ಪ್ರತಿಯೊಂದು ಚರ್ಚೆಗೂ ಸರ್ಕಾರ ಸಿದ್ಧ: ನೀಟ್ ವಿವಾದ ಬಗ್ಗೆ ಧರ್ಮೇಂದ್ರ ಪ್ರಧಾನ್ ಪ್ರತಿಕ್ರಿಯೆ

ಎಎನ್ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಸರ್ಕಾರವು ಎಲ್ಲಾ ರೀತಿಯ ಚರ್ಚೆಗೆ ಸಿದ್ಧವಾಗಿದೆ, ಆದರೆ ಎಲ್ಲವೂ ಸಂಪ್ರದಾಯ ಮತ್ತು ಸೌಭ್ಯತೆಯಲ್ಲಿ ನಡೆಯಬೇಕು. ನಿನ್ನೆ ತಮ್ಮ ಭಾಷಣದಲ್ಲಿ ಸ್ವತಃ ರಾಷ್ಟ್ರಪತಿಗಳು ಪರೀಕ್ಷೆಯ ಬಗ್ಗೆ ಮಾತನಾಡುವಾಗ, ಯಾವುದೇ ಸಮಸ್ಯೆಯನ್ನು ಎದುರಿಸಲು ನಾವು ಸಿದ್ಧರಿದ್ದೇವೆ ಎಂಬ ಸರ್ಕಾರದ ಉದ್ದೇಶವನ್ನು ತೋರಿಸಿದೆ ಎಂದಿದ್ದಾರೆ.

ಪ್ರತಿಯೊಂದು ಚರ್ಚೆಗೂ ಸರ್ಕಾರ ಸಿದ್ಧ: ನೀಟ್ ವಿವಾದ ಬಗ್ಗೆ ಧರ್ಮೇಂದ್ರ ಪ್ರಧಾನ್ ಪ್ರತಿಕ್ರಿಯೆ
ಧರ್ಮೇಂದ್ರ ಪ್ರಧಾನ್
Follow us
|

Updated on: Jun 28, 2024 | 5:10 PM

ದೆಹಲಿ ಜೂನ್ 28: ವೈದ್ಯಕೀಯ ಪದವಿಪೂರ್ವ ವಿದ್ಯಾರ್ಥಿಗಳ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಮತ್ತು ಯುಜಿಸಿ-ನೆಟ್ ಪರೀಕ್ಷೆ (UGC-NET) ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ (Paper leak) ರದ್ದುಗೊಳಿಸಲಾಗಿತ್ತು. ಆ ಬಗ್ಗೆ ಚರ್ಚೆ ನಡೆಸಬೇಕು ಎಂದು ವಿಪಕ್ಷಗಳು ಸಂಸತ್​​ನಲ್ಲಿ ಒತ್ತಾಯಿಸಿವೆ. ಶುಕ್ರವಾರ ಲೋಕಸಭೆಯಲ್ಲಿ ನೀಟ್ ಬಗ್ಗೆ ಚರ್ಚೆ ನಡೆಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದು ಅದಕ್ಕೆ ಸ್ಪೀಕರ್ ಅವಕಾಶ ನೀಡಲಿಲ್ಲ. ಸದನದಲ್ಲಿ ಗದ್ದಲವುಂಟಾಗಿ ಸ್ಪೀಕರ್ ಸೋಮವಾರದವರೆಗೆ ಕಲಾಪವನ್ನು ಮುಂದೂಡಿದ್ದಾರೆ.

ಏತನ್ಮಧ್ಯೆ ನೀಟ್ ಕುರಿತಾದ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಶಿಕ್ಷಣ ಸಚಿವ “ಸರ್ಕಾರವು ಎಲ್ಲಾ ರೀತಿಯ ಚರ್ಚೆಗೆ ಸಿದ್ಧವಾಗಿದೆ, ಆದರೆ ಎಲ್ಲವೂ ಸಂಪ್ರದಾಯ ಮತ್ತು ಸೌಭ್ಯತೆಯಲ್ಲಿ ನಡೆಯಬೇಕು. ನಿನ್ನೆ ತಮ್ಮ ಭಾಷಣದಲ್ಲಿ ಸ್ವತಃ ರಾಷ್ಟ್ರಪತಿಗಳು ಪರೀಕ್ಷೆಯ ಬಗ್ಗೆ ಮಾತನಾಡುವಾಗ, ಯಾವುದೇ ಸಮಸ್ಯೆಯನ್ನು ಎದುರಿಸಲು ನಾವು ಸಿದ್ಧರಿದ್ದೇವೆ ಎಂಬ ಸರ್ಕಾರದ ಉದ್ದೇಶವನ್ನು ತೋರಿಸಿದೆ. ಸರ್ಕಾರದ ಜವಾಬ್ದಾರಿ ದೇಶದ ಯುವಕರ ಕಡೆಗಿದೆ, ದೇಶದ ವಿದ್ಯಾರ್ಥಿಗಳ ಕಡೆಗಿದೆ ಸರ್ಕಾರ ತನ್ನ ಪರವಾಗಿ ನಿಲ್ಲಲು ಸಿದ್ಧವಾಗಿದೆ, ಹಾಗಾದರೆ ಗೊಂದಲವೇನು? ನಾವು ಕಠಿಣ ಕ್ರಮ ಕೈಗೊಳ್ಳಲಿದ್ದೇವೆ. ಸಿಬಿಐ ತಪ್ಪಿತಸ್ಥರನ್ನು ಪತ್ತೆ ಹಚ್ಚುತ್ತದೆ., ನಾವು ಯಾರನ್ನೂ ಬಿಡುವುದಿಲ್ಲ, ಸುಧಾರಣೆಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆ ಎಲ್ಲಾ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲಾಗುವುದು. ರಾಜಕೀಯದಿಂದ ಹೊರಬಂದು ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ನಾನು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ಧರ್ಮೇಂದ್ರ ಪ್ರಧಾನ್ ಮಾತು

“ನಾವು ಯಾರನ್ನೂ ಬಿಡುವುದಿಲ್ಲ, ಎನ್‌ಟಿಎ ಉಸ್ತುವಾರಿ ವಹಿಸಿದ್ದವರನ್ನು ತೆಗೆದುಹಾಕಲಾಗಿದೆ ಮತ್ತು ಹಿರಿಯ ಅಧಿಕಾರಿಗಳಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ಇದೆಲ್ಲವೂ ಸರ್ಕಾರದ ಬದ್ಧತೆಗೆ ಸಾಕ್ಷಿಯಾಗಿದೆ.. ವಿದ್ಯಾರ್ಥಿಗಳನ್ನು ಗೊಂದಲಕ್ಕೀಡು ಮಾಡಬೇಡಿ ಎಂದು ನಾನು ಪ್ರತಿಪಕ್ಷಗಳಿಗೆ ಮನವಿ ಮಾಡಲು ಬಯಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.

ಆದಾಗ್ಯೂ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ಚರ್ಚೆ ಮಾಡಬೇಕು ಎಂದು ವಿಪಕ್ಷ ಪಟ್ಟು ಹಿಡಿದಿದೆ.

ನಿಯಮ 267ರ ಅಡಿಯಲ್ಲಿ ಸದನದಲ್ಲಿ ವಿಶೇಷ ಚರ್ಚೆಗೆ ಒತ್ತಾಯಿಸುತ್ತಿದ್ದು, ಆ ಬಳಿಕ ನಮ್ಮ ಬೇಡಿಕೆಗಳನ್ನು ತಿಳಿಸುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮಾತನಾಡಿ, ‘ದೇಶದಲ್ಲಿ ನಿರಂತರ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಯುವಕರ ಭವಿಷ್ಯ ಹಾಳಾಗಿದೆ. ಹರಿಯಾಣದಲ್ಲಿ ಗರಿಷ್ಠ ಪೇಪರ್ ಸೋರಿಕೆ ಪ್ರಕರಣಗಳು ಕಂಡುಬಂದಿವೆ. ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಜವಾಬ್ದಾರಿಯಿಂದ ಓಡಿಹೋಗುತ್ತಿದ್ದಾರೆ. ನಾವು ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲು ಮುಂದಾದಾಗ ಮೈಕ್ ಆಫ್ ಮಾಡಿದ್ದಾರೆ. ವಿರೋಧಪಕ್ಷದ ನಾಯಕನ ಮೈಕ್ ಆಫ್ ಮಾಡಿದರೆ ಪ್ರತಿಪಕ್ಷಗಳ ಸಂಸದರಿಗೆ ಕೋಪ ಬರದೇ ಇರುತ್ತದೆಯೇ? ಸದನದಲ್ಲಿ ಸಂಭವಿಸಿದ್ದೂ ಅದೇ. ಈ ವಿಷಯವನ್ನು ಚರ್ಚಿಸಬೇಕು ಎಂದು ನಾವು ಬಯಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ NEET ಚರ್ಚೆಗೆ ಒತ್ತಾಯ; ರಾಹುಲ್ ಗಾಂಧಿಯ ಮೈಕ್ ಆಫ್ ಮಾಡಲಾಗಿದೆ: ಕಾಂಗ್ರೆಸ್ ಆರೋಪ

NEET-UG ಮತ್ತು UGC-NET ಪರೀಕ್ಷೆಗಳಿಗೆ, ಕೇಂದ್ರೀಯ ತನಿಖಾ ದಳ (ಸಿಬಿಐ) ಜೂನ್ 23 ರಂದು ಎನ್‌ಟಿಎ ಪರೀಕ್ಷೆಯ ನಡವಳಿಕೆಯಲ್ಲಿನ ಅಕ್ರಮಗಳ ಬಗ್ಗೆ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿದೆ ಮತ್ತು ಈ ವಿಷಯದ ತನಿಖೆಗಾಗಿ ವಿಶೇಷ ತಂಡಗಳನ್ನು ರಚಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು