ನೀಟ್ ಹಗರಣಕ್ಕೆ ಬಿಗ್ ಟ್ವಿಸ್ಟ್: ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಎನ್‌ಟಿಎ ತಜ್ಞೆ ಮನೀಷಾ ಮಂಢಾರೆ ಸಿಬಿಐ ಬಲೆಗೆ!

NEET-UG 2026 ಜೀವಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪುಣೆಯ ಹಿರಿಯ ಶಿಕ್ಷಕಿ ಮನೀಷಾ ಮಂಢಾರೆ ಅವರನ್ನು ಸಿಬಿಐ ಬಂಧಿಸಿದೆ. NTA ತಜ್ಞೆಯಾಗಿದ್ದ ಮನೀಷಾ, ತನ್ನ ಸ್ಥಾನವನ್ನು ದುರುಪಯೋಗಪಡಿಸಿಕೊಂಡು, ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಮೊದಲೇ ಬಹಿರಂಗಪಡಿಸಿದ್ದರು. ಸಿಬಿಐ ತನಿಖೆಯಲ್ಲಿ ಇದು ದೃಢಪಟ್ಟಿದ್ದು, ದೇಶದಾದ್ಯಂತ 6 ಸ್ಥಳಗಳಲ್ಲಿ ದಾಳಿ ನಡೆಸಿ, ಇದುವರೆಗೆ 9 ಆರೋಪಿಗಳನ್ನು ಬಂಧಿಸಲಾಗಿದೆ.

ನೀಟ್ ಹಗರಣಕ್ಕೆ ಬಿಗ್ ಟ್ವಿಸ್ಟ್: ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಎನ್‌ಟಿಎ ತಜ್ಞೆ ಮನೀಷಾ ಮಂಢಾರೆ ಸಿಬಿಐ ಬಲೆಗೆ!
ಸಾಂದರ್ಭಿಕ ಚಿತ್ರ

Updated on: May 16, 2026 | 3:54 PM

ಪುಣೆ, ಮೇ.16: ದೇಶದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ 2026’ (NEET-UG) ಬಯಾಲಜಿ (ಜೀವಶಾಸ್ತ್ರ) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮತ್ತೊಬ್ಬ ಪ್ರಮುಖ ಸೂತ್ರಧಾರಿಯನ್ನು ಬಂಧಿಸಿದೆ. ಮಹಾರಾಷ್ಟ್ರದ ಪುಣೆಯ ಹಿರಿಯ ಸಸ್ಯಶಾಸ್ತ್ರ (Botany) ಶಿಕ್ಷಕಿ ಮನೀಷಾ ಗುರುನಾಥ್ ಮಂಢಾರೆ ಎಂಬುವವರನ್ನು ದೆಹಲಿಯಲ್ಲಿ ತೀವ್ರ ವಿಚಾರಣೆಯ ನಂತರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಮನೀಷಾ ಮಂಢಾರೆ ಅವರನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ನೀಟ್ ಪರೀಕ್ಷಾ ಪ್ರಕ್ರಿಯೆಯ ತಜ್ಞರನ್ನಾಗಿ (Expert) ನೇಮಿಸಿತ್ತು. ಈ ಕಾರಣದಿಂದಾಗಿ ಅವರನ್ನು ಸಸ್ಯಶಾಸ್ತ್ರ (Botany) ಮತ್ತು ಪ್ರಾಣಿಶಾಸ್ತ್ರ (Zoology) ಪ್ರಶ್ನೆ ಪತ್ರಿಕೆಗಳನ್ನು ನೋಡಿಕೊಳ್ಳುವ ಅಧಿಕಾರವನ್ನು ನೀಡಲಾಗಿತ್ತು. ಆದರೆ ಇದೀಗ ಈ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡ ಅವರು, ಈ ಹಿಂದೆ (ಮೇ 14) ಬಂಧಿತರಾಗಿದ್ದ ಮನೀಷಾ ವಾಗ್ಮಾರೆ ಮೂಲಕ ನೀಟ್ ಅಭ್ಯರ್ಥಿಗಳನ್ನು ಸಂಪರ್ಕಿಸಿದ್ದಾರೆ

ಇಲ್ಲಿದೆ ನೋಡಿ ಎಕ್ಸ್​​ ಪೋಸ್ಟ್​:


ಏಪ್ರಿಲ್ 2026 ರ ಅವಧಿಯಲ್ಲಿ ಮನೀಷಾ ಮಂಢಾರೆ ತನ್ನ ಪುಣೆಯ ನಿವಾಸದಲ್ಲಿ ಆಯ್ಕೆಯಾದ ಕೆಲವು ವಿದ್ಯಾರ್ಥಿಗಳಿಗೆ ವಿಶೇಷ ಕೋಚಿಂಗ್ ತರಗತಿಗಳನ್ನು ನಡೆಸಿದ್ದಾಳೆ. ಈ ತರಗತಿಗಳಲ್ಲಿ ಆಕೆ ನೀಟ್ ಪರೀಕ್ಷೆಗೆ ಬರಲಿದ್ದ ಬಯಾಲಜಿ ಪ್ರಶ್ನೆಗಳನ್ನು ಮುಂಚಿತವಾಗಿಯೇ ಬಹಿರಂಗಪಡಿಸಿ, ವಿದ್ಯಾರ್ಥಿಗಳ ನೋಟ್‌ಬುಕ್ ಮತ್ತು ಪಠ್ಯಪುಸ್ತಕಗಳಲ್ಲಿ ಗುರುತು ಮಾಡಿಸಿದ್ದಾರೆ. ಮೇ 3 ರಂದು ನಡೆದ ನಿಜವಾದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗೆ ಈ ಪ್ರಶ್ನೆಗಳು ಸಂಪೂರ್ಣವಾಗಿ ತಾಳೆಯಾಗಿರುವುದು ಸಿಬಿಐ ತನಿಖೆಯಲ್ಲಿ ದೃಢಪಟ್ಟಿದೆ.

ಇದನ್ನೂ ಓದಿ: ಗಾರ್ಡನ್ ಸಿಟಿ ಟು ಗಾರ್ಬೇಜ್ ಸಿಟಿ: ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?

ಕಳೆದ 24 ಗಂಟೆಗಳಲ್ಲಿ ಸಿಬಿಐ ದೇಶದ 6 ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ಹಗರಣಕ್ಕೆ ಸಂಬಂಧಿಸಿದ ಲ್ಯಾಪ್‌ಟಾಪ್‌ಗಳು, ಬ್ಯಾಂಕ್ ಸ್ಟೇಟ್‌ಮೆಂಟ್‌ಗಳು, ಮೊಬೈಲ್ ಫೋನ್‌ಗಳು ಮತ್ತು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಈವರೆಗೆ ದೆಹಲಿ, ಜೈಪುರ, ಗುರುಗ್ರಾಮ, ನಾಸಿಕ್, ಪುಣೆ ಮತ್ತು ಅಹ್ಲಿಯಾನಗರದಿಂದ ಒಟ್ಟು 9 ಆರೋಪಿಗಳನ್ನು ಬಂಧಿಸಲಾಗಿದೆ. ಇವರಲ್ಲಿ ಐವರನ್ನು ಈಗಾಗಲೇ 7 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದ್ದು, ಟ್ರಾನ್ಸಿಟ್ ರಿಮಾಂಡ್ ಮೂಲಕ ಉಳಿದ ಆರೋಪಿಗಳನ್ನು ದೆಹಲಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Sat, 16 May 26

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us