AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೀಗ ಆರಂಭ, ಇನ್ನೂ ಬಹಳ ದೂರ ಸಾಗಬೇಕಿದೆ, ಪ್ರತಿಭಟನೆ ಕೊನೆಗೊಂಡ ನಂತರ ಅಭಿಜೀತ್ ದೀಪ್ಕೆ ವೀಡಿಯೊ ಸಂದೇಶ

ನೀಟ್ ಪತ್ರಿಕೆ ಸೋರಿಕೆ ವಿರೋಧಿಸಿ 37 ದಿನಗಳ ಸುದೀರ್ಘ ಪ್ರತಿಭಟನೆ ಮುಕ್ತಾಯಗೊಂಡಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಾಗೂ ಸರ್ಕಾರದ ಭರವಸೆಗಳ ನಂತರ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದೆ. CJP ಯುವ ನಾಯಕ ಅಭಿಜೀತ್ ದೀಪ್ಕೆ, 'ಇದು ಕೇವಲ ಆರಂಭವಷ್ಟೇ, ಇನ್ನೂ ಬಹಳ ದೂರ ಸಾಗಬೇಕಿದೆ' ಎಂದು ಬೆಂಬಲಿಗರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಕೇವಲ 70 ದಿನಗಳಲ್ಲಿ CJP ಸಾವಿರಾರು ಯುವಕರನ್ನು ಒಗ್ಗೂಡಿಸಿತು.

ಇದೀಗ ಆರಂಭ, ಇನ್ನೂ ಬಹಳ ದೂರ ಸಾಗಬೇಕಿದೆ, ಪ್ರತಿಭಟನೆ ಕೊನೆಗೊಂಡ ನಂತರ ಅಭಿಜೀತ್ ದೀಪ್ಕೆ ವೀಡಿಯೊ ಸಂದೇಶ
ಅಭಿಜಿತ್
ನಯನಾ ರಾಜೀವ್
|

Updated on:Jul 26, 2026 | 9:56 AM

Share

ನವದೆಹಲಿ, ಜುಲೈ 26: ನೀಟ್ (NEET) ಪತ್ರಿಕೆ ಸೋರಿಕೆ ಖಂಡಿಸಿ ನಡೆದ 37 ದಿನಗಳ ಸುದೀರ್ಘ ಪ್ರತಿಭಟನೆ ಯಶಸ್ವಿಯಾದ ಬೆನ್ನಲ್ಲೇ, ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಯುವ ನಾಯಕ ಅಭಿಜೀತ್ ದೀಪ್ಕೆ ತಮ್ಮ ಬೆಂಬಲಿಗರಿಗೆ ಧನ್ಯವಾದ ಅರ್ಪಿಸಿ ವೀಡಿಯೊ ಸಂದೇಶ ಹಂಚಿಕೊಂಡಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹಾಗೂ ಸರ್ಕಾರದ ಸಕಾರಾತ್ಮಕ ಭರವಸೆಗಳ ನಂತರ ಸಿಜೆಪಿ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದು, 30 ವರ್ಷದ ದೀಪ್ಕೆ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ನಿರಾಳತೆಯ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

37 ದಿನಗಳ ಹೋರಾಟ ಅತ್ಯಂತ ಕಠಿಣವಾಗಿತ್ತು ಎಂದು ಸ್ಮರಿಸಿದ ದೀಪ್ಕೆ, ಇದು ಕೇವಲ ಆರಂಭವಷ್ಟೇ, ಕಾಕ್ರೋಚ್ ಜನತಾ ಪಾರ್ಟಿ ಇನ್ನೂ ಬಹಳ ದೂರ ಸಾಗಬೇಕಿದೆ ಎಂದು ತಮ್ಮ ಅನುಯಾಯಿಗಳಿಗೆ ತಿಳಿಸಿದ್ದಾರೆ.

ಟೈಫಾಯ್ಡ್ ಮತ್ತು ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ನಿನ್ನೆ ಜಂತರ್ ಮಂತರ್‌ನಲ್ಲಿ ಎಲ್ಲರನ್ನೂ ವೈಯಕ್ತಿಕವಾಗಿ ಭೇಟಿಯಾಗಲು ಸಾಧ್ಯವಾಗಲಿಲ್ಲವೆಂದು ಕ್ಷಮೆ ಕೋರಿದ ಅವರು, ಬೆಂಬಲಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು. “ನಮ್ಮನ್ನು ಟೀಕಿಸಿದವರಿಗೂ ಧನ್ಯವಾದಗಳು. ಅವರ ಪ್ರಶ್ನೆಗಳು ಮತ್ತು ಟೀಕೆಗಳು ನಾವು ತಪ್ಪುಗಳನ್ನು ತಿದ್ದಿಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸಲು ನೆರವಾದವು” ಎಂದು ಹೇಳಿದರು.

ಮತ್ತಷ್ಟು ಓದಿ: ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಫಸ್ಟ್​​ ರಿಯಾಕ್ಷನ್​​

ಮೇ ತಿಂಗಳಲ್ಲಿ ವಿಡಂಬನಾತ್ಮಕವಾಗಿ ಆರಂಭವಾದ ಕಾಕ್ರೋಚ್ ಜನತಾ ಪಾರ್ಟಿ, ಕೇವಲ 70 ದಿನಗಳಲ್ಲಿ ದೇಶದ ಸಾವಿರಾರು ಜೆನ್​ ಜಿ ಯುವಕರನ್ನು ಒಗ್ಗೂಡಿಸುವ ಬೃಹತ್ ಚಳವಳಿಯಾಗಿ ಬೆಳೆಯಿತು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಭ್ಯರ್ಥಿಗಳ ಆತ್ಮಹತ್ಯೆಗೆ ಜವಾಬ್ದಾರಿ ಹೊರಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಯುವಕರು ನವದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ನಡೆಸಿದ್ದರು.

ವಿಡಿಯೋ

ನಿನ್ನೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:55 am, Sun, 26 July 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ
ಶಿವಲಿಂಗವನ್ನು ನೇರವಾಗಿ ಸ್ಪರ್ಶಿಸಿದ ಸೂರ್ಯ ರಶ್ಮಿ!
ಶಿವಲಿಂಗವನ್ನು ನೇರವಾಗಿ ಸ್ಪರ್ಶಿಸಿದ ಸೂರ್ಯ ರಶ್ಮಿ!
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹರತಾಳು ಹಾಲಪ್ಪ ಭರ್ಜರಿ ಡ್ಯಾನ್ಸ್
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹರತಾಳು ಹಾಲಪ್ಪ ಭರ್ಜರಿ ಡ್ಯಾನ್ಸ್
ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ
ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್​ಲಾಲ್
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್​ಲಾಲ್
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ
ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ
ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ
ಇಂದಿನಿಂದ ಪಿತೃಪಕ್ಷ ಪ್ರಾರಂಭ
ಇಂದಿನಿಂದ ಪಿತೃಪಕ್ಷ ಪ್ರಾರಂಭ
ಮೈಸೂರಿನಲ್ಲಿ ಕೇವಲ 8 ತಿಂಗಳಲ್ಲಿ 36 ಕೋಟಿ ರೂ. ಲೂಟಿ
ಮೈಸೂರಿನಲ್ಲಿ ಕೇವಲ 8 ತಿಂಗಳಲ್ಲಿ 36 ಕೋಟಿ ರೂ. ಲೂಟಿ