ರಾಜಸ್ಥಾನದ ಕೋಟಾದಲ್ಲಿ ನೀಟ್​ ವಿದ್ಯಾರ್ಥಿ ಆತ್ಮಹತ್ಯೆ, ವರ್ಷದಲ್ಲಿ 28ನೇ ಪ್ರಕರಣ

ರಾಜಸ್ಥಾನದ ಕೋಟಾದಲ್ಲಿ ಮತ್ತೋರ್ವ ನೀಟ್(NEET)​ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ವರ್ಷದಲ್ಲಿ ಸಂಭವಿಸಿದ 28ನೇ ಪ್ರಕರಣ ಇದಾಗಿದೆ. ವಿದ್ಯಾರ್ಥಿಯನ್ನು ಪಶ್ಚಿಮ ಬಂಗಾಳ ಮೂಲದ ಫೌರೀದ್ ಹುಸೇನ್ ಎಂದು ಗುರುತಿಸಲಾಗಿದೆ. ನೀಟ್ ಆಕಾಂಕ್ಷಿಯಾಗಿದ್ದ ಹುಸೇನ್ ನಗರದ ವಕ್ಫ್ ನಗರ ಪ್ರದೇಶದಲ್ಲಿನ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ರಾಜಸ್ಥಾನದ ಕೋಟಾದಲ್ಲಿ ನೀಟ್​ ವಿದ್ಯಾರ್ಥಿ ಆತ್ಮಹತ್ಯೆ, ವರ್ಷದಲ್ಲಿ 28ನೇ ಪ್ರಕರಣ
ಸಾವುImage Credit source: Siasat.com
Follow us
ನಯನಾ ರಾಜೀವ್
|

Updated on: Nov 28, 2023 | 9:23 AM

ರಾಜಸ್ಥಾನದ ಕೋಟಾದಲ್ಲಿ ಮತ್ತೋರ್ವ ನೀಟ್(NEET)​ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ವರ್ಷದಲ್ಲಿ ಸಂಭವಿಸಿದ 28ನೇ ಪ್ರಕರಣ ಇದಾಗಿದೆ. ವಿದ್ಯಾರ್ಥಿಯನ್ನು ಪಶ್ಚಿಮ ಬಂಗಾಳ ಮೂಲದ ಫೌರೀದ್ ಹುಸೇನ್ ಎಂದು ಗುರುತಿಸಲಾಗಿದೆ. ನೀಟ್ ಆಕಾಂಕ್ಷಿಯಾಗಿದ್ದ ಹುಸೇನ್ ನಗರದ ವಕ್ಫ್ ನಗರ ಪ್ರದೇಶದಲ್ಲಿನ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ವಿವರಗಳ ಪ್ರಕಾರ, ವಿದ್ಯಾರ್ಥಿಯು ಬಾಡಿಗೆ ಮನೆಯಲ್ಲಿ ಉಳಿದುಕೊಂಡಿದ್ದು, ಇತರ ಕೆಲವು ವಿದ್ಯಾರ್ಥಿಗಳು ಸಹ ವಾಸಿಸುತ್ತಿದ್ದರು. ಸಂಜೆ ಸುಮಾರು 4 ಗಂಟೆಗೆ ಹುಸೇನ್​ನನ್ನು ಕೊನೆಯ ಬಾರಿಗೆ ನೋಡಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ, ರೂಂ ಸುಮಾರು 7 ಗಂಟೆಯವರೆಗೆ ಒಳಗಿನಿಂದ ಲಾಕ್ ಆಗಿತ್ತು.

ಹುಸೇನ್ ಯಾರ ಕರೆಗಳಿಗೂ ಪ್ರತಿಕ್ರಿಯಿಸದ ನಂತರ ಅವರ ಸ್ನೇಹಿತರು ಮನೆ ಮಾಲೀಕರಿಗೆ ಕರೆ ಮಾಡಿದ್ದರು. ಪೊಲೀಸರು ಸ್ಥಳಕ್ಕಾಗಮಿಸಿದ ಬಳಿಕ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, ಆತ್ಮಹತ್ಯೆಗೆ ಕಾರಣವೇನು ಎಂಬುದನ್ನು ತನಿಖೆ ನಡೆಸುತ್ತಿದ್ದು, ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಕೋಟಾ: ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪೋಷಕರೇ ಕಾರಣ ಎಂದ ಸುಪ್ರೀಂಕೋರ್ಟ್

ಮರಣೋತ್ತರ ಪರೀಕ್ಷೆ ನಡೆಸಿ ನಂತರ ವಿದ್ಯಾರ್ಥಿಯ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕೋಟಾವು ಕಳೆದ ಕೆಲವು ತಿಂಗಳುಗಳಿಂದ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಲ್ಲಿ ಆತಂಕಕಾರಿ ಉಲ್ಬಣಕ್ಕೆ ಸಾಕ್ಷಿಯಾಗಿದೆ, ಇದು ಸ್ಥಳೀಯ ಅಧಿಕಾರಿಗಳಲ್ಲಿ ಕಳವಳವನ್ನು ಹುಟ್ಟುಹಾಕಿದೆ.

ಅಧಿಕಾರಿಗಳು ಈಗ ಎಲ್ಲಾ ಕೋಚಿಂಗ್ ಸೆಂಟರ್‌ಗಳಲ್ಲಿ ಸೀಲಿಂಗ್ ಫ್ಯಾನ್‌ಗಳಲ್ಲಿ ಆಂಟಿ ಹ್ಯಾಂಗಿಂಗ್ ಸಾಧನಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿದ್ದಾರೆ ಮತ್ತು ಎರಡು ತಿಂಗಳ ಅವಧಿಗೆ ಯಾವುದೇ ಪರೀಕ್ಷೆಗಳನ್ನು ನಡೆಸದಂತೆ ಸಂಸ್ಥೆಗಳಿಗೆ ನಿರ್ದೇಶನಗಳನ್ನು ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ