ನೀಟ್ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಡಿಯೋ ನಕಲಿ, ವದಂತಿಗಳಿಗೆ ಕಿವಿಗೊಡಬೇಡಿ ಎಂದ ಎನ್​ಟಿಎ

NEET-UG Re-exam 2026: ನೀಟ್ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವದಂತಿಗಳು ಸುಳ್ಳು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳು ನಕಲಿ ಎಂದು NTA ಸ್ಪಷ್ಟಪಡಿಸಿದೆ. ವಿದ್ಯಾರ್ಥಿಗಳು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ, ತಮ್ಮ ಪರೀಕ್ಷೆಯತ್ತ ಗಮನ ಹರಿಸಬೇಕು ಎಂದು ಸೂಚಿಸಿದೆ. ಅಧಿಕೃತ ಮಾಹಿತಿಗಾಗಿ NTA ವೆಬ್‌ಸೈಟ್ ಮಾತ್ರ ಪರಿಶೀಲಿಸಿ, ಅನಗತ್ಯ ಆತಂಕದಿಂದ ದೂರವಿರಿ.

ನೀಟ್ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಡಿಯೋ ನಕಲಿ, ವದಂತಿಗಳಿಗೆ ಕಿವಿಗೊಡಬೇಡಿ ಎಂದ ಎನ್​ಟಿಎ
ನೀಟ್ -ಭದ್ರತೆ
Image Credit source: PTI

Updated on: Jun 21, 2026 | 10:14 AM

ನವದೆಹಲಿ, ಜೂನ್ 21: ನೀಟ್-ಯುಜಿ (NEET-UG)2026 ಮರು ಪರೀಕ್ಷೆಯ ನಡುವೆಯೇ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳ ದಾರಿ ತಪ್ಪಿಸುವ ದೊಡ್ಡ ಜಾಲವೊಂದು ಸಕ್ರಿಯವಾಗಿದೆ. ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸೋಶಿಯಲ್ ಮೀಡಿಯಾಗಳಲ್ಲಿ ನೀಟ್ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ನಕಲಿ ವಿಡಿಯೋ ಹಾಗೂ ಫೋಟೋಗಳನ್ನು ಹಾಕಿ ಕಿಡಿಗೇಡಿಗಳು ವೈರಲ್ ಮಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಹತ್ವದ ಎಚ್ಚರಿಕೆಯನ್ನು ನೀಡಿದ್ದು, ಇಂತಹ ಯಾವುದೇ ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪರೀಕ್ಷೆಯ ಒತ್ತಡದಲ್ಲಿರುವ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು, ಕಿಡಿಗೇಡಿಗಳು ಎಡಿಟ್ ಮಾಡಿದ ನಕಲಿ ಪ್ರಶ್ನೆ ಪತ್ರಿಕೆಯ ಫೋಟೋ ಹಾಗೂ ವಿಡಿಯೋಗಳನ್ನು ಇಂಟರ್ನೆಟ್‌ನಲ್ಲಿ ಹರಿಬಿಡುತ್ತಿದ್ದಾರೆ.

ಲಕ್ಷಾಂತರ ವಿದ್ಯಾರ್ಥಿಗಳ ಗಮನವನ್ನು ಬೇರೆಡೆ ಸೆಳೆದು, ಅವರಲ್ಲಿ ಆತಂಕ ಮೂಡಿಸುವ ಸಲುವಾಗಿ ಇಂತಹ ಸುಳ್ಳು ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡಲಾಗುತ್ತಿದೆ. ಇಂಟರ್ನೆಟ್‌ನಲ್ಲಿ ಸಿಗುವ ಇಂತಹ ಹರಿದಾಡುವ ಅನಾಮಧೇಯ ಪೋಸ್ಟ್‌ಗಳನ್ನು ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ನಂಬಬಾರದು. ಪರೀಕ್ಷೆಗೆ ಸಂಬಂಧಿಸಿದ ಅಧಿಕೃತ ಮತ್ತು ನಿಖರ ಮಾಹಿತಿಗಾಗಿ ಕೇವಲ ಎನ್‌ಟಿಎ (NTA) ಅಧಿಕೃತ ವೆಬ್‌ಸೈಟ್ ಅನ್ನು ಮಾತ್ರ ಪರಿಶೀಲಿಸಬೇಕು.

ಮತ್ತಷ್ಟು ಓದಿ: ದೇಶಾದ್ಯಂತ ನೀಟ್-ಯುಜಿ ಮರು ಪರೀಕ್ಷೆ, ಎಲ್ಲೆಲ್ಲೂ ಭದ್ರತೆ, ಸಕಲ ಸಿದ್ಧತೆ

ನೀಟ್ ಪರೀಕ್ಷೆಯ ಪಾರದರ್ಶಕತೆಗಾಗಿ ಈಗಾಗಲೇ ಸರ್ಕಾರ ಟೆಲಿಗ್ರಾಮ್‌ನಂತಹ ಆ್ಯಪ್‌ಗಳ ಮೇಲೆ ತಾತ್ಕಾಲಿಕ ನಿರ್ಬಂಧ ಹೇರಿ ಕಠಿಣ ಕ್ರಮ ಕೈಗೊಂಡಿದೆ. ಹೀಗಾಗಿ ವಿದ್ಯಾರ್ಥಿಗಳು ಇಂತಹ ವದಂತಿಗಳಿಗೆ ತಲೆಕೆಡಿಸಿಕೊಳ್ಳದೆ, ಧೃತಿಗೆಡದೆ ತಮ್ಮ ಪರೀಕ್ಷೆಯ ಕಡೆಗೆ ಮಾತ್ರ ಗಮನ ಹರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:11 am, Sun, 21 June 26

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us