Big News: ನೀಟ್ ಪರೀಕ್ಷೆ ವೇಳೆ ಒಳಉಡುಪು ತೆಗೆಯಲು ಒತ್ತಾಯ; ಯುವತಿಯರಿಗೆ ಮರುಪರೀಕ್ಷೆ ಬರೆಯಲು ಅವಕಾಶ

ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ತೆಗೆದುಕೊಳ್ಳುವ ಮುನ್ನ ತಮ್ಮ ಒಳಉಡುಪುಗಳನ್ನು ತೆಗೆಯುವಂತೆ ಹೇಳಲಾದ ವಿದ್ಯಾರ್ಥಿನಿಯರಿಗೆ NEET ಪರೀಕ್ಷೆಯನ್ನು ಪುನಃ ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹೇಳಿದೆ.

Big News: ನೀಟ್ ಪರೀಕ್ಷೆ ವೇಳೆ ಒಳಉಡುಪು ತೆಗೆಯಲು ಒತ್ತಾಯ; ಯುವತಿಯರಿಗೆ ಮರುಪರೀಕ್ಷೆ ಬರೆಯಲು ಅವಕಾಶ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 27, 2022 | 12:13 PM

ನವದೆಹಲಿ: ನೀಟ್ (NEET) ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳಿಗೆ ಒಳಉಡುಪು ತೆಗೆಯಲು ಸೂಚಿಸಿದ್ದ ಪ್ರಕರಣ ಭಾರೀ ಚರ್ಚೆಗೀಡಾಗಿತ್ತು. ಕೇರಳದ ಕೊಲ್ಲಂ (Kollam) ಜಿಲ್ಲೆಯಲ್ಲಿ ನೀಟ್ ಪರೀಕ್ಷೆ ವೇಳೆ ವಿದ್ಯಾರ್ಥಿನಿಯರಿಗೆ ಒಳಉಡುಪು ಧರಿಸದೆ ಪರೀಕ್ಷೆ ಬರೆಯಲು ಸೂಚಿಸಲಾಗಿತ್ತು. ಇದರಿಂದ ಅವಮಾನಿತರಾದ ಅಭ್ಯರ್ಥಿಗಳು ಪರೀಕ್ಷೆ ಬಳಿಕ ತಮ್ಮ ನೋವು ತೋಡಿಕೊಂಡಿದ್ದರು. ಇದಕ್ಕೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಆ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮರು ಪರೀಕ್ಷೆಗೆ ಅವಕಾಶ ನೀಡಿದೆ.

ಸೆಪ್ಟೆಂಬರ್ 4ರಂದು ನೀಟ್ ಅಭ್ಯರ್ಥಿಗಳಿಗೆ ಪುನಃ ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ. ಮರು ಪರೀಕ್ಷೆ ನಡೆಸುವ ಬಗ್ಗೆ ಇ-ಮೇಲ್​ ಮೂಲಕ ಮಾಹಿತಿ ನೀಡಲಾಗಿದೆ. ವಿದ್ಯಾರ್ಥಿನಿಯರಿಗೆ ಇ-ಮೇಲ್​ ಮೂಲಕ ಎನ್​ಟಿಎ (NTA) ಮಾಹಿತಿ ನೀಡಿದ್ದು, ನೀಟ್ ಪರೀಕ್ಷಾ ಕೇಂದ್ರ ಪ್ರವೇಶಿಸುವ ಮೊದಲು ತಪಾಸಣೆ ನಡೆಸಿದಾಗ ಯುವತಿಯರಿಗೆ ಒಳಉಡುಪು ತೆಗೆಯುವಂತೆ ಹೇಳಲಾಗಿತ್ತು. ಈ ಕುರಿತು ವ್ಯಕ್ತಿಯೊಬ್ಬರು ಕೊಟ್ಟಾರಕರ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣದ ಸಂಬಂಧ 7 ಜನರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: NEET 2022: ಕೈಯಲ್ಲೇ ಬ್ರಾ ಹಿಡ್ಕೊಂಡು ಹೋಗಿ ಅಂದ್ರು; ನೀಟ್ ಪರೀಕ್ಷೆಯ ಕರಾಳ ಅನುಭವ ಬಿಚ್ಚಿಟ್ಟ ಯುವತಿ

ಈ ಘಟನೆಯ ಬಗ್ಗೆ ವ್ಯಾಪಕ ಪ್ರತಿಭಟನೆಗಳು, ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ 15 ದಿನಗಳಲ್ಲಿ ವರದಿ ನೀಡುವಂತೆ ಮಾನವ ಹಕ್ಕುಗಳ ಆಯೋಗ ಕೊಲ್ಲಂ ಎಸ್​​ಪಿಗೆ ಸೂಚಿಸಿತ್ತು. ಈ ಸಂಬಂಧ ಮೂವರು ಸದಸ್ಯರ ಸತ್ಯಶೋಧನಾ ಸಮಿತಿ ಕೂಡ ರಚಿಸಲಾಗಿತ್ತು. ತನಿಖೆ ನಡೆಸಿ 4 ವಾರಗಳಲ್ಲಿ ವರದಿ ಸಲ್ಲಿಸಲು NTA ಸೂಚಿಸಿತ್ತು.

ಹುಡುಗಿಯರಿಗೆ ಸೆಪ್ಟೆಂಬರ್ 4ರಂದು ಪರೀಕ್ಷೆಯನ್ನು ತೆಗೆದುಕೊಳ್ಳುವ ಆಯ್ಕೆಯನ್ನು ನೀಡಲಾಗುವುದು. NTA ಇದನ್ನು ದೃಢೀಕರಿಸುವ ಇಮೇಲ್ ಅನ್ನು ವಿದ್ಯಾರ್ಥಿಗಳಿಗೆ ಕಳುಹಿಸಿದೆ. ಕೇರಳದ ಕೊಲ್ಲಂ ಜಿಲ್ಲೆಯ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮೊದಲು ಯುವತಿಯರಿಗೆ ಒಳಉಡುಪುಗಳನ್ನು ತೆಗೆಯುವಂತೆ ಹೇಳಲಾಗಿದೆ ಎಂಬ ವರದಿಗಳು ಹೊರಬಂದ ನಂತರ ಭಾರೀ ಗಲಾಟೆ ಭುಗಿಲೆದ್ದಿತ್ತು.

ಇದನ್ನೂ ಓದಿ: NEET 2022: ನೀಟ್ ಪರೀಕ್ಷೆ ಬರೆಯುವ ಯುವತಿಯರಿಗೆ ಒಳಉಡುಪು ತೆಗೆಯಲು ಒತ್ತಾಯ; ಕೇರಳದಲ್ಲಿ ಕೇಸ್ ದಾಖಲು

ಜುಲೈನಲ್ಲಿ ವ್ಯಕ್ತಿಯೊಬ್ಬರು ಕೊಟ್ಟಾರಕರ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಚಾತಮಂಗಲಂನಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮೊದಲು ತಮ್ಮ ಮಗಳು ಸೇರಿದಂತೆ ಮಹಿಳಾ ನೀಟ್ ಆಕಾಂಕ್ಷಿಗಳಿಗೆ ಬ್ರಾಗಳನ್ನು ತೆಗೆಯುವಂತೆ ಸಿಬ್ಬಂದಿ ಹೇಳಿದ್ದರು ಎಂದು ದೂರು ನೀಡಿದ್ದರು. ವರದಿಗಳ ಪ್ರಕಾರ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮೊದಲು ತಮ್ಮ ಒಳಉಡುಪುಗಳನ್ನು ತೆಗೆಯುವಂತೆ ಒತ್ತಾಯಿಸಲಾಯಿತು. ಏಕೆಂದರೆ ಅವರ ಬ್ರಾಗಳಲ್ಲಿ ಲೋಹದ ಕೊಂಡಿಗಳಿದ್ದುದರಿಂದ ಭದ್ರತೆಯ ಕಾಳಜಿಯಿಂದ ಬ್ರಾಗಳನ್ನು ತೆಗೆದಿಡಲು ಸೂಚಿಸಲಾಗಿತ್ತು. ಇದರಿಂದಾಗಿ ಮುಜುಗರಕ್ಕೀಡಾದ ಯುವತಿಯರು ಕೂದಲಿನಿಂದ ಎದೆಯನ್ನು ಮುಚ್ಚಿಕೊಂಡು ಹುಡುಗರ ಮಧ್ಯೆ ಕುಳಿತು ಪರೀಕ್ಷೆ ಬರೆದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Sat, 27 August 22

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ