AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ರಾಷ್ಟ್ರೀಯ ಜವಾಬ್ದಾರಿ: ಎನ್​ಡಿಎ ಸಭೆಯಲ್ಲಿ ಮೋದಿ

ಪ್ರಧಾನಿ ಮೋದಿ ನೀಟ್ ಸೇರಿದಂತೆ ಪರೀಕ್ಷಾ ಪತ್ರಿಕೆ ಸೋರಿಕೆ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಇದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ರಾಷ್ಟ್ರೀಯ ಕರ್ತವ್ಯ ಎಂದಿದ್ದಾರೆ. ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಹಾಗೂ ಪಾರದರ್ಶಕ, ದೋಷರಹಿತ ಪರೀಕ್ಷಾ ವ್ಯವಸ್ಥೆ ರೂಪಿಸಲು ಸಾಮೂಹಿಕ ಪ್ರಯತ್ನದ ಅಗತ್ಯವಿದೆ ಎಂದು ಕರೆ ನೀಡಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ದೇಶದ ಹಿತಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ರಾಷ್ಟ್ರೀಯ ಜವಾಬ್ದಾರಿ: ಎನ್​ಡಿಎ ಸಭೆಯಲ್ಲಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Jul 21, 2026 | 11:50 AM

Share

ನವದೆಹಲಿ, ಜುಲೈ 21: ಆಡಳಿತಾರೂಢ ಎನ್‌ಡಿಎ (NDA) ಸಂಸದೀಯ ಪಕ್ಷದ ‘ಮಂಗಲ್ ಮಿಲನ್’ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಟ್ (NEET) ಮತ್ತು ಇತರ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಕುರಿತು ಅತ್ಯಂತ ಗಂಭೀರವಾಗಿ ಮಾತನಾಡಿದ್ದಾರೆ. “ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟುವುದು ಸರ್ಕಾರದ ಕೇವಲ ಕರ್ತವ್ಯವಲ್ಲ, ಅದೊಂದು ‘ರಾಷ್ಟ್ರೀಯ ಜವಾಬ್ದಾರಿ’ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ. ಸಭೆಯ ನಂತರ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಪ್ರಧಾನಿಯವರ ಮಾತುಗಳನ್ನು ಮಾಧ್ಯಮಗಳಿಗೆ ವಿವರಿಸಿದರು.

ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೆ ಯಾವುದೇ ಕಾರಣಕ್ಕೂ ವಿನಾಯಿತಿ ನೀಡಬಾರದು ಎಂದಿರುವ ಪ್ರಧಾನಿ. ಪರೀಕ್ಷಾ ಪ್ರಕ್ರಿಯೆಯನ್ನು ಕಲುಷಿತಗೊಳಿಸಿ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವ ಕಿಡಿಗೇಡಿಗಳಿಗೆ ಕಾನೂನಿನಡಿಯಲ್ಲಿ ಸಿಗಬಹುದಾದ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಪ್ರಧಾನಿ ಮೋದಿ ಖಡಕ್ ಆಗಿ ಸೂಚಿಸಿದ್ದಾರೆ.

ಭವಿಷ್ಯದಲ್ಲಿ ಯಾವುದೇ ರೀತಿಯ ಸೋರಿಕೆ ನಡೆಯದಂತೆ ಅತ್ಯಂತ ಪಾರದರ್ಶಕ ಹಾಗೂ ದೋಷರಹಿತ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸಲು ಸರ್ಕಾರಿ ಮತ್ತು ಸಾಂಸ್ಥಿಕ ಮಟ್ಟದಲ್ಲಿ ಸಾಮೂಹಿಕ ಪ್ರಯತ್ನಗಳು ನಡೆಯಬೇಕೆಂದು ಕರೆ ನೀಡಿದ್ದಾರೆ. ಸಂಸತ್ತಿನ ಕಲಾಪಗಳು ಸುಗಮವಾಗಿ ನಡೆಯುವಂತೆ ಮಾಡಲು ಪ್ರಧಾನಿ ನಾಯಕರೊಂದಿಗೆ ಚರ್ಚಿಸಿದರು.

ಮತ್ತಷ್ಟು ಓದಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ತೀವ್ರ ಪ್ರತಿಭಟನೆ; ಅಮಿತ್ ಶಾ- ಧರ್ಮೇಂದ್ರ ಪ್ರಧಾನ್ ತುರ್ತು ಸಭೆ

ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇರಲಿ, ದೇಶದ ಭವಿಷ್ಯ ಮತ್ತು ಯುವಜನತೆಯ ಕಲ್ಯಾಣಕ್ಕಾಗಿ ಕೆಲಸ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ಸಂಸದರ ಮೇಲಿದೆ. ಶಾಸಕಾಂಗ ವ್ಯವಹಾರಗಳನ್ನು ಬೆಂಬಲಿಸಲು ಎನ್‌ಡಿಎ ಮೈತ್ರಿಕೂಟದ ಎಲ್ಲಾ ನಾಯಕರು ಒಗ್ಗಟ್ಟಿನಿಂದ ಇರಬೇಕು. ಹಾಗೆಯೇ ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಸಹ ಗದ್ದಲ ಎಬ್ಬಿಸದೆ ರಚನಾತ್ಮಕವಾಗಿ ದೇಶದ ಹಿತದೃಷ್ಟಿಯಿಂದ ಭಾಗವಹಿಸಬೇಕು” ಎಂದು ಪ್ರಧಾನಿ ಮೋದಿ ಆಶಿಸಿದ್ದಾರೆ.

ಯುವಕರ ಭವಿಷ್ಯವೇ ನಮ್ಮ ಆದ್ಯತೆ ಯುವಕರ ಭವಿಷ್ಯವೇ ಮೊದಲ ಆದ್ಯತೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಎಂಬುದು ರಾಜಕೀಯ ವಿಷಯವಾಗಬಾರದು. ಇದೊಂದು ರಾಷ್ಟ್ರೀಯ ಸಮಸ್ಯೆ, ಯುವಕರ ಭದ್ರತೆ ಮತ್ತು ಭವಿಷ್ಯ ಸರ್ಕಾರದ ಆದ್ಯತೆಯಾಗಿದೆ ಎಂದರು. ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:11 am, Tue, 21 July 26

Follow Us
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು ವಿನಯ್ ಆಸೆ
‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು ವಿನಯ್ ಆಸೆ
12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ
12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ
ಲಿಫ್ಟ್​ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ?
ಲಿಫ್ಟ್​ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ?
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ
ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು