ರಾಜಸ್ಥಾನದ ಕೋಟದಲ್ಲಿ ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ, ವರ್ಷದಲ್ಲಿ 25ನೇ ಪ್ರಕರಣ

ರಾಜಸ್ಥಾನದ ಕೋಟದಲ್ಲಿ ನೀಟ್​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟದಲ್ಲಿ ಈ ವರ್ಷ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಸಂಖ್ಯೆ 25ಕ್ಕೆ ಏರಿದೆ. ರಾಂಚಿಯ ನಿವಾಸಿಯಾಗಿರುವ ವಿದ್ಯಾರ್ಥಿನಿಯು ಪ್ರಸ್ತುತ ನಗರದ ಬ್ಲೇಜ್ ಹಾಸ್ಟೆಲ್‌ನಲ್ಲಿ ತಂಗಿದ್ದಳು. ಆಕೆ ನೇಣು ಬಿಗಿದುಕೊಂಡಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ರಾಜಸ್ಥಾನದ ಕೋಟದಲ್ಲಿ ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ, ವರ್ಷದಲ್ಲಿ 25ನೇ ಪ್ರಕರಣ
ಸಾವು
Follow us
|

Updated on: Sep 13, 2023 | 9:56 AM

ಕೋಟಾ, ಸೆಪ್ಟೆಂಬರ್ 13: ರಾಜಸ್ಥಾನದ ಕೋಟದಲ್ಲಿ ನೀಟ್(NEET)​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟದಲ್ಲಿ ಈ ವರ್ಷ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಸಂಖ್ಯೆ 25ಕ್ಕೆ ಏರಿದೆ. ರಾಂಚಿಯ ನಿವಾಸಿಯಾಗಿರುವ ವಿದ್ಯಾರ್ಥಿನಿಯು ಪ್ರಸ್ತುತ ನಗರದ ಬ್ಲೇಜ್ ಹಾಸ್ಟೆಲ್‌ನಲ್ಲಿ ತಂಗಿದ್ದಳು. ಆಕೆ ನೇಣು ಬಿಗಿದುಕೊಂಡಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

2023 ರಲ್ಲಿ, ಅಧಿಕಾರಿಗಳು ಜಿಲ್ಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಒತ್ತಡದಿಂದಾಗಿ 25 ವಿದ್ಯಾರ್ಥಿಗಳ ಆತ್ಮಹತ್ಯೆ ಮಾಡಿಕೊಂಡಿರುವ ವರದಿ ಮಾಡಿದ್ದಾರೆ. ರಾಜಸ್ಥಾನ ಪೊಲೀಸರ ಅಂಕಿಅಂಶಗಳ ಪ್ರಕಾರ, 2022 ರಲ್ಲಿ 15, 2019 ರಲ್ಲಿ 18, 2018 ರಲ್ಲಿ 20, 2017 ರಲ್ಲಿ 7, 2016 ರಲ್ಲಿ 17 ಮತ್ತು 2015 ರಲ್ಲಿ 18. ಕೋಟಾದಲ್ಲಿ 2020 ಮತ್ತು 2021 ರಲ್ಲಿ ಯಾವುದೇ ವಿದ್ಯಾರ್ಥಿ ಆತ್ಮಹತ್ಯೆ ವರದಿಯಾಗಿಲ್ಲ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಮುಚ್ಚಲಾಗಿತ್ತು.

ಮತ್ತಷ್ಟು ಓದಿ: ಕೋಟಾದಲ್ಲಿ ಉತ್ತರ ಪ್ರದೇಶದ ವಿದ್ಯಾರ್ಥಿ ಆತ್ಮಹತ್ಯೆ; ಈ ವರ್ಷದಲ್ಲಿ ಇದು 17ನೇ ಪ್ರಕರಣ

ಮತ್ತೊಂದು ಘಟನೆ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ರಾಜಸ್ಥಾನದ ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವರ್ಷ ಇದೇ ಶಿಕ್ಷಣ ಕೇಂದ್ರದಲ್ಲಿ ಇಲ್ಲಿವರೆಗೆ 17 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಮಂಜೋತ್ ಛಾಬ್ರಾ ಉತ್ತರ ಪ್ರದೇಶದ ರಾಂಪುರದವನು. ಈ ವರ್ಷದ ಆರಂಭದಲ್ಲಿ ಕೋಟಾಕ್ಕೆ ಬಂದಿದ್ದು, ನೀಟ್ ಪರೀಕ್ಷೆಗೆ ತಯಾರಿ ನಡೆಸಲು ಕೋಚಿಂಗ್ ಸೆಂಟರ್‌ಗೆ ದಾಖಲಾಗಿದ್ದು, ಗುರುವಾರ ಬೆಳಗ್ಗೆ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ