AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ, ಅಸ್ಸಾಂ ಬೆನ್ನಲ್ಲೇ ಪಶ್ಚಿಮ ಬಂಗಾಳದಿಂದಲೂ ನೀಟ್ ಪ್ರತಿಭಟನಾಕಾರರಿಗೆ ಅಭಯ: ಪ್ರಕರಣ ಹಿಂಪಡೆಯಲು ನಿರ್ಧಾರ, ಕ್ರಿಮಿನಲ್‌ಗಳಿಗೆ ಇಲ್ಲ ವಿನಾಯಿತಿ

ಬಿಹಾರ ಮತ್ತು ಅಸ್ಸಾಂ ನಂತರ ಪಶ್ಚಿಮ ಬಂಗಾಳವೂ ನೀಟ್-ಯುಜಿ ಪರೀಕ್ಷಾ ಅಕ್ರಮ ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಿದೆ. ಸಾಮಾನ್ಯ ವಿದ್ಯಾರ್ಥಿಗಳಿಗೆ ಮಾತ್ರ ಈ ರಕ್ಷಣೆ ಅನ್ವಯವಾಗಲಿದ್ದು, ಅಪರಾಧ ಹಿನ್ನೆಲೆಯುಳ್ಳವರಿಗೆ ವಿನಾಯಿತಿ ಇಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನಗಳಂತೆ ಈ ಕ್ರಮ ಕೈಗೊಳ್ಳಲಾಗಿದೆ. ದೇಶಾದ್ಯಂತ ನಡೆದ ಪ್ರತಿಭಟನೆಗಳ ಅಂತ್ಯದ ನಂತರ ಸರ್ಕಾರದೊಂದಿಗೆ ನಡೆದ ಸಂಧಾನದ ಫಲಿತಾಂಶ ಇದಾಗಿದೆ.

ಬಿಹಾರ, ಅಸ್ಸಾಂ ಬೆನ್ನಲ್ಲೇ ಪಶ್ಚಿಮ ಬಂಗಾಳದಿಂದಲೂ ನೀಟ್ ಪ್ರತಿಭಟನಾಕಾರರಿಗೆ ಅಭಯ: ಪ್ರಕರಣ ಹಿಂಪಡೆಯಲು ನಿರ್ಧಾರ, ಕ್ರಿಮಿನಲ್‌ಗಳಿಗೆ ಇಲ್ಲ ವಿನಾಯಿತಿ
ನೀಟ್
ನಯನಾ ರಾಜೀವ್
|

Updated on: Jul 29, 2026 | 8:23 AM

Share

ಕೋಲ್ಕತ್ತಾ, ಜುಲೈ 29: ಬಿಹಾರ ಮತ್ತು ಅಸ್ಸಾಂ ರಾಜ್ಯಗಳ ಹಾದಿಯನ್ನೇ ಅನುಸರಿಸಿರುವ ಪಶ್ಚಿಮ ಬಂಗಾಳ ಸರ್ಕಾರವು, ನೀಟ್-ಯುಜಿ(NEET-UG) ಪರೀಕ್ಷಾ ಅಕ್ರಮ ಖಂಡಿಸಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಠಿಣ ಅಥವಾ ಬಲವಂತದ ಕಾನೂನು ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದು ಮಂಗಳವಾರ ಅಧಿಕೃತವಾಗಿ ಘೋಷಿಸಿದೆ. ಆದಾಗ್ಯೂ, ಈ ಸಡಿಲಿಕೆ ಮತ್ತು ರಕ್ಷಣೆಯು ಕೇವಲ ಸಾಮಾನ್ಯ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸಲಿದ್ದು, ಅಪರಾಧ ಹಿನ್ನೆಲೆ ಹೊಂದಿರುವ ವ್ಯಕ್ತಿಗಳಿಗೆ ಯಾವುದೇ ವಿನಾಯಿತಿ ನೀಡಲಾಗುವುದಿಲ್ಲ ಎಂದು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಸ್ಪಷ್ಟಪಡಿಸಿದೆ.

ಜುಲೈ 28 ರಂದು ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು ಪಶ್ಚಿಮ ಬಂಗಾಳದ ಗೃಹ ಇಲಾಖೆಯು ಈ ಆದೇಶ ಹೊರಡಿಸಿದೆ. ಜುಲೈ 26 ರ ಸಂಜೆ 6 ಗಂಟೆಯವರೆಗೆ ದಾಖಲಾದ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಾಮಾನ್ಯ ವಿದ್ಯಾರ್ಥಿಗಳ ಮೇಲೆ ಯಾವುದೇ ದಂಡನಾತ್ಮಕ ಕ್ರಮ ಜರುಗಿಸುವುದಿಲ್ಲ ಎಂದು ತಿಳಿಸಲಾಗಿದೆ. ನೀಟ್ ಅಕ್ರಮ ವಿರೋಧಿ ಪ್ರತಿಭಟನೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ದೂರು ದಾಖಲಿಸಿಕೊಂಡು ಈವರೆಗೆ 16 ಮಂದಿಯನ್ನು ಬಂಧಿಸಿದ್ದರು.

ಜುಲೈ 25 ರಂದು ನಡೆದ ‘ಬಿಹಾರ ಬಂದ್’ ವೇಳೆ ಬಂಧಿತರಾಗಿದ್ದ694 ಮಂದಿಯ ಪೈಕಿ 339 ಅಪ್ರಾಪ್ತ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಲಾಗಿದೆ. ಉಳಿದವರ ಮೇಲಿದ್ದ ಪ್ರಕರಣಗಳನ್ನು ಹಿಂಪಡೆಯುವುದಾಗಿ ಬಿಹಾರ ಗೃಹ ಇಲಾಖೆ ಸೋಮವಾರ ಪ್ರಕಟಿಸಿದೆ. ಅಸ್ಸಾಂನಲ್ಲಿ ಪ್ರತಿಭಟನೆಗೆ ಸಂಬಂಧಿಸಿದಂತೆ 5 ಪ್ರಕರಣಗಳು ದಾಖಲಾಗಿದ್ದು, 13 ಜನರನ್ನು ಬಂಧಿಸಲಾಗಿತ್ತು. ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಅಸ್ಸಾಂ ಸರ್ಕಾರವೂ ಎಲ್ಲ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ.

ಮತ್ತಷ್ಟು ಓದಿ: ನಿಟ್ಟುಸಿರು ಬಿಟ್ಟ ನೀಟ್ ಪ್ರತಿಭಟನಾಕಾರರು: ಬಿಹಾರದ ಬೆನ್ನಲ್ಲೇ ಪ್ರಕರಣ ಹಿಂಪಡೆಯಲು ಅಸ್ಸಾಂ ಸರ್ಕಾರ ನಿರ್ಧಾರ

ಪ್ರತಿಭಟನೆಗಳ ಅಂತ್ಯ ಹಾಗೂ ಸರ್ಕಾರದ ಒಪ್ಪಂದ: ದೇಶಾದ್ಯಂತ 36 ದಿನಗಳ ಕಾಲ ನಡೆದ ಭಾರಿ ವಿದ್ಯಾರ್ಥಿ ಆಂದೋಲನ ಹಾಗೂ ಜುಲೈ 25 ರಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗಿತ್ತು.

ಸೋನಮ್ ವಾಂಗ್ಚುಕ್ ಹಾಗೂ ಸಿಜೆಪಿ ಮಧ್ಯಸ್ಥಿಕೆ: ಕಾಕ್ರೋಚ್ ಜನತಾ ಪಕ್ಷ (CJP) ಹಾಗೂ ಖ್ಯಾತ ಸಮಾಜ ಸುಧಾರಕ ಸೋನಮ್ ವಾಂಗ್ಚುಕ್ ಅವರ ಜೊತೆ ಕೇಂದ್ರ ಸರ್ಕಾರ ನಡೆಸಿದ ಸಂಧಾನದ ವೇಳೆ, ಪ್ರತಿಭಟನಾಕಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಹಾಗೂ ಪರೀಕ್ಷಾ ಮಾಫಿಯಾ ವಿರುದ್ಧ ಕಠಿಣ ಕಾನೂನು ತರಲು ಸರ್ಕಾರ ಒಪ್ಪಿಕೊಂಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ