಬರೆದಿದ್ದರು. ಇದರಿಂದ ತೀವ್ರ ಮುಜುಗರಗೊಂಡಿದ್ದ ಯುವತಿ ಪೊಲೀಸರಿಗೆ ದೂರು ನೀಡಿದ್ದಳು.

ಮಹಿಳಾ ಪೊಲೀಸ್ ಅಧಿಕಾರಿಗಳ ತಂಡವು ಆ ಯುವತಿಯ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಇಂದು ಕೇಸ್ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: NEET 2022: ಹಿಜಾಬ್ ಧರಿಸಿದ್ದಕ್ಕೆ ನೀಟ್ ಪರೀಕ್ಷೆ ವೇಳೆ ಹಲವೆಡೆ ತೊಂದರೆ ಅನುಭವಿಸಿದ ಮುಸ್ಲಿಂ ಯುವತಿಯರು

ಮೊಟ್ಟಮೊದಲ ಬಾರಿಗೆ ನೀಟ್ ಪರೀಕ್ಷೆಗೆ ಕುಳಿತಿದ್ದ ನನ್ನ ಮಗಳು ತನಗಾದ ಆಘಾತಕಾರಿ ಅನುಭವದಿಂದ ಇನ್ನೂ ಹೊರಬಂದಿಲ್ಲ ಎಂದು 17 ವರ್ಷದ ಯುವತಿಯ ತಂದೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. ಆ ವೇಳೆ ಈ ಘಟನೆ ಬೆಳಕಿಗೆ ಬಂದಿತ್ತು. ಬ್ರಾ ಇಲ್ಲದೆಯೇ 3 ಗಂಟೆಗೂ ಹೆಚ್ಚು ಕಾಲ ಎಕ್ಸಾಂ ಹಾಲ್​ನಲ್ಲಿ ಕುಳಿತು ಪರೀಕ್ಷೆ ಬರೆಯಬೇಕಾದ ಪರಿಸ್ಥಿತಿ ಬಂದೊದಗಿದ್ದು, ಆಕೆಯನ್ನು ಮಾನಸಿಕವಾಗಿ ಬಹಳ ಕುಗ್ಗಿಸಿದೆ. ಈ ಘಟನೆಯಿಂದ ಆಕೆ ತೀವ್ರ ಅವಮಾನಕ್ಕೊಳಗಾಗಿದ್ದಾಳೆ ಎಂದು ಅವರು ಆರೋಪಿಸಿದ್ದರು.

ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗವೂ ಘಟನೆಯ ಕುರಿತು ತನಿಖೆಗೆ ಆದೇಶಿಸಿದೆ. 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಕೊಲ್ಲಂ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಗೆ ಆಯೋಗ ಸೂಚಿಸಿದೆ. 10 ಸಾವಿರ ವೈದ್ಯಕೀಯ ಆಕಾಂಕ್ಷಿಗಳಿಗೆ, NEET ಭದ್ರತಾ ತಪಾಸಣೆಯನ್ನು ತೆರವುಗೊಳಿಸುವುದು ದೊಡ್ಡ ಸವಾಲಾಗಿದೆ. ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ನೀಡಲಾಗಿದೆ. ವ್ಯಾಲೆಟ್‌ಗಳು, ಕೈಚೀಲಗಳು, ಬೆಲ್ಟ್‌ಗಳು, ಕ್ಯಾಪ್‌ಗಳು, ಆಭರಣಗಳು, ಶೂಗಳು ಮತ್ತು ಹೀಲ್ಸ್ ಅನ್ನು ನಿಷೇಧಿಸಲಾಗಿದೆ.

Published On - 12:10 pm, Tue, 19 July 22

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ