ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಉನ್ನತ ಮಟ್ಟದ ಸಮಿತಿ ರಚನೆ, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವುದು ನಮ್ಮ ಬದ್ಧತೆ: ಧರ್ಮೇಂದ್ರ ಪ್ರಧಾನ್
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ಮಾತನಾಡಿದ್ದು, ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದಾಗಿ ತಿಳಿಸಿದ್ದಾರೆ. ಈ ಸಮಿತಿಯಲ್ಲಿ ಇಸ್ರೋದ ಮಾಜಿ ಅಧ್ಯಕ್ಷ ರಾಧಾಕೃಷ್ಣನ್ ಅಧ್ಯಕ್ಷರಾಗಿರಲಿದ್ದಾರೆ.
ನೀಟ್ ಪರೀಕ್ಷೆ(NEET Exam) ಯನ್ನು ಪಾರದರ್ಶಕವಾಗಿ ನಡೆಸುವುದು ನಮ್ಮ ಬದ್ಧತೆಯಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಇದಕ್ಕೂ ಮುನ್ನ ಎನ್ಟಿಎ ಪರೀಕ್ಷೆಗಳನ್ನು ಸುಧಾರಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ, ಈ ಸಮಿತಿಯು ಪರೀಕ್ಷೆಗಳಲ್ಲಿ ಯಾವ ಸುಧಾರಣೆಗಳನ್ನು ಮಾಡಬಹುದು ಅಥವಾ ಯಾವ ಬದಲಾವಣೆಗಳನ್ನು ತರಬಹುದು ಎಂಬುದರ ಕುರಿತು 2 ತಿಂಗಳೊಳಗೆ ಸಲಹೆಗಳನ್ನು ನೀಡಲಿದೆ.
ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ನಡೆದ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ವರದಿಗಳು ಮುನ್ನಲೆಗೆ ಬರುತ್ತಿರುವ ಸಂದರ್ಭದಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ. ದೇಶಾದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ.
ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಧರ್ಮೇಂದ್ರ ಪ್ರಧಾನ್, ಪರೀಕ್ಷೆಗಳಲ್ಲಿ ಯಾವುದೇ ತಪ್ಪುಗಳಾಗದಂತೆ ನೋಡಿಕೊಳ್ಳುವುದು, ಪರೀಕ್ಷಾ ವ್ಯವಸ್ಥೆಯನ್ನು ಪಾರದರ್ಶಕವಾಗಿಡುವುದು ನಮ್ಮ ಬದ್ಧತೆಯಾಗಿದೆ ಎಂದು ಬರೆದಿದ್ದಾರೆ.
ಮತ್ತಷ್ಟು ಓದಿ: ನೀಟ್, ನೆಟ್ ಅಕ್ರಮ; ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮುಖ್ಯಸ್ಥ ಸುಬೋಧ್ ಕುಮಾರ್ ವಜಾ
ಉನ್ನತ ಮಟ್ಟದ ತಜ್ಞರ ಸಮಿತಿ ಮೊದಲ ಹೆಜ್ಜೆಯಷ್ಟೇ ಎಂದಿರುವ ಸಚಿವರು ನಮ್ಮ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ. ಸಮಿತಿಯ ಸಲಹೆಗಳನ್ನು ಆಧರಿಸಿ, ಡೇಟಾ ಭದ್ರತೆ ಮತ್ತು ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸಲು ಹೊಸ ಸುಧಾರಣೆಗಳನ್ನು ತರಲಾಗುವುದು, ನಮಗೆ ವಿದ್ಯಾರ್ಥಿಗಳ ಹಿತಾಸಕ್ತಿಯೇ ಮುಖ್ಯ ಎಂದರು.
ಈ ಉನ್ನತ ಮಟ್ಟದ ಸಮಿತಿಯಲ್ಲಿ 7 ಮಂದಿ ಸದಸ್ಯರಿದ್ದಾರೆ. ಇದರ ನೇತೃತ್ವವನ್ನು ಇಸ್ರೋ ಮಾಜಿ ಅಧ್ಯಕ್ಷ ಡಾ. ರಾಧಾಕೃಷ್ಣನ್ ವಹಿಸಲಿದ್ದಾರೆ. ಈ ಸಮಿತಿಯು ಮುಂದಿನ ಎರಡು ತಿಂಗಳೊಳಗೆ ತನ್ನ ವರದಿಯನ್ನು ಸಚಿವಾಲಯಕ್ಕೆ ಸಲ್ಲಿಸಲಿದೆ.
Transparent, tamper-free and zero-error examinations is a commitment.
Setting up of the high-level committee of experts is the first of a series of step to improve efficiency of the examination process, put an end to all possible malpractices, strengthen data security protocols… https://t.co/LDUe4udfXY
— Dharmendra Pradhan (@dpradhanbjp) June 22, 2024
ಎನ್ಟಿಎ ನಡೆಸುವ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಮತ್ತು ಯಾವುದೇ ನ್ಯೂನತೆಗಳು ಇರದಂತೆ ನೋಡಿಕೊಳ್ಳಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಆ ವರದಿಯ ಆಧಾರದ ಮೇಲೆ ಡೇಟಾ ಸುರಕ್ಷತೆ, ಪ್ರೋಟೋಕಾಲ್ಗಳು ಮತ್ತು ಪರೀಕ್ಷೆಯ ಕಾರ್ಯನಿರ್ವಹಣೆ ಮತ್ತು ಎನ್ಟಿಎಯನ್ನು ಉತ್ತಮವಾಗಿ ಸುಧಾರಿಸಲು ನಮಗೆ ಸಾಧ್ಯವಾಗುತ್ತದೆ ಎಂದರು.
ಈ ಸಮಿತಿಯು ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆಗೆ ತನ್ನ ಸಲಹೆಗಳನ್ನು ನೀಡುತ್ತದೆ. ಲೂಪ್ ಹೋಲ್ಗಳನ್ನು ಗುರುತಿಸಲು ಸಮಿತಿಯು ಸಂಪೂರ್ಣ ಪರೀಕ್ಷಾ ವ್ಯವಸ್ಥೆಯನ್ನು ಪರಿಶೀಲಿಸುತ್ತದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:53 am, Sun, 23 June 24