ನೀಟ್ ಪರೀಕ್ಷೆಯಲ್ಲಿ ಅಕ್ರಮ: ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಪ್ರಶಂಸಿದ ಭಾರತೀಯ ವೈದ್ಯಕೀಯ ಸಂಘ
ನೀಟ್ (ಯುಜಿ) ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ತ್ವರಿತವಾಗಿ ಕ್ರಮಕೈಗೊಂಡ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಭಾರತೀಯ ವೈದ್ಯಕೀಯ ಸಂಘವು ಅಭಿನಂದಿಸಿದೆ. ಪ್ರಧಾನಿ ಮೋದಿ ಸೇರಿದಂತೆ ಕೆಲ ರಾಷ್ಟ್ರೀಯ ನಾಯಕರಿಗೆ ಕೃತಜ್ಞತೆ ಸಲ್ಲಿಸಲಾಗಿದೆ. ನೀಟ್ ಯುಜಿ ಪರೀಕ್ಷೆಯಲ್ಲಿನ ಅಕ್ರಮವನ್ನು ಸಮಗ್ರ ತನಿಖೆಗಾಗಿ ಸಿಬಿಐಗೆ ವರ್ಗಾಯಿಸಿದ್ದಕ್ಕಾಗಿ ನಾವು ಶಿಕ್ಷಣ ಸಚಿವಾಲಯಕ್ಕೆ ನಮ್ಮ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.
ದೆಹಲಿ, ಜೂನ್ 23: ನೀಟ್ (NEET-UG) ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ತ್ವರಿತವಾಗಿ ಕ್ರಮಕೈಗೊಂಡ ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಭಾರತೀಯ ವೈದ್ಯಕೀಯ ಸಂಘವು (Indian Medical Association) ಅಭಿನಂದಿಸಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ವಿಶೇಷವಾಗಿ ಕೃತಜ್ಞತೆ ಸಲ್ಲಿಸಿದೆ.
ನೀಟ್ ಯುಜಿ ಪರೀಕ್ಷೆಯಲ್ಲಿನ ಅಕ್ರಮವನ್ನು ಸಮಗ್ರ ತನಿಖೆಗಾಗಿ ಸಿಬಿಐಗೆ ವರ್ಗಾಯಿಸಿದ್ದಕ್ಕಾಗಿ ನಾವು ಶಿಕ್ಷಣ ಸಚಿವಾಲಯಕ್ಕೆ ನಮ್ಮ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಯ ಮಹಾನಿರ್ದೇಶಕರನ್ನು ಹುದ್ದೆಯಿಂದ ವಜಾ ಮಾಡಿ, ಪ್ರದೀಪ್ ಕುಮಾರ್ ಖರೋಕಾ ಅವರನ್ನು ಮಹಾನಿರ್ದೇಶಕರನ್ನಾಗಿ ಮಾಡಿ ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದಕ್ಕೆ ನಾವು ಸರ್ಕಾರಕ್ಕೆ ಕೃತಜ್ಞರಾಗಿರುತ್ತೇವೆ.
ಇದನ್ನೂ ಓದಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ತನಿಖೆ ಜವಾಬ್ದಾರಿ ಸಿಬಿಐಗೆ ವಹಿಸಿದ ಶಿಕ್ಷಣ ಸಚಿವಾಲಯ
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ದುಷ್ಕೃತ್ಯ ಮತ್ತು ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕಾನೂನುಗಳನ್ನು ಜಾರಿಗೊಳಿಸಿದ್ದಕ್ಕಾಗಿ ನಾವು ಸರ್ಕಾರವನ್ನು ಪ್ರಶಂಸಿಸುತ್ತೇವೆ. ಅಕ್ರಮದಲ್ಲಿ ಒಳಗಾದ ಪರೀಕ್ಷಾ ಅಧಿಕಾರಿಗಳು, ಸೇವಾ ಪೂರೈಕೆದಾರರು ಅಥವಾ ಇತರೆ ಸಂಸ್ಥೆಗಳನ್ನು ಒಳಗೊಂಡ ಸಂಘಟಿತ ಅಪರಾಧಿಗಳು 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ ರೂ. 1 ಕೋಟಿ ರೂ. ದಂಡ ಕಟ್ಟಬೇಕಿದೆ.
ಪ್ರಸ್ತುತ ವಿದ್ಯಾರ್ಥಿಗಳು ಭಾರತದ ಭವಿಷ್ಯ. ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅತ್ಯಂತ ಶ್ರದ್ಧೆ ಮತ್ತು ಗೌಪ್ಯತೆಯಿಂದ ನಡೆಸುವುದು ನಿರ್ಣಾಯಕವಾಗಿದೆ. ನೀಟ್ ಪಿಜಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳು ಸರ್ಕಾರದ ಸ್ವಾಗತಾರ್ಹ ಸುಧಾರಣೆಗಳ ಭಾಗವಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘವು ವಿಶ್ವಾಸ ವ್ಯಕ್ತಪಡಿಸಿದ್ದು, ಸರ್ಕಾರವು ಭರವಸೆ ನೀಡಿದಂತೆ ದೃಢವಾದ ಕಾರ್ಯವಿಧಾನವನ್ನು ನಾವು ಭಾವಿಸುತ್ತೇವೆ.
ಭಾರತೀಯ ವೈದ್ಯಕೀಯ ಸಂಘವು ಸರ್ಕಾರದ ನಿರ್ಧಾರಗಳನ್ನು ಸ್ವಾಗತಿಸುವುದಲ್ಲದೆ, ಈ ನಿಟ್ಟಿನಲ್ಲಿ ತೆಗೆದುಕೊಂಡ ಸಮಯೋಚಿತ ಕ್ರಮಗಳನ್ನು ಶ್ಲಾಘಿಸುತ್ತದೆ. ಇನ್ನು ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಇತರೆ ಕೋರ್ಸ್‌ಗಳಿಗೆ ಪ್ರವೇಶವು ಸಮಯಕ್ಕೆ ಸರಿಯಾಗಿ ಪ್ರಾರಂಭವಾಗುತ್ತದೆ. ನಮ್ಮ ಮುಂದಿನ ಪೀಳಿಗೆಯ ಸುರಕ್ಷಿತ ಮತ್ತು ಸುಭದ್ರ ಭವಿಷ್ಯಕ್ಕಾಗಿ ನಾವು ಆಶಿಸುತ್ತೇವೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:05 pm, Sun, 23 June 24