NEET-PG Counselling: ಜನವರಿ 12ರಿಂದ ನೀಟ್​-ಪಿಜಿ ಕೌನ್ಸಿಲಿಂಗ್​ ಪ್ರಾರಂಭ; ಆರೋಗ್ಯ ಸಚಿವರಿಂದ ಘೋಷಣೆ

| Updated By: Lakshmi Hegde

Updated on: Jan 09, 2022 | 2:47 PM

ನೀಟ್​ ಪಿಜಿ ಕೌನ್ಸಿಲಿಂಗ್​​ನಲ್ಲಿ ವಿಳಂಬವಾಗುತ್ತಿರುವುದನ್ನು ವಿರೋಧಿಸಿ ದೇಶಾದ್ಯಂತ ಹಲವು ರೆಸಿಡೆಂಟ್​ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಕೌನ್ಸಿಲಿಂಗ್​ ದಿನಾಂಕ ಪ್ರಕಟವಾಗಿದ್ದು ಅವರಿಗೆ  ಅನುಕೂಲವಾಗಲಿದೆ.

NEET-PG Counselling: ಜನವರಿ 12ರಿಂದ ನೀಟ್​-ಪಿಜಿ ಕೌನ್ಸಿಲಿಂಗ್​ ಪ್ರಾರಂಭ; ಆರೋಗ್ಯ ಸಚಿವರಿಂದ ಘೋಷಣೆ
ಸಾಂಕೇತಿಕ ಚಿತ್ರ
Follow us on

2021-2022 ನೇ ಶೈಕ್ಷಣಿಕ ವರ್ಷದ ನೀಟ್​-ಪಿಜಿ (NEET-PG) ಕೌನ್ಸಿಲಿಂಗ್​ ಜನವರಿ 12ರಿಂದ ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ತಿಳಿಸಿದ್ದಾರೆ. ನೀಟ್ ಸ್ನಾತಕೋತ್ತರ ಕೌನ್ಸಿಲಿಂಗ್ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​​ ವಿಚಾರಣೆ ನಡೆಸುತ್ತಿತ್ತು. ಶುಕ್ರವಾರ ತೀರ್ಪು ಹೊರಹಾಕಿದ್ದ ಸುಪ್ರೀಂಕೋರ್ಟ್​, ಸದ್ಯ ಇರುವಂತೆ ಆಲ್​ ಇಂಡಿಯಾ ಕೋಟಾ ಸೀಟ್​​ಗಳಲ್ಲಿ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಶೇ.27 ಮತ್ತು ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಗಳಿಗೆ (EWS) ಶೇ.10ರಂತೆ ಮೀಸಲಾತಿ ಇರಬೇಕು ಎಂದು ಹೇಳಿ, ನೀಟ್​ ಪಿಜಿ ಕೌನ್ಸಿಲಿಂಗ್​​ ಪ್ರಾರಂಭಕ್ಕೆ ಅನುವು ಮಾಡಿಕೊಟ್ಟಿತ್ತು. ಅದಾದ ಎರಡೇ ದಿನದಲ್ಲಿ ಆರೋಗ್ಯ ಸಚಿವರು ಟ್ವೀಟ್​ ಮಾಡಿ, ನೀಟ್​ ಪಿಜಿ ಕೌನ್ಸಿಲಿಂಗ್​​ ದಿನಾಂಕ ಘೋಷಣೆ ಮಾಡಿದ್ದಾರೆ. 

ನೀಟ್​ ಪಿಜಿ ಕೌನ್ಸಿಲಿಂಗ್​​ನಲ್ಲಿ ವಿಳಂಬವಾಗುತ್ತಿರುವುದನ್ನು ವಿರೋಧಿಸಿ ದೇಶಾದ್ಯಂತ ಹಲವು ರೆಸಿಡೆಂಟ್​ ವೈದ್ಯರು ಪ್ರತಿಭಟನೆ ನಡೆಸುದ್ದರು. ಇತ್ತೀಚೆಗಷ್ಟೇ ಆರೋಗ್ಯ ಇಲಾಖೆ ನೀಡಿದ ಭರವಸೆ ಮೇರೆಗೆ ಅವರು ಪ್ರತಿಭಟನೆ ಕೈಬಿಟ್ಟಿದ್ದರು.ಎಂಎ ಇದೀಗ ಕೌನ್ಸಿಲಿಂಗ್​ ದಿನಾಂಕ ಪ್ರಕಟವಾಗಿದ್ದು ಅವರಿಗೆ  ಅನುಕೂಲವಾಗಲಿದೆ. ಈ ಬಗ್ಗೆ ಇಂದು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಮನ್​ಸುಖ್ ಮಾಂಡವಿಯಾ, ಸುಪ್ರೀಂಕೋರ್ಟ್​ ಆದೇಶವನ್ನು ಗೌರವಿಸಲಾಗುತ್ತದೆ. ಜನವರಿ 12ರಿಂದ ಕೌನ್ಸಿಲಿಂಗ್ ನಡೆಸುವುದಾಗಿ ಆರೋಗ್ಯ ಸಚಿವಾಲಯ ರೆಸಿಡೆಂಟ್​ ವೈದ್ಯರಿಗೆ ಭರವಸೆ ನೀಡುತ್ತಿದೆ. ಈ ಮೂಲಕ ಕೊರೊನಾ ವಿರುದ್ಧ ಹೋರಾಟದಲ್ಲಿ ದೇಶಕ್ಕೆ ಇನ್ನಷ್ಟು ಶಕ್ತಿ ತುಂಬಲಾಗುವುದು ಎಂದು ತಿಳಿಸಿದ್ದಾರೆ. ಹಾಗೇ, ಕೌನ್ಸಿಲಿಂಗ್​​ ಎದುರಿಸಬೇಕಾದ  ಎಲ್ಲ ಅಭ್ಯರ್ಥಿಗಳಿಗೆ ಶುಭಾಶಯ ಎಂದೂ ಹೇಳಿದ್ದಾರೆ.

ಕೌನ್ಸಿಲಿಂಗ್​ಗೆ ಬೇಕಾಗುವ ದಾಖಲೆಗಳೇನು?
ಪ್ರಸಕ್ತ ವರ್ಷ ನೀಟ್​ ಪಿಜಿ ಕೌನ್ಸಿಲಿಂಗ್, ಆನ್​ಲೈನ್ ವಿಧಾನದಲ್ಲಿ​ ನಾಲ್ಕು ಸುತ್ತುಗಳಲ್ಲಿ ನಡೆಯಲಿದೆ ಎಂದು ಈ ಹಿಂದೆಯೇ ವೈದ್ಯಕೀಯ ಕೌನ್ಸಿಲಿಂಗ್​ ಸಮಿತಿ (MCC) ಘೋಷಣೆ ಮಾಡಿದೆ.  ಇನ್ನು ನೀಟ್​ ಕೌನ್ಸಿಲಿಂಗ್​ಗೆ ಹಾಜರಾಗುವ ಅಭ್ಯರ್ಥಿಗಳಿಗೆ ಈ ಕೆಳಗಿನ ದಾಖಲೆಗಳು ಕಡ್ಡಾಯವಾಗಿ ಬೇಕಾಗುತ್ತದೆ.
1) 2021 ನೀಟ್​ ಪರೀಕ್ಷೆಯ ಪ್ರವೇಶ ಪತ್ರ 2)2021ನೇ ನೀಟ್ ಪರೀಕ್ಷೆಯ ಫಲಿತಾಂಶ ಪಟ್ಟಿ, ಯಾವುದೇ ರ್ಯಾಂಕ್​ ಬಂದಿದ್ದರೆ ಅದರ ಕಾರ್ಡ್​ 3)10ನೇ ತರಗತಿ ಪಾಸ್​ ಆಗಿರುವ ಪ್ರಮಾಣ ಪತ್ರ 4)12ನೇ ತರಗತಿ ಉತ್ತೀರ್ಣವಾಗಿರುವ ಸರ್ಟಿಫಿಕೇಟ್​ 5)ಸರ್ಕಾರ ಮಾನ್ಯ ಮಾಡಿರುವ ಐಡಿ ಕಾರ್ಡ್​ 6)ಪಾಸ್​ಪೋರ್ಟ್​ ಸೈಝ್​ ಫೋಟೋ 7)ಎಂಬಿಬಿಎಸ್​, ಬಿಡಿಎಸ್​ ಅಂಕಪಟ್ಟಿ 8)ಜಾತಿ ಪ್ರಮಾಣ ಪತ್ರ 9)ಇಂಟರ್ನ್​ಶಿಪ್​ ಲೆಟರ್​ 10)ಎಂಸಿಐನಿಂದ ನೀಡಲಾದ ನೋಂದಣಿ ಸರ್ಟಿಫಿಕೇಟ್​.

ಇದನ್ನೂ ಓದಿ: ನೀಟ್​ ಪಿಜಿ ಮತ್ತು ಯುಜಿ ಕೌನ್ಸೆಲಿಂಗ್ ಅಧಿಸೂಚನೆಗೆ ಅನುಗುಣವಾಗಿ ನಡೆಯಲಿದೆ: ಸುಪ್ರೀಂಕೋರ್ಟ್

 ಇಬ್ಬರು ವಿಕೆಟ್ ಕೀಪರ್​ಗೆ ಗಾಯ: ಬದಲಿ ಆಟಗಾರನಾಗಿ ಕಣಕ್ಕಿಳಿದು ದಾಖಲೆ ಬರೆದ ಯುವ ಆಟಗಾರ

Published On - 2:22 pm, Sun, 9 January 22