NEET-PG Exam: ನೀಟ್-ಪಿಜಿ ಪರೀಕ್ಷೆಯಲ್ಲಿ ಅಕ್ರಮ; ಭಾನುವಾರ ನಡೆಯಬೇಕಿದ್ದ ಎಕ್ಸಾಂ ಮುಂದೂಡಿಕೆ
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್)ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ (ಭಾನುವಾರ) ನಡೆಯಬೇಕಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ. ಶೀಘ್ರದಲ್ಲೇ ಪ್ರವೇಶ ಪರೀಕ್ಷೆಯ ಹೊಸ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಪ್ರಕಟಿಸಲಿದೆ.
ನವದೆಹಲಿ: ನೀಟ್ -ಪಿಜಿ (NEET-PG) ಅಕ್ರಮದ ಹಿನ್ನೆಲೆಯಲ್ಲಿ ಭಾನುವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ನಾಳೆ (ಜೂನ್ 23) ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಇಂದು ಖಚಿತಪಡಿಸಿದೆ.
ಪರೀಕ್ಷೆಯ ಹೊಸ ದಿನಾಂಕವನ್ನು ಆದಷ್ಟು ಬೇಗ ಪ್ರಕಟಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ. NEET-UG ಫಲಿತಾಂಶ ಮತ್ತು UCG-NET ಪರೀಕ್ಷೆಯ ರದ್ದತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
NEET PG 2024 which is scheduled to be held tomorrow across Nation is now postponed.
Fresh date will be notified at the earliest.
This shouldn’t be happened before 10 hours of exam. This will affect mental health of aspirants🙏 pic.twitter.com/4fieSH5wOn
— Dr.Meet Ghonia (@DrMeet_Ghonia) June 22, 2024
“ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರತೆಯ ಬಗ್ಗೆ ಇತ್ತೀಚಿನ ಆರೋಪಗಳ ಘಟನೆಗಳನ್ನು ಪರಿಗಣಿಸಿ, ಆರೋಗ್ಯ ಸಚಿವಾಲಯವು ವೈದ್ಯಕೀಯ ವಿದ್ಯಾರ್ಥಿಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿಯು ನಡೆಸುವ NEET-PG ಪ್ರವೇಶ ಪರೀಕ್ಷೆಯ ಪ್ರಕ್ರಿಯೆಗಳ ದೃಢತೆಯ ಸಂಪೂರ್ಣ ಮೌಲ್ಯಮಾಪನವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ” ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ನೀಟ್ ಪರೀಕ್ಷೆ ಅಕ್ರಮ: ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಕಾನೂನು ಜಾರಿ ಮಾಡಿದ ಕೇಂದ್ರ
ಇದರ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಅಂದರೆ ಜೂನ್ 23ರಂದು ನಡೆಯಲಿರುವ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಇದರಿಂದ ವಿದ್ಯಾರ್ಥಿಗಳಿಗೆ ಉಂಟಾದ ಅನಾನುಕೂಲತೆಗಾಗಿ ಆರೋಗ್ಯ ಸಚಿವಾಲಯವು ಪ್ರಾಮಾಣಿಕವಾಗಿ ವಿಷಾದಿಸುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಕಳೆದ 2 ತಿಂಗಳುಗಳಲ್ಲಿ, ದೇಶದ 2 ದೊಡ್ಡ ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್ ಮತ್ತು ನೆಟ್ನಲ್ಲಿ ಅಕ್ರಮಗಳು ಮತ್ತು ಪೇಪರ್ ಸೋರಿಕೆಗಳ ಕುರಿತು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಸತತವಾಗಿ ಮಧ್ಯಪ್ರವೇಶಿಸಿತ್ತು. ಇದೀಗ ಎನ್ಟಿಎ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ಅವರನ್ನು ಕೂಡ ವಜಾಗೊಳಿಸಲಾಗಿದೆ.
ಇದನ್ನೂ ಓದಿ: ನೀಟ್, ನೆಟ್ ಅಕ್ರಮ; ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮುಖ್ಯಸ್ಥ ಸುಬೋಧ್ ಕುಮಾರ್ ವಜಾ
ಈಗಾಗಲೇ ನೀಟ್, ನೆಟ್ ಪ್ರಕರಣದ ಕುರಿತು ಸಿಬಿಐ ತನಿಖೆಗೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಗಿದೆ. ಈ ವೇಳೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ನೋಟಿಸ್ ಜಾರಿ ಮಾಡಲಾಗಿದೆ. ಹಾಗೇ, ಜುಲೈ 8ಕ್ಕೆ ವಿಚಾರಣೆ ಮುಂದೂಡಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:32 pm, Sat, 22 June 24